ಸ್ತ್ರೀ ಸಮೂಹಶಕ್ತಿ ಸೇವಾದ ರೂವಾರಿ ಇಳಾ ಭಟ್‌

Author : ಗೀತಾ ಶೆಣೈ

Pages 96

₹ 80.00




Year of Publication: 2017
Published by: ನವಕರ್ನಾಟಕ ಪ್ರಕಾಶನ
Address: ಎಂಬೆಸ್ಸೆ ಸೆಂಟರ್‌, ಕ್ರೆಸೆಂಟ್‌ ರಸ್ತೆ, ಕುಮಾರಕೃಪಾ ಪಶ್ಚಿಮ, ಬೆಂಗಳೂರು

Synopsys

ಕಾಲೇಜು ದಿನಗಳಿಂದಲೇ ಸಮಾಜಸೇವೆಯಲ್ಲಿ ಒಲವು. ಮುಂದೆ ಕಾರ್ಮಿಕ ಕ್ಷೇತ್ರದಲ್ಲಿ ಅಸಾಧಾರಣ ಬದಲಾವಣೆ ಗಳನ್ನು ಬಯಸಿ, ಕಾರ್ಮಿಕರ ಪರವಾಗಿ ಹೋರಾಡಲು ಜೀವನವನ್ನೇ ಮುಡುಪಾಗಿಟ್ಟವರು ಇಳಾ ಭಟ್.

ಸ್ವ-ಉದ್ಯೋಗಸ್ಥ ಮಹಿಳಾ ಸಂಘಟನೆಗಳಂತಹ ಮಹತ್ವದ ಹಲವಾರು ಸಂಸ್ಥೆಗಳನ್ನು ಹುಟ್ಟುಹಾಕಿ ತನ್ಮೂಲಕ ತೀರಾ ಕೆಳವರ್ಗದ ಕೂಲಿ ಕಾರ್ಮಿಕ ಮಹಿಳೆಯರ ಬದುಕಿನಲ್ಲಿ ಆಶಾಕಿರಣವಾಗಿ ಬಂದು ಇಳಾ ನೆರವಾಗಿದ್ದಾರೆ. ಕಾರ್ಮಿಕ ಸಂಘಟನೆ, ಮಹಿಳಾ ಸೇವಾ ಸಹಕಾರಿ ಬ್ಯಾಂಕ್, ರಾಷ್ಟ್ರೀಯ ಕಾರ್ಮಿಕ ಆಯೋಗ ಮುಂತಾದ ಹಲವು ಸಂಘ-ಸಂಸ್ಥೆಗಳಲ್ಲಿ ಪದಾಧಿಕಾರಿಯಾಗಿ ಕೆಲಸ ಮಾಡಿದ್ದಾರೆ. ಹಲವಾರು ರಾಷ್ಟ್ರೀಯ-ಅಂತಾರಾಷ್ಟ್ರೀಯ ಪ್ರಶಸ್ತಿಗಳಿಸಿದ್ದಾರೆ. ಮಹಿಳೆಯರಿಗಾಗಿಯೇ ಲೆಕ್ಕವಿಲ್ಲದಷ್ಟು ಕಲ್ಯಾಣ ಯೋಜನೆಗಳನ್ನು ರೂಪಿಸಿ ಮಹಿಳಾ ಬೀದಿ ವ್ಯಾಪಾರಿಗಳಿಗೆ ಆರ್ಥಿಕ ಸಹಾಯ ಒದಗಿಸಿದ್ದಾರೆ. ಅಸಂಘಟಿತ ವಲಯದ ಶ್ರಮಜೀವಿ ಮಹಿಳೆಯರ ಬಗ್ಗೆ ಯಾವ ಯಾವ ನೆಲೆಗಳಿಂದ ಯೋಚಿಸಿ ಅವರ ಕ್ಷೇಮಾಭಿವೃದ್ಧಿಗೆ ತೊಡಗಬಹುದೋ ಅದೆಲ್ಲವನ್ನೂ ಇಳಾ ಭಟ್ ಮಾಡಿದ್ದಾರೆ. ಈ ಕೃತಿಯು ಇಳಾ ಭಟ್‌ ಅವರ ಜೀವನ ಹಾಗೂ ಸಾಧನೆಯ ಕುರಿತು ಸಂಕ್ಷಿಪ್ತವಾಗಿ ವಿವರಿಸಿದೆ.

About the Author

ಗೀತಾ ಶೆಣೈ
(13 June 1954)

ಗೀತಾ ಶೆಣೈ ಕನ್ನಡದ ಪ್ರಮುಖ ಲೇಖಕಿ. ಇವರು 1954 ಜೂಬ್ 13 ರಂದು ದಕ್ಷಿಣ ಜಿಲ್ಲೆಯಲ್ಲಿ ಜನಿಸಿದರು. ಹಂಪಿಯಿಂದ ಕನ್ನಡ ಭಾಷೆ ಮತ್ತು ಸಾಹಿತ್ಯದಲ್ಲಿ ಪಿಹೆಚ್.ಡಿ, ಪದವಿ ಪಡೆದಿದ್ದಾರೆ. ಇಂದಿರಾಗಾಂಧಿ ಮಹಿಳಾ ಅಧ್ಯಯನದಲ್ಲಿ ಸಿಡಬ್ಲ್ಯೂಇಡಿ ಕೋರ್ಸ್ ಮುಗಿಸಿದ್ದಾರೆ, ಜೀವನ ಚರಿತ್ರೆ, ಅನುವಾದ ಮತ್ತು ಮಹಿಳಾ ಅಧ್ಯಯನ ಇತ್ಯಾದಿ ಪ್ರಕಾರಗಳಲ್ಲಿ 20ಕ್ಕೂ ಹೆಚ್ಚು ಗ್ರಂಥಗಳನ್ನು ಪ್ರಕಟಿಸಿದ್ದಾರೆ. ಇವರ ಮೊದಲ ಕೃತಿ ಝುಂಪಾ ಲಾಹಿರಿಯವರ ಇಂಟರ್‍ಪ್ರಿಟರ್ ಆಫ್ ಮ್ಯಾಲಡೀಸ್ ಕಥಾಸಂಕಲನದ ಅನುವಾದ `ಬೇನೆಗಳ ದುಭಾಷಿ'.   ಬೇನೆಗಳ ದುಭಾಷಿ, ಪರಿಸರ ಅರ್ಥಶಾಸ್ತ್, ಮಧ್ಯಕಾಲೀನ ಭಾರತ, ಸಮಾಜಶಾಸ್ತ್ರದ ಸ್ಥಾಪಕ ಪಿತಾಮಹರು, ಪ್ರಾರಂಭಿಕ ಹಂತದ ...

READ MORE

Related Books