ಲೇಖಕ ಎಂ. ಆರ್ ದತ್ತಾತ್ರಿ ಅವರ ಕಾದಂಬರಿ ’ತಾರಾಬಾಯಿಯ ಪತ್ರ’. ತಾರಾಬಾಯಿಯು ವಿಕ್ರಮನ ಅಪ್ಪನ ಪ್ರೇಯಸಿ. ಅವಳು ಬರೆದ ಎರಡು ಪತ್ರದಲ್ಲಿ, ದೇವತೆ, ದೇವಿ ಎಂದೆಲ್ಲ ಬರೆದು, ಹೊಡೆದು ಹಾಕಿ, ಅಕ್ಕ ಎಂಬ ಸಂಬೋಧನೆಯೇ ಉಳಿಯುತ್ತದೆ. ಇವು ಏನೆಲ್ಲ ಭಾವಗಳನ್ನು ಹೇಳುತ್ತವೆ? ಏಕಾಂತದೊಳಗಿನ ಲೋಕಾಂತ, ಮೌನದೊಳಗಣ ಮಾತು, ಸಂವಾದದೊಳಗಿನ ಮೌನವೇ ಕಥಾನಕವಾಗಿದೆ ಇಲ್ಲಿ.
ರಂಜನಿಗೆ ಇವನ ಕರೆ ಕೇಳಿತೆ? ಗಂಗಾ ತನ್ನ ಗಾಂಭೀರ್ಯದಿಂದಾಚೆ ಬಂದು ಮತ್ತೆ ಇವರಿಬ್ಬರೂ ಒಂದೇ ಪರಿಧಿಯಲ್ಲಿ ಬರುವರೆ? ರಂಜನಿಯನ್ನು ಕನವರಿಸುತ್ತಲೇ ಗಂಗೆಗೆ ಹಪಹಪಿಸುವ ವಿಕ್ರಮ ಆಯ್ಕೆ ಮಾಡಿಕೊಳ್ಳುವುದು ಯಾರನ್ನು? ಯಾವ ಅಂತಃಕರುಣೆಯ ಕರೆ ವಿಕ್ರಮನೊಳಗಿನ ಪ್ರೀತಿಯನ್ನು ಮತ್ತೆ ಸೋಕುತ್ತಲೇ ಆವರಿಸಿಕೊಳ್ಳುತ್ತದೆ? ಈ ಎಲ್ಲ ಪ್ರಶ್ನೆಗಳಿಗೆ ಉತ್ತರ ಕೃತಿಯಲ್ಲಿದೆ.
ವೃತ್ತಿಯಿಂದ ಸಾಫ್ಟ್ ವೇರ್ ಉದ್ಯೋಗಿಯಾಗಿದ್ದರೂ ತಮ್ಮ ಅಂಕಣ ಬರಹಗಳು, ಕವನ ಸಂಕಲನ, ಲಲಿತ ಪ್ರಬಂಧಗಳು ಜೊತೆಗೆ ತಮ್ಮ ಕಾದಂಬರಿ ’ದ್ವೀಪವ ಬಯಸಿ” ಮೂಲಕ ಸಾಹಿತ್ಯ ವಲಯಕ್ಕೆ ಪರಿಚಿತರು. ಹಲವು ವರ್ಷ ಅಮೇರಿಕಾದಲ್ಲಿ ಕೆಲಸ ಮಾಡಿದ್ದು, ಸದ್ಯ, ಬೆಂಗಳೂರಿನಲ್ಲಿ ವಾಸ. ಅಲೆಮಾರಿ ಕನಸುಗಳು (2002) ಮತ್ತು ಪೂರ್ವ ಪಶ್ಚಿಮ (2005) ಪ್ರಕಟಿತ ಕೃತಿಗಳು. ’ಪೂರ್ವ ಪಶ್ಚಿಮ’ ಕೃತಿಗೆ ಶಿವಮೊಗ್ಗ ಕರ್ನಾಟಕ ಸಂಘದಿಂದ 2006ನೇ ಸಾಲಿನ ಡಾ. ಹಾ.ಮಾ. ನಾಯಕ ಪ್ರಶಸ್ತಿ ಬಂದಿದೆ ...
READ MORE