ತಪ್ಪುಗಳ ವೈನೋದಿಕ

Author : ಎಲ್.ಎಸ್. ಶೇಷಗಿರಿರಾವ್

₹ 55.00




Year of Publication: 2017
Published by: ಸಪ್ನ ಬುಕ್ ಹೌಸ್
Address: # 3ನೇ ಮುಖ್ಯರಸ್ತೆ, ಗಾಂಧಿನಗರ, ಬೆಂಗಳೂರು- 560009
Phone: 0804011 4455

Synopsys

ಶೆಕ್ಸ್ ಪಿಯರ್ ನ ನಾಟಕ ‘ದಿ ಎರರ್ ಆಫ್ ಕಾಮಿಡಿ’ ನಾಟಕದ ಚಿಕ್ಕ ವೃತ್ತಾಂತ ಎಂಬಂತೆ ಲೇಖಕ ಹಾಗೂ ವಿಮರ್ಶಕ ಡಾ. ಎಲ್.ಎಸ್. ಶೇಷಗಿರಿರಾವ್ ಅವರು ರಚಿಸಿದ ನಾಟಕವಿದು. ಮಕ್ಕಳಿಗೆ ತಿಳಿಯುವ ಹಾಗೆ ಸರಳ ಭಾಷೆಯಲ್ಲಿ ರಚಿಸಿದ್ದಾರೆ. ವಿಲಿಯಂ ಶೆಕ್ಸ್ ಪಿಯರನ ಆರಂಭದ ನಾಟಕಗಳ ಪೈಕಿ ಈ ನಾಟಕವೂ ಒಂದು. ಈ ನಾಟಕದ ಕೇಂದ್ರ ಬಿಂದು-ಅವಳಿ ಮಕ್ಕಳು. ಈ ಇಬ್ಬರು ಅವಳಿ ಮಕ್ಕಳನ್ನು ಗುರುತಿಸುವ ಕ್ರಿಯೆಯಲ್ಲಿ ಉಂಟಾಗಬಹುದಾದ ಗೊಂದಲಗಳನ್ನು ವಿನೋದಮಯವಾಗಿ ಸನ್ನಿವೇಶಗಳ ಮೂಲಕ ಚಿತ್ರಿಸಲಾಗಿದೆ. ಸರಳವಾದ ಭಾಷಾ ಲಾಲಿತ್ಯವಿದೆ.

About the Author

ಎಲ್.ಎಸ್. ಶೇಷಗಿರಿರಾವ್
(16 February 1925 - 20 December 2019)

ಇಂಗ್ಲಿಷ್ ಪ್ರಾಧ್ಯಾಪಕರಾಗಿದ್ದ ಎಲ್.ಎಸ್. ಶೇಷಗಿರಿರಾವ್ ಅವರು ಪ್ರಬುದ್ಧ ವಿಮರ್ಶಕರೆಂದೇ ಖ್ಯಾತರು. ತಂದೆ ಸ್ವಾಮಿರಾವ್- ತಾಯಿ ಕಮಲಾಬಾಯಿ. 1925ರ ಫೆಬ್ರುವರಿ 16ರಂದು ಜನಿಸಿದರು. ಬೆಂಗಳೂರು ಮೈಸೂರುಗಳಲ್ಲಿ ವಿದ್ಯಾಭ್ಯಾಸ ಮಾಡಿದ ಇವರು ನಾಗಪುರ ವಿ.ವಿ.ಯಲ್ಲಿ ಇಂಗ್ಲಿಷ್ ಎಂ.ಎ. ಪದವೀಧರರಾದರು. ಕಾಲೇಜು ಶಿಕ್ಷಣ ಇಲಾಖೆಗೆ ಸೇರಿ ಕೋಲಾರ, ಮಡಿಕೇರಿ, ಬೆಂಗಳೂರುಗಳಲ್ಲಿ ಕಾಲೇಜು ಅಧ್ಯಾಪಕರಾಗಿ ಕೊನೆಯಲ್ಲಿ ಕೆಲವುಕಾಲ ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ಸೇವೆ ಸಲ್ಲಿಸಿ ನಿವೃತ್ತರಾದರು. 1947-50ರಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿಗಳಾಗಿ ಬಿ.ಎಂ.ಶ್ರೀ ಸ್ಮಾರಕ ಪ್ರತಿಷ್ಠಾನದ ಅಧ್ಯಕ್ಷರಾಗಿ ಕನ್ನಡ ಪುಸ್ತಕ ಪ್ರಾಧಿಕಾರದ ಪ್ರಥಮ ಅಧ್ಯಕ್ಷರಾಗಿ ಕೆಲಸ ಮಾಡಿದ್ದಾರೆ. ಕೇಂದ್ರ ಸಾಹಿತ್ಯ ಅಕಾಡೆಮಿ ...

READ MORE

Related Books