ಶ್ರೀನಿವಾಸ ವೈದ್ಯ ಅವರ ಆಯ್ದ ಕಥೆಗಳು

Author : ಶ್ರೀನಿವಾಸ ವೈದ್ಯ

Pages 108

₹ 75.00




Year of Publication: 2009
Published by: ಅಕ್ಷರ ಪ್ರಕಾಶನ
Address: ಹೆಗ್ಗೋಡು, ಹೊನ್ನೇಶ್ವರ ಅಂಚೆ, ಸಾಗರ ತಾಲೂಕು, ಶಿವಮೊಗ್ಗ - 577417
Phone: 9480280401 / 08183-265476

Synopsys

ತಮ್ಮ ’ಹಳ್ಳ ಬಂತು ಹಳ್ಳ’ ಕಾದಂಬರಿಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪಡೆದಿರುವ ಶ್ರೀನಿವಾಸ ವೈದ್ಯ ಅವರು ಕತೆಗಾರ. ಅವರ ಆಯ್ದ ಕತೆಗಳನ್ನು ಈ ಸಂಕಲನದಲ್ಲಿ ಸೇರಿಸಲಾಗಿದೆ. ಕನ್ನಡ ಸಾಹಿತ್ಯ ಪ್ರವೇಶಿಸುವವರನ್ನು ಉದ್ದೇಶಿಸಿ ರೂಪಿಸಿದ ಈ ಸಂಕಲನದಲ್ಲಿ ವೈದ್ಯ ಅವರ ಪ್ರಾತಿನಿಧಿಕ ಕತೆಗಳನ್ನು ಸೇರಿಸಲಾಗಿದೆ.

About the Author

ಶ್ರೀನಿವಾಸ ವೈದ್ಯ
(04 April 1936 - 21 April 2023)

ನಗೆಬರಹ, ಹಾಸ್ಯಪ್ರಧಾನ ಸಾಹಿತ್ಯ ಹಾಗೂ ಲಲಿತ ಪ್ರಬಂಧ ಮುಂತಾದ ಪ್ರಕಾರಗಳಿಂದ ಒಮ್ಮೆಲೆ ಗಂಭೀರ ಸಾಹಿತ್ಯದೆಡೆಗೆ ಜೀಕಿಕೊಂಡ ಶ್ರೀನಿವಾಸ ವೈದ್ಯರು ಹುಟ್ಟಿದ್ದು ಧಾರವಾಡ ಜಿಲ್ಲೆಯ ನವಲಗುಂದದಲ್ಲಿ. ತಂದೆ ಬಿ.ಜಿ. ವೈದ್ಯ, ಸುಪ್ರಸಿದ್ಧ ವಕೀಲರು. ತಾಯಿ ಸ್ವಾತಂತ್ರ್ಯ ಹೋರಾಟಗಾರರ ಮನೆತನದಿಂದ ಬಂದ ಸುಂದರಾಬಾಯಿ. ಪ್ರಾರಂಭಿಕ ಶಿಕ್ಷಣದಿಂದ ಹಿಡಿದು ಎಂ.ಎ.ವರೆಗೂ ಧಾರವಾಡದಲ್ಲೇ ಶಿಕ್ಷಣ ಪೂರ್ಣ ಗೊಳಿಸಿದರು. 1959ರಲ್ಲಿ ಅರ್ಥಶಾಸ್ತ್ರ-ರಾಜ್ಯಶಾಸ್ತ್ರದಲ್ಲಿ ಎಂ.ಎ. ಪದವಿ ಪಡೆದ ಅವರು ಬ್ಯಾಂಕಿಂಗ್ ಪರೀಕ್ಷೆಯಾದ ಸಿ.ಎ.ಐ.ಐ.ಬಿ ಮತ್ತು ಭಾರತೀಯ ವಿದ್ಯಾಭವನದಿಂದ ಪಡೆದ ಪತ್ರಿಕೋದ್ಯಮ ಡಿಪ್ಲೊಮಾವನ್ನು ಪೂರೈಸಿದರು. ಮನೆಯಲ್ಲಿದ್ದುದು ಸಾಹಿತ್ಯಕ, ಸಾಂಸ್ಕೃತಿಕ ವಾತಾವರಣ. ಬಿಡುವಿನ ವೇಳೆಯಲ್ಲೆಲ್ಲಾ ಕೈಯಲ್ಲೊಂದು ಕಾದಂಬರಿ ಹಿಡಿದು ...

READ MORE

Related Books