ವಾಸ್ತವವಾದಿ ಕಥಾನಕದ ನೆರಳು, ಬಂಡಾಯ ಹಾಗೂ ಸಾಮಾಜಿಕ ನೆಲೆಗಳಿಂದ ಇಲ್ಲಿನ ಕತೆಗಳು ಓದುಗರನ್ನು ಎದುರುಗೊಳ್ಳುತ್ತವೆ. ತುಂಗೆಯ ನೆಲದ ಆಸುಪಾಸಿನ ಭಾಷೆಯ ಸೊಗಡನ್ನು ಜೀವನ ವಿಧಾನವನ್ನು ಕಾಣಬಹುದು. ಕಥೆಗಾರರು-ಕಂನಾಡಿಗಾ ನಾರಾಯಣ.
ಕಥೆಗಾರ ಕಂನಾಡಿಗಾ ನಾರಾಯಣ ಅವರದು ಕನ್ನಡ ಕಥನ ಪರಂಪರೆಯಲ್ಲಿ ಒಂದು ವಿಶಿಷ್ಟ ಸಂವೇದನೆ. ಪ್ರಾಣಿಲೋಕದೊಳಗಿನ ಮನುಷ್ಯ ಜಗತ್ತು. ಮನುಷ್ಯನೊಳಗಿರುವ ಮೃಗಲೋಕ ಎರಡರ ತಾಕಲಾಟಗಳನ್ನೂ ಒಂದು ಹದದಲ್ಲಿ ಹಿಡಿಯುವ ಇವರ ಕತೆಗಳು ಹೊಸ ಜಗತ್ತೊಂದನ್ನು ತೆರೆದಿಡುತ್ತವೆ. ಹಾಗೆಂದು ಇವೆರಡೇ ಇವರ ಆಸಕ್ತಿಯ ವಿಷಯವಲ್ಲ. ಸಮಾಜದಲ್ಲಿ ಬೇರೆ ಬೇರೆ ಸಂದರ್ಭಗಳಲ್ಲಿ ತಮ್ಮದಲ್ಲದ ತಪ್ಪಿಗೆ ಸಂದಿಗ್ಧತೆಯನ್ನು ಅನುಭವಿಸುವ ಅನೇಕ ಬಗೆಯ ಜನರ ನೋವುಗಳನ್ನು ಸೂಕ್ಷ್ಮವಾಗಿ ನಾರಾಯಣ ಅವರು ಹಿಡಿದಿಡುತ್ತಾರೆ. ಇಂತಹ ಮನುಷ್ಯ ವೇದನೆಯ ಕತೆಗಳನ್ನು ಕಡೆಯುವಾಗ ಕೊಂಚ ಜನಪ್ರಿಯ ದಾರಿಯನ್ನು ಹಿಡಿಯುವ ನಾರಾಯಣ ಅವರ ಕಥೆಗಳು ಪ್ರಾಣಿಗಳ ಲೋಕದ ತಾಕಲಾಟಗಳನ್ನು ಕಾಣಿಸಹೊರಟಾಗ ...
READ MORE