ಉಡುಗೊರೆ

Author : ಎಂ.ಜಿ. ದೇಶಪಾಂಡೆ

Pages 578

₹ 500.00




Year of Publication: 2019
Published by: ಪೂಜಾ ಪ್ರಿಂಟರ್ಸ್
Address: ಬಚ್ಚಾ ಕಾಂಪ್ಲೆಕ್, ಸಂಗಮ ಚಿತ್ರಮಂದಿರ ಹತ್ತಿರ, ಬೀದರ-585402
Phone: 9964511663

Synopsys

ಡಾ. ಎಂ.ಜಿ. ದೇಶಪಾಂಡೆ ಅವರ ಸಮಗ್ರ ಕಥಾ ಸಂಕಲನ -ಉಡುಗೊರೆ. ಒಟ್ಟು 61 ಕಥೆಗಳನ್ನು ಸಂಕಲಿಸಿದೆ. ವಿಧಿ ಬರೆದ ಕಥೆ, ಜಿಗುಪ್ಸೆ, ಹೆಜ್ಜೆಗಳು ಫಲಿತಾಂಶ ,ಅಮ್ಮನ ಮನೆ, ಪ್ರಳಯ ,ದೀಪಾ ಮುಂತಾದ ಕಥೆಗಳು ಸಮಾಜದ ಚಿತ್ರಣವನ್ನು ಅರ್ಥಪೂರ್ಣವಾಗಿ ಚಿತ್ರಿಸುವಲ್ಲಿ ಯಶಸ್ವಿಯಾಗಿವೆ. ಇಲ್ಲಿನ ಹಲವಾರು ಕಥೆಗಳು ರಾಜ್ಯಮಟ್ಟದ ಅನೇಕ ಪತ್ರಿಕೆಗಳಲ್ಲಿ ಬೆಳಕು ಕಂಡಿವೆ . ಗುಲ್ಬರ್ಗ ವಿಶ್ವವಿದ್ಯಾಲಯದಿಂದ ‘ಹೆಣ, ಗಜ್ರಿ ಕಥೆಗಳಿಗೆ "ಉತ್ತಮ ಕಥೆ" ಬಹುಮಾನ ಬಂದಿದೆ. ಕಥಾ ವಸ್ತು, ನಿರೂಪಣಾ ಶೈಲಿ, ಪಾತ್ರಗಳ ಸೃಷ್ಟಿ, ಸನ್ನಿವೇಶಗಳ ಜೋಡಣೆ ಇತ್ಯಾದಿ ಸಾಹಿತ್ಯಕ ಅಂಶಗಳಿಂದ ಇಲ್ಲಿಯ ಕಥೆಗಳು ಓದುಗರ ಗಮನ ಸೆಳೆಯುತ್ತವೆ.

About the Author

ಎಂ.ಜಿ. ದೇಶಪಾಂಡೆ
(21 March 1952)

ಲೇಖಕ ಎಂ. ಜಿ. ದೇಶಪಾಂಡೆ (ಮಾಣಿಕರಾವ್ ಗೋವಿಂದರಾವ್ ದೇಶಪಾಂಡೆ) ಮೂಲತಃ  ಬೀದರನವರು. ಎಂ..ಫಿಲ್ ಹಾಗೂ ಪಿಎಚ್ ಡಿ ಪದವೀಧರರು.  ಇವರ ಕಾವ್ಯನಾಮ  ಲಕ್ಷ್ಮೀಸುತ. ಮಾಣಿಕ್ಯ ವಿಠಲ ಎಂಬುದು ಇವರ ವಚನಾಂಕಿತ. ತಂದೆ ಗೋವಿಂದರಾವ್ ದೇಶಪಾಂಡೆ, ತಾಯಿ ಲಕ್ಷ್ಮೀಬಾಯಿ ದೇಶಪಾಂಡೆ, ಸಹಕಾರ ಕೇಂದ್ರ ಬ್ಯಾಂಕಿನ ಅಧಿಕಾರಿಯಾಗಿ ನಿವೃತ್ತರಾಗಿದ್ದಾರೆ.  ಕನ್ನಡಾಂಬೆ ಮತ್ತು ಖ್ಯಾತಿ (1977) ಕನ್ನಡ ವಾರ ಪತ್ರಿಕೆಯ ಸಂಪಾದಕ ರಾಗಿದ್ದರು. ದೇಶಪಾಂಡೆ ಸಾಹಿತ್ಯಕ ಮತ್ತು ಸಾಂಸ್ಕೃತಿಕ ಪ್ರತಿಷ್ಠಾನದ ಸಂಸ್ಥಾಪಕ ಅಧ್ಯಕ್ಷರು, ಶಾಂತಿ, ಕನ್ನಡ ಗೆಳೆಯರ ಬಳಗ, ಬೀದರ ಜಿಲ್ಲಾ ಲೇಖಕರ ಬಳಗ, ಜ್ಞಾನ ತರಂಗ ವಿಚಾರ ವೇದಿಕೆ ಮುತ್ತಂಗಿ, ಮಂದಾರ ಕಲಾವಿದರ ವೇದಿಕೆ ಹೀಗೆ ಹಲವಾರು ಸಂಘಸಂಸ್ಥೆಗಳ ರೂವಾರಿಯಾಗಿದ್ದಾರೆ.  ಕೊರೊನಾ ವೈರಸ್ ಪರಿಣಾಮ ಲಾಕ್ ...

READ MORE

Related Books