ಸೋಲೇ ಇಲ್ಲ-ಗೆಲುವೇ ಎಲ್ಲ

Author : ಚಂದ್ರಕಾಂತ ಕರದಳ್ಳಿ

Pages 120

₹ 95.00




Year of Publication: 2017
Published by: ಸಪ್ನ ಬುಕ್ ಹೌಸ್
Address: 3ನೇ ಮುಖ್ಯ ರಸ್ತೆ. ಗಾಂಧಿನಗರ, ಬೆಂಗಳೂರು, 560009
Phone: 080 4011 4455

Synopsys

ಕಿರುಹೊತ್ತಿಗೆಯಲ್ಲಿ ನಮ್ಮ ದಿನನಿತ್ಯದ ಬದುಕಿನಲ್ಲಿ ಬರುವ ಸವಾಲುಗಳನ್ನು ಎದುರಿಸಲು ಮತ್ತು ಬದುಕಿಗೆ ಇರಬೇಕಾದ 51 ಸೋಪಾನಗಳನ್ನು ಲೇಖಕರು ಸರಳವಾದ ಭಾಷೆಯಲ್ಲಿ ಸಾಮಾನ್ಯ ಓದುಗರಿಗೂ ಅರ್ಥವಾಗುವ ರೀತಿಯಲ್ಲಿ ನಿರೂಪಿಸಿದ್ದಾರೆ. ಯಶಸ್ಸಿನ ಹಾದಿಯನ್ನು ಗುರುತಿಸುವುದು ಹೇಗೆ ಎಂಬುದನ್ನೂ ಲೇಖಕರು ಹೇಳಿದ್ದಾರೆ.

About the Author

ಚಂದ್ರಕಾಂತ ಕರದಳ್ಳಿ
(25 August 1952)

ಮಕ್ಕಳ ಸಾಹಿತ್ಯದಲ್ಲಿ ಗಣನೀಯ ಸಾಧನೆ ಮಾಡಿರುವ ಚಂದ್ರಕಾಂತ ಕರದಳ್ಳಿಯವರು‌ ಯಾದಗಿರಿ ಜಿಲ್ಲೆಯ ಶಹಾಪುರದವರು.‌ 1952ರ ಆಗಸ್ಟ್ 25ರಂದು ಜನಿಸಿದರು. ತಂದೆ ರಾಚಯ್ಯಸ್ವಾಮಿ ಕರದಳ್ಳಿ. ತಾಯಿ ಮುರಿಗೆಮ್ಮ. ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಿಂದ ಎಂ.ಎ. ಪದವಿ (1985) ಪದವಿ‌ ಪಡೆದ ಅವರು ಮೈಸೂರು ವಿಶ್ವವಿದ್ಯಾನಿಲಯದಿಂದ ಬಿ.ಎಡ್. ಪದವಿ ಗಳಿಸಿದರು. ಪ್ರಾಥಮಿಕ ಶಾಲಾ ಶಿಕ್ಷಕರಾಗಿ ವೃತ್ತಿ ಜೀವನ ಆರಂಭಿಸಿದ ಅವರು ನಂತರ ಪ್ರೌಢಶಾಲಾ ಶಿಕ್ಷಕರಾದರು. 2012ರಲ್ಲಿ ನಿವೃತ್ತರಾದರು.  ಮಕ್ಕಳ ಕತೆ, ಕಾದಂಬರಿ, ಕಾವ್ಯ ರಚಿಸಿರುವ ಕರದಳ್ಳಿ ಅವರಿಗೆ ಕೇಂದ್ರ ಸರ್ಕಾರದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಸಂದಿದೆ. ಯಾದಗಿರಿ ಜಿಲ್ಲಾ ಸಾಹಿತ್ಯ ಸಮ್ಮೇಳನದ ...

READ MORE

Related Books