‘ತಪ್ಪಿದ ಹೆಜ್ಜೆಗಳು’ ಡಾ. ವಿಜಯಾ ಸುಬ್ಬರಾಜ್ ಅವರ ಕಾದಂಬರಿ. ವಿಜಯಾ ಸುಬ್ಬರಾಜ್ ಕನ್ನಡ ಕಾವ್ಯವನ್ನು ಅರ್ಥಮಯ ಹಾಗೂ ಪ್ರೌಢವಾಗಿ ಬರೆಯುತ್ತಿರುವ ಮಹಿಳೆಯರಲ್ಲಿ ಪ್ರಮುಖರು. ಹೆಣ್ಣಿನ ಆಂತರಿಕ ಆಕಾಂಕ್ಷೆಗಳನ್ನೂ, ಪರಿಸರದ ಪ್ರಭಾವವನ್ನು ಅಪೂರ್ವವಾಗಿ ಚಿತ್ರಿಸಿರುವ ಈ ಕಾದಂಬರಿ ಓದುಗರಿಗೆ ಹೊಸ ಅನುಭವವನ್ನು ನೀಡಬಲ್ಲದು.
ವಿಜಯಾ ಸುಬ್ಬರಾಜ್ ಅವರು ಬೆಂಗಳೂರಿನಲ್ಲಿ 1940 ಏಪ್ರಿಲ್ 20ರಂದು ಜನಿಸಿದರು. ತಾಯಿ ಲಕ್ಷ್ಮಿ, ತಂದೆ ಸೀತಾರಾಂ. ಇಂಗ್ಲಿಷ್ ಮತ್ತು ಕನ್ನಡ ಭಾಷೆಯಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು ಕನ್ನಡ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿ ನಿವೃತ್ತರಾಗಿದ್ದಾರೆ. ಕನ್ನಡ ಸಾಹಿತ್ಯ ಕ್ಷೇತ್ರದ ಕೃಷಿಯಲ್ಲಿ ತೊಡಗಿಕೊಂಡಿರುವ ಇವರು ಬಿಯುಸಿಟಿಎ ನ ಉಪಾಧ್ಯಕ್ಷೆ, ಕನ್ನಡ ನುಡಿ ನಿಯತಕಾಲಿಕೆಯ ಸಂಪಾದಕಿ, ನಂಜನಗೂಡು ತಿರುಮಲಾಂಬ ಪ್ರಶಸ್ತಿ ಆಯ್ಕೆ ಸಮಿತಿಯ ಸದಸ್ಯರಾಗಿದ್ದಾರೆ. ಕರ್ನಾಟಕ ಲೇಖಕಿಯರ ಸಂಘದ ಉಪಾಧ್ಯಕ್ಷರಾಗಿಯೂ ಕಾರ್ಯ ನಿರ್ವಹಿಸಿದ್ದಾರೆ. ವಿಜಯಾ ಅವರಿಗೆ ಕನ್ನಡ ಸಾಹಿತ್ಯ ಪರಿಷತ್ತಿನ ಪುರಸ್ಕಾರ, ಕನ್ನಡ ಸಾಹಿತ್ಯ ಪರಿಷತ್ತಿನ ನೀಲಗಂಗಾ ಪ್ರಶಸ್ತಿ, ಅತ್ತಿಮಬ್ಬೆ ...
READ MORE