ತುಘಲಕ್

Author : ಗಿರೀಶ ಕಾರ್ನಾಡ

Pages 112

₹ 100.00




Year of Publication: 2014
Published by: ಮನೋಹರ ಗ್ರಂಥ ಮಾಲಾ
Address: ಲಕ್ಷ್ಮಿ ಭವನ, ಸುಭಾಸ ರಸ್ತೆ, ಧಾರವಾಡ-1
Phone: 98454 47002

Synopsys

ಗಿರೀಶ ಕಾರ್ನಾಡರ ಅತ್ಯಂತ ಜನಪ್ರಿಯ ಮತ್ತು ಮಹತ್ವದ ರಂಗಕೃತಿ ’ತುಘಲಕ್;. ಭಾರತೀಯ ರಂಗಭೂಮಿಯಲ್ಲಿಯೇ ಈ ನಾಟಕಕ್ಕೆ ವಿಶೇಷ ಸ್ಥಾನ ಇದೆ. ಹಲವು ಭಾರತೀಯ ಭಾಷೆಗಳಿಗೆ ಅನುವಾದ ಆಗಿರುವ ಈ ಕೃತಿಯು ರಂಗಕ್ರಿಯೆ-ತಾತ್ವಿಕತೆ-ಕಟ್ಟಿರುವ ಕ್ರಮದ ಕಾರಣದಿಂದಾಗಿ ’ಮಾಸ್ಟರ್‌ ಪೀಸ್’ ಎಂದು ಗುರುತಿಸಲಾಗುತ್ತದೆ.

ಮಧ್ಯಕಾಲೀನ ಭಾರತದ ಕನಸುಗಾರ ದೊರೆ ಮಹ್ಮದ್ ಬಿನ್ ತುಘಲಕ್ ಈ ನಾಟಕದ ವಸ್ತು. ಐತಿಹಾಸಿಕ ವಸ್ತುವನ್ನು ಆಯ್ಕೆ ಮಾಡಿದ ಗಿರೀಶ್ ಅವರು ಅದನ್ನು ಆಧುನಿಕ ಸಂವೇದನೆಗೆ ಒಗ್ಗಿಸಿದ ರೀತಿ ಮಾತ್ರ ಅನನ್ಯ.

ಗಿರೀಶ್ ಅವರ ’ತುಘಲಕ್’ನ ಕನಸುಗಾರಿಕೆ, ಅದನ್ನು ನನಸಾಗಿಸುವ ದಾರಿಯಲ್ಲಿ ನಡೆಯುವ ಬದಲಾವಣೆ-ಬೆಳವಣಿಗೆ ’ನೆಹರು ಯುಗ’ದ ಸಂವಾದಿಯಾಗುವ ಹಾಗಿತ್ತು. ಸಮಕಾಲೀನ ಆಗುವ ಗುಣ ತುಘಲಕ್ ನಾಟಕದ ವಿಶೇಷ.

ತುಘಲಕ್ ನಾಟಕದಲ್ಲಿ ಸೈನಿಕನೊಬ್ಬ ’ನಮ್ಮ ದೊರೆ ಕಟ್ಟಿದ ಕೋಟೆ ಎಷ್ಟು ಭದ್ರವಾಗಿದೆ ಎಂದರೆ ಅದನ್ನು ಯಾರೂ ಗೆಲ್ಲಲು ಸಾಧ್ಯವಿಲ್ಲ. ಅದು ಒಳಗಿನ ಭಾರಕ್ಕೇ ಕುಸಿಯಬೇಕು’. 

ಸಾಹಿತ್ಯ ಕೃತಿಯಾಗಿ ಮತ್ತು ರಂಗಪಠ್ಯವಾಗಿ ತುಘಲಕ್ ಅಪಾರ ಜನಮನ್ನಣೆಯ ಜೊತೆಗೆ ವಿಮರ್ಶಕರ-ವಿದ್ವಾಂಸರ-ರಂಗಪ್ರಿಯರ ಮೆಚ್ಚುಗೆಗೆ ಪಾತ್ರವಾಗಿತ್ತ.

About the Author

ಗಿರೀಶ ಕಾರ್ನಾಡ
(19 May 1934 - 10 June 2019)

ನಾಟಕಕಾರ ಗಿರೀಶ್ ಕಾರ್ನಾಡ್ ಅವರು  ರಂಗಭೂಮಿ- ಚಲನಚಿತ್ರ ನಟರಾಗಿ, ನಿರ್ದೇಶಕರಾಗಿ,  ಸಂಗೀತ- ನಾಟಕ ಅಕಾಡೆಮಿಗಳ ಅಧ್ಯಕ್ಷರಾಗಿ ಅಂತರರಾಷ್ಟ್ರೀಯ ಮಟ್ಟದಲ್ಲಿ ಪ್ರಸಿದ್ಧರಾಗಿದ್ದಾರೆ. ಕತೆ, ವಿಮರ್ಶೆ ಮತ್ತು ತಮ್ಮ ಆತ್ಮಕತೆ ‘ಆಡಾಡತ ಆಯುಷ್ಯ’ಗಳನ್ನು ಬರೆದಿದ್ದರೂ ನಾಟಕಕಾರ ಎಂದೇ ಚಿರಪರಿಚಿತರು. ಗಿರೀಶ್ 1934ರ ಮೇ 19ರಂದು ಮಹಾರಾಷ್ಟ್ರದ ಮಾಥೇರದಲ್ಲಿ ಜನಿಸಿದರು. ಉತ್ತರಕನ್ನಡದ ಶಿರಸಿಯಲ್ಲಿ ಪ್ರಾಥಮಿ ಶಿಕ್ಷಣ ಧಾರವಾಡದ  ಬಾಸೆಲ್ ಮಿಶನ್ ಪ್ರೌಢಶಿಕ್ಷಣ, ಹಾಗೂ ಕರ್ನಾಟಕ ಕಾಲೇಜಿನಲ್ಲಿ ಪದವಿ ಶಿಕ್ಷಣ  ಪಡೆದ ಬಳಿಕ ಪ್ರತಿಷ್ಠಿತ ರೋಡ್ಸ್ ಸ್ಕಾಲರ್ಶಿಪ್ ಪಡೆದುಕೊಂಡು ಆಕ್ಸ್ ಫರ್ಡಿನಲ್ಲಿ ಹೆಚ್ಚಿನ ವ್ಯಾಸಂಗ ಮಾಡಿದರು.  ಆಕ್ಸ್ ಫರ್ಡಿನ ಡಿಬೇಟ್ ಕ್ಲಬ್ಬಿಗೆ ಅಧ್ಯಕ್ಷರಾಗಿ ಆಯ್ಕೆಯಾದ ...

READ MORE

Related Books