ತೆರೆಯ ಮರೆಯಲ್ಲಿ

Author : ಶಿವರಾಮ ಕಾರಂತ

Pages 80

₹ 45.00




Year of Publication: 2019
Published by: ಗೀತಾಂಜಲಿ ಪುಸ್ತಕ ಪ್ರಕಾಶನ
Address: ಕಂದಾಯ ಭವನ, ನೂರಡಿ ರಸ್ತೆ, ರಾಜೇಂದ್ರನಗರ, ಶಿವಮೊಗ್ಗ- 577204
Phone: 9449886390

Synopsys

ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಡಾ. ಕೆ. ಶಿವರಾಮ ಕಾರಂತ ಅವರು ಬರೆದಿರುವ ಸಣ್ಣ ಕಥೆಗಳ ಸಂಕಲನ-ತೆರೆಯ ಮರೆಯಲ್ಲಿ-ಭಾಗ-3. ಕಾದಂಬರಿಗಳನ್ನು ಬರೆಯುವ ಮೂಲಕ ಅಭಿಮಾನಿ ಓದುಗರನ್ನು ಸೆಳೆದ ಲೇಖಕರು, ಸಣ್ಣ ಸಣ್ಣ ಕಥೆಗಳನ್ನೂ ಬರೆದು ಸಾಹಿತ್ಯ ವಲಯದಲ್ಲಿ ತಮ್ಮದೇ ಛಾಪು ಮೂಡಿಸಿದ್ದು, ಕಥಾವಸ್ತು, ನಿರೂಪಣಾ ಶೈಲಿ, ಸನ್ನಿವೇಶಗಳ ಜೋಡಣೆ, ಪಾತ್ರ ಸೃಷ್ಟಿ ಇಂತಹ ಅಂಶಗಳಿಂದಾಗಿ ಇಲ್ಲಿಯ ಕಥೆಗಳು ಓದುಗರ ಗಮನ ಸೆಳೆಯುತ್ತವೆ.

About the Author

ಶಿವರಾಮ ಕಾರಂತ
(10 October 1902 - 09 December 1997)

ತಮ್ಮ ಬಹುಮುಖ ಪ್ರತಿಭೆಯಿಂದ ಕನ್ನಡ ಸಾಹಿತ್ಯ ಶ್ರೀಮಂತಗೊಳಿಸಿದ ಕೋಟ ಶಿವರಾಮ ಕಾರಂತರ ಕೊಡುಗೆ ಅನನ್ಯ- ಅಭೂತಪೂರ್ವ. 1902ರ ಅಕ್ಟೋಬರ್ 10ರಂದು ಜನಿಸಿದರು. ತಂದೆ ಶೇಷ ಕಾರಂತ ತಾಯಿ ಲಕ್ಷ್ಮಮ್ಮ. ಕುಂದಾಪುರದಲ್ಲಿ ಪ್ರೌಢಶಾಲಾ ವ್ಯಾಸಂಗವನ್ನು ಮುಗಿಸಿ ಮಂಗಳೂರಿನ ಸರ್ಕಾರಿ ಕಾಲೇಜನ್ನು ಸೇರಿದಾಗಲೆ ಗಾಂಧೀಜಿಯವರ ಅಸಹಕಾರ ಚಳುವಳಿಗೆ ಧುಮುಕಿದರು. ಆಡು ಮುಟ್ಟದ ಸೊಪ್ಪಿಲ್ಲ ಎಂಬಂತೆ ಕಾರಂತರು ಪ್ರವೇಶಿಸದ ಕ್ಷೇತ್ರವಿಲ್ಲ. ಅವರು ಸರ್ಕಾರದಲ್ಲಿ ಅಥವಾ ಇತರರ ಆಶ್ರಯದಲ್ಲಿ ದುಡಿಯಲಿಲ್ಲ. ಒಂಟಿಸಲಗದಂತೆ ನಡೆದರು, ವ್ಯಾಪಾರ ಮಾಡಿದರು, ವಸಂತ, ವಿಚಾರವಾಣಿ ಪತ್ರಿಕೆ ನಡೆಸಿದರು. ಬಾಲವನ ಸ್ಥಾಪಿಸಿದ್ದರು. ಚಲನಚಿತ್ರ , ಯಕ್ಷಗಾನ ಪ್ರಯೋಗಗಳನ್ನು ನಡೆಸಿದ್ದರು, ಹೀಗೆ ...

READ MORE

Related Books