ದಿ.ಸನ್ ಆಫ್ ಫ್ರೀಡಂ

Author : ಬಸವರಾಜ ನಾಯ್ಕರ

Pages 240

₹ 299.00




Year of Publication: 2020
Published by: ವಿಶ್ವಕರ್ಮ ಪಬ್ಲಿಷರ್‍ಸ್ 
Address: ಪುಣೆ- 411037, (ಮಹಾರಾಷ್ಟ್ರ)

Synopsys

ದೇಶದ ಸ್ವಾತಂತ್ಯ್ರಕ್ಕಾಗಿ ಬ್ರಿಟಿಷರ ವಿರುದ್ಧ ಹೋರಾಡಿದ (1957-58) ನರಗುಂದದ ಭಾಸ್ಕರ್ ರಾವ್ ಭಾವೆ ಅವರ ದೇಶಾಭಿಮಾನ ಕುರಿತು ಲೇಖಕ ಪ್ರೊ. ಬಸವರಾಜ ನಾಯ್ಕರ ಅವರು  ಆಂಗ್ಲ ಭಾಷೆಯಲ್ಲಿ ಬರೆದ ಐತಿಹಾಸಿಕ ಕಾದಂಬರಿ ಇದು. ಐತಿಹಾಸಿಕ ಸಂಗತಿಗಳನ್ನು, ದಾಖಲೆಗಳನ್ನು ಆಧರಿಸಿ ಪಾತ್ರಗಳನ್ನು ಚಿತ್ರಿಸಲಾಗಿದೆ. ಓದುಗರ ಕಣ್ಣುಗಳ ಮುಂದೆ  ಪಾತ್ರಗಳು ಮಾತಾಡುತ್ತಾ, ವರ್ತಿಸುತ್ತವೆ ಎಂಬಷ್ಟು ಸಚಿತ್ರವಾಗಿ ಐತಿಹಾಸಿಕ ಚಿತ್ರಣವು ಈ ಕಾದಂಬರಿಯ ವೈಶಿಷ್ಟ್ಯ. 

About the Author

ಬಸವರಾಜ ನಾಯ್ಕರ
(01 August 1949)

ಡಾ. ಬಸವರಾಜ ನಾಯ್ಕರ್ ಅವರು ಮೂಲತಃ ಗದಗ (ಜನನ: 01-08-1949) ಜಿಲ್ಲೆಯ ನರಗುಂದದವರು. ತಂದೆ ಶಿವಶಂಕರಪ್ಪ ನಾಯ್ಕರ, ಧಾರವಾಡದಲ್ಲಿ ಪ್ರಾಥಮಿಕ ಶಿಕ್ಷಣ, ನರಗುಂದದಲ್ಲಿ ಪ್ರೌಢಶಿಕ್ಷಣ ಮತ್ತೇ ಧಾರವಾಡದಲ್ಲಿ ಪಿಯುಸಿಯಿಂದ ಕರ್ನಾಟಕ ವಿ.ವಿಯಲ್ಲಿ ಸ್ನಾತಕೋತ್ತರ ಪದವಿ (ಎಂ.ಎ-ಇಂಗ್ಲಿಷ್)  ಹಾಗೂ ಕ್ಯಾಲಿಫೋರ್ನಿಯಾದಿಂದ ಡಿ.ಲಿಟ್ ಪದವೀಧರರು.  ಗುಲಬರ್ಗಾ ವಿ.ವಿಯಲ್ಲಿ ಸಂಶೋಧನಾ ಸಹಾಯಕರಾಗಿ ವೃತ್ತಿ ಜೀವನ ಆರಂಭಿಸಿ ಅಲ್ಲಿಯೇ ಉಪನ್ಯಾಸಕರಾಗಿ ರೀಡರ್‍ ಆಗಿ ನಂತರ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ರೀಡರ್, ಪ್ರೊಫೆಸರ್, ಪ್ರೊಫೆಸರ್ ಎಮಿರಿಟಿಸ್ ಆಗಿ (2011-12) ನಿವೃತ್ತಿಯಾದರು.  ಅನುವಾದಿತ ಕೃತಿಗಳು:   ಪಡುವಣ ನಾಡಿನ ಪ್ರೇಮವೀರ- 1975, ಜೋಗೀಭಾವಿ-1976, ಕೊಳ್ಳದ ನೆರಳು-1978, ಹುಚ್ಚುಹೊಳೆ-1980, ನಿಗೂಢ ಸೌಧ (11 ಫ್ರೆಂಚ್ ಕಥೆಗಳ ಅನುವಾದ)-1982, ಗೋವರ್ಧನರಾಮ-1984, ಭಾರತೀಯ ಇಂಗ್ಲೀಷ್ ಸಾಹಿತ್ಯ ಚರಿತ್ರೆ-2006, ಕೆಂಪು ...

READ MORE

Related Books