ಸ್ವಹಸ್ತಾಕ್ಷರದ ಶ್ರೀರಾಮಾಯಣ ದರ್ಶನಂ

Author : ಕುವೆಂಪು (ಕೆ.ವಿ. ಪುಟ್ಟಪ್ಪ)

Pages 1150

₹ 750.00




Year of Publication: 1997
Published by: ಕನ್ನಡ ಮತ್ತು ಸಂಸ್ಕೃತಿ ಇಲಾಖೆ
Address: ಕನ್ನಡ ಭವನ, ಜೆ.ಸಿ.ರಸ್ತೆ, ಬೆಂಗಳೂರು-560002

Synopsys

ಕನ್ನಡಕ್ಕೆ ಜ್ಞಾನಪೀಠ ಪ್ರಶಸ್ತಿ ತಂದುಕೊಟ್ಟ ಕುವೆಂಪು ಅವರ ಶ್ರೀರಾಮಾಯಣ ದರ್ಶನಂ ಪುಸ್ತಕದ ಹಸ್ತಾಕ್ಷರ ರೂಪ ಈ ಕೃತಿಯಲ್ಲಿದೆ. ಕುವೆಂಪು ಅವರು ರಚಿಸಿದ ರಾಮಾಯಣ ದರ್ಶನಂ ಪುಸ್ತಕವನ್ನು ಅವರು ಬರೆದ ಹಸ್ತಾಕ್ಷರವನ್ನು ಹಾಗೆಯೇ ಸಂಗ್ರಹಿಸಿ ಇಡಲು ಪ್ರಯತ್ನಿಸಿದ ವಿಶೇಷ ಪ್ರಯೋಗ ಇದಾಗಿದೆ. ಕಡಿಮೆ ತಿದ್ದುವಿಕೆ, ಮುದ್ದಾದ ಅಕ್ಷರಗಳು, ಪ್ರತಿ ಪುಟವನ್ನು ಬರೆದ ದಿನಾಂಕ ಎಲ್ಲವೂ ಈ ಕೃತಿಯಲ್ಲಿ ಮುದ್ರಿತವಾಗಿದೆ. 

About the Author

ಕುವೆಂಪು (ಕೆ.ವಿ. ಪುಟ್ಟಪ್ಪ)
(29 December 1904 - 11 November 1994)

ಕುವೆಂಪು ಎಂಬ ಕಾವ್ಯನಾಮದಿಂದ ಸಾಹಿತ್ಯ ರಚನೆ ಮಾಡಿದ ಕವಿ, ಪ್ರಖರ ವಿಚಾರವಾದಿ-ಚಿಂತಕ ಕುಪ್ಪಳ್ಳಿ ವೆಂಕಟಪ್ಪ ಪುಟ್ಟಪ್ಪ ಅವರು ಕನ್ನಡ ಸಾಹಿತ್ಯದ ಮೇರೆಗಳನ್ನು ವಿಸ್ತರಿಸಿದವರು. ತಂದೆ ವೆಂಕಟಪ್ಪಗೌಡ ತಾಯಿ ಸೀತಮ್ಮ. ತೀರ್ಥಹಳ್ಳಿ ತಾಲ್ಲೂಕಿನ ಕುಪ್ಪಳ್ಳಿಯವರಾದ ಪುಟ್ಟಪ್ಪ ಜನಿಸಿದ್ದು ಚಿಕ್ಕಮಗಳೂರು ಜಿಲ್ಲೆಯ ಹಿರೇಕೂಡಿಗೆಯಲ್ಲಿ 1904ರ ಡಿಸೆಂಬರ್ 29ರಂದು. ಮನೆಯಲ್ಲೇ ಖಾಸಗಿ ಮೇಷ್ಟರ ಮೂಲಕ ಪ್ರಾರಂಭಿಕ ವಿದ್ಯಾಭ್ಯಾಸದ ನಂತರ ತೀರ್ಥಹಳ್ಳಿಯಲ್ಲಿ ವಿದ್ಯಾಭ್ಯಾಸ ಮುಗಿಸಿ ಮೈಸೂರಿನಲ್ಲಿ ವೆಸ್ಲಿಯನ್ ಮಿಷನ್ ಹೈಸ್ಕೂಲ್, ಮಹಾರಾಜ ಕಾಲೇಜುಗಳಲ್ಲಿ ಓದಿ ಎಂ.ಎ. ಪದವಿ (1929) ಪಡೆದರು. ಮೈಸೂರು ಮಹಾರಾಜ ಕಾಲೇಜಿನಲ್ಲಿ ಅಧ್ಯಾಪಕ (1929) ಆಗಿ ಅನಂತರ ಕ್ರಮೇಣ ಉಪಪ್ರಾಧ್ಯಾಪಕ, ...

READ MORE

Related Books