ಸುಲಭ ಇಂಗ್ಲಿಷ್

Author : ಎಲ್.ಎಸ್. ಶೇಷಗಿರಿರಾವ್

Pages 368

₹ 108.00




Year of Publication: 2014
Published by: ಸುಭಾಷ್ ಸ್ಟೋರ್ಸ್
Address: ಕರ್ನಾಟಕ ವಾಣಿಜ್ಯ ಮಂಡಳಿ ಒಕ್ಕೂಟದ ಕಟ್ಟಡ, ಕೆಂಪೇಗೌಡ ರಸ್ತೆ, ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಬಳಿ, ಬೆಂಗಳೂರು

Synopsys

ಖ್ಯಾತ ವಿಮರ್ಶಕ-ಸಾಹಿತಿ ಪ್ರೊ. ಎಲ್. ಎಸ್. ಶೇಷಗಿರಿರಾವ್ ಅವರ ಕೃತಿ-ಸುಲಭ ಇಂಗ್ಲಿಷ್. ಇಂಗ್ಲಿಷ್ ಒಂದು ಭಾಷೆಯಾಗಿ ಹೇಗೆ ಕಲಿಯಬಹುದು, ಇಂಗ್ಲಿಷ್ ಬಗ್ಗೆ ಇದ್ದ ಎಲ್ಲ ಪೂರ್ವಗ್ರಹಗಳನ್ನು, ತಪ್ಪು ಕಲ್ಪನೆಗಳನ್ನು ಲೇಖಕರು ನಿವಾರಿಸಿ, ಇಂಗ್ಲಿಷ್ ಕಲಿಕೆಯ ಸರಳ ವಿಧಾನವನ್ನು, ವ್ಯಾಕರಣದ  ಸೂತ್ರಗಳನ್ನು ಇಲ್ಲಿ ಕಾಣಿಸಿದ್ದಾರೆ. ಓದುಗರಲ್ಲಿ ಇಂಗ್ಲಿಷ್ ಭಾಷೆ ಕಲಿಯುವ ಉತ್ಸಾಹ , ಆಸಕ್ತಿ ಹೆಚ್ಚುವಂತೆ ಮಾಡುವ ಕಡೆಗೆ ಹೆಚ್ಚು ಒತ್ತು ನೀಡಿದ್ದು ಈ ಕೃತಿಯ ಹೆಚ್ಚುಗಾರಿಕೆ.

About the Author

ಎಲ್.ಎಸ್. ಶೇಷಗಿರಿರಾವ್
(16 February 1925 - 20 December 2019)

ಇಂಗ್ಲಿಷ್ ಪ್ರಾಧ್ಯಾಪಕರಾಗಿದ್ದ ಎಲ್.ಎಸ್. ಶೇಷಗಿರಿರಾವ್ ಅವರು ಪ್ರಬುದ್ಧ ವಿಮರ್ಶಕರೆಂದೇ ಖ್ಯಾತರು. ತಂದೆ ಸ್ವಾಮಿರಾವ್- ತಾಯಿ ಕಮಲಾಬಾಯಿ. 1925ರ ಫೆಬ್ರುವರಿ 16ರಂದು ಜನಿಸಿದರು. ಬೆಂಗಳೂರು ಮೈಸೂರುಗಳಲ್ಲಿ ವಿದ್ಯಾಭ್ಯಾಸ ಮಾಡಿದ ಇವರು ನಾಗಪುರ ವಿ.ವಿ.ಯಲ್ಲಿ ಇಂಗ್ಲಿಷ್ ಎಂ.ಎ. ಪದವೀಧರರಾದರು. ಕಾಲೇಜು ಶಿಕ್ಷಣ ಇಲಾಖೆಗೆ ಸೇರಿ ಕೋಲಾರ, ಮಡಿಕೇರಿ, ಬೆಂಗಳೂರುಗಳಲ್ಲಿ ಕಾಲೇಜು ಅಧ್ಯಾಪಕರಾಗಿ ಕೊನೆಯಲ್ಲಿ ಕೆಲವುಕಾಲ ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ಸೇವೆ ಸಲ್ಲಿಸಿ ನಿವೃತ್ತರಾದರು. 1947-50ರಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿಗಳಾಗಿ ಬಿ.ಎಂ.ಶ್ರೀ ಸ್ಮಾರಕ ಪ್ರತಿಷ್ಠಾನದ ಅಧ್ಯಕ್ಷರಾಗಿ ಕನ್ನಡ ಪುಸ್ತಕ ಪ್ರಾಧಿಕಾರದ ಪ್ರಥಮ ಅಧ್ಯಕ್ಷರಾಗಿ ಕೆಲಸ ಮಾಡಿದ್ದಾರೆ. ಕೇಂದ್ರ ಸಾಹಿತ್ಯ ಅಕಾಡೆಮಿ ...

READ MORE

Related Books