ಉಪೇಂದ್ರನಾಥ ಅಶ್ಕರರ ಐದು ನೀಳ್ಗಥೆಗಳು

Author : ಪಾರ್ವತಿ ಜಿ. ಐತಾಳ್

Pages 104

₹ 100.00




Year of Publication: 2018
Published by: ಸೃಷ್ಟಿ ಪಬ್ಲಿಕೇಷನ್ಸ್
Address: ನಂ. 121, 13 ನೇ ಮುಖ್ಯರಸ್ತೆ, ಎಂ. ಸಿ. ಲೇಜೌಟ್, ವಿಜಯನಗರ, ಬೆಂಗಳೂರು 560040
Phone: 9845096668

Synopsys

ಉಪೇಂದ್ರನಾಥ ಅಶ್ವರರು ಮೂಲತಃ ಯಥಾರ್ಥವಾದಿ ಶೈಲಿಯ ಕತೆಗಾರರಾದರೂ ಮನೋವೈಜ್ಞಾನಿಕ ನೆಲೆಯಲ್ಲಿ ತಮ್ಮ ಕತೆಗಳನ್ನು ಚಿತ್ರಿಸಿದ್ದಾರೆ. ವ್ಯಕ್ತಿಯೊಬ್ಬನ ಮಾನಸಿಕ ತುಮುಲ-ತೊಳಲಾಟವನ್ನು ಮಾರ್ಮಿಕವಾಗಿ ವಿಶ್ಲೇಷಿಸುವ , ಕತೆಗಳಿವೆ. ಮನುಷ್ಯನ ಮೂಲಭೂತ ಅವಶ್ಯಕತೆಗಳಾದ ಹಸಿವು, ನೀರಡಿಕೆ, ವಸ್ತ್ರ, ವಸತಿ, ಇವುಗಳ ಪ್ರಾಪ್ತಿಗಿರುವ ವ್ಯವಸ್ಥೆಯಂತೆಯೇ ಇದಕ್ಕಿಂತಲೂ ಪ್ರಬಲವಾದ ’ಕಾಮ’ದ  ಹಸಿವಿಗೆ ನಮ್ಮ ಸಮಾಜದಲ್ಲಿ ಇರುವ ಮದ್ದಾದರೂ ಏನು?. ಎಂಬಂತಹ ಪ್ರಶ್ನೆಯನ್ನು ಎತ್ತುತ್ತಾರೆ.

ಅಶ್ವರ್‍ ಕತೆಗಳ ಕೇಂದ್ರ ಬಿಂದು ಭಾರತೀಯ ಸಮಾಜದ ಮಧ್ಯಮ ವರ್ಗ. ಇವರ ಪ್ರತಿಯೊಂದು ಕತೆಗಳು ಮಧ್ಯಮ ವರ್ಗದ ಬದುಕು – ಬವಣೆಯ ತಾಜಾ ಚಿತ್ರವನ್ನು ಪ್ರಸ್ತುತಪಡಿಸುತ್ತದೆ.

ಇವರ ಕತೆಗಳನ್ನು ಪಾರ್ವತಿ ಜಿ. ಐತಾಳ್ ಅವರು ಕನ್ನಡಕ್ಕೆ ತಂದಿದ್ದಾರೆ.

About the Author

ಪಾರ್ವತಿ ಜಿ. ಐತಾಳ್
(23 July 1957)

ಪಾರ್ವತಿ ಜಿ.ಐತಾಳ ಅವರು ಕಾಸರಗೋಡು ಜಿಲ್ಲೆಯ ಧರ್ಮತ್ತಡ್ಕ ಎಂಬ ಹಳ್ಳಿಯಲ್ಲಿ ಜುಲೈ 23, 1957ರಂದು ಜನಿಸಿದರು. 1981ರಲ್ಲಿ ಮೈಸೂರಿನ ಮಾನಸಗಂಗೋತ್ರಿಯಿಂದ  ಇಂಗ್ಲಿಷ್ ಸಾಹಿತ್ಯದಲ್ಲಿ ಎಂ.ಎ. ಪದವಿ ಪಡೆದರು. 2012ರಲ್ಲಿ ಕಣ್ಣೂರು ವಿಶ್ವವಿದ್ಯಾನಿಲಯದಿಂದ ಪಿಎಚ್.ಡಿ ಪದವಿಯನ್ನು ಪಡೆದರು. ಮಂಗಳೂರು ಜಿಲ್ಲೆಯ ಮುಲ್ಕಿಯ ವಿಜಯಾ ಕಾಲೇಜಿನಲ್ಲಿ ಏಳು ವರ್ಷಗಳವರೆಗೆ ಪ್ರಾಧ್ಯಾಪಕಿಯಾಗಿ ದುಡಿದ ಪಾರ್ವತಿಯವರು, ಶ್ರೀ ಗಂಗಾಧರ ಐತಾಳರೊಡನೆ ಮದುವೆಯಾದ ಬಳಿಕ 1988ರಲ್ಲಿ ಕುಂದಾಪುರದ ಭಂಡಾರ್ಕರ್ಸ್ ಕಾಲೇಜಿಗೆ ಬಂದು ಇಂಗ್ಲಿಷ್ ವಿಭಾಗದ ಮುಖ್ಯಸ್ಥೆಯಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಪಾರ್ವತಿ ಅವರು ಅನೇಕ ಸಣ್ಣ ಕಥೆ, ಕವನ, ನಾಟಕ ಬರೆದಿರುವರಾದರೂ, ಅನುವಾದ ಕ್ಷೇತ್ರದಲ್ಲಿ ಹೆಚ್ಚಿನ ...

READ MORE

Related Books