ಉರ್ದು ಸಾಹಿತ್ಯ

Author : ಡಿ. ಆರ್. ನಾಗರಾಜ್

Pages 506

₹ 250.00




Year of Publication: 2015

Synopsys

1990ರಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಏರ್ಪಡಿಸಿದ್ದ ಉರ್ದು ಮತ್ತು ಕನ್ನಡ ಬರಹಗಾರರ ಕಮ್ಮಟದಲ್ಲಿ ಸಿದ್ಧಗೊಂಡಿದ್ದ ಬರಹಗಳ ಸಂಕಲನ ಇದು. ಹದಿನೆಂಟು ಮತ್ತು ಹತ್ತೊಂಬತ್ತನೇ ಶತಮಾನದಲ್ಲಿ ಉರ್ದು ಸಾಹಿತ್ಯದಲ್ಲಿ ಬಂದ ಗಜಲ್, ಖಸೀದಾ ಮತ್ತು ಮರ್ಸಿಯಾ ಹಾಗೂ ಕಥಾ ಸಾಹಿತ್ಯದ ಪ್ರಾತಿನಿಧಿಕ ಕಾವ್ಯ ಮತ್ತು ಕತೆಗಳನ್ನು ಇಲ್ಲಿ ಕಾಣಬಹುದು.

About the Author

ಡಿ. ಆರ್. ನಾಗರಾಜ್
(20 February 1954 - 12 August 1998)

ಕನ್ನಡದ ಖ್ಯಾತ ವಿಮರ್ಶಕ ಹಾಗೂ ಚಿಂತಕರಾದ ಡಾ.ಡಿ.ಆರ್.ನಾಗರಾಜು ಅವರು ಹುಟ್ಟಿದ್ದು ದೊಡ್ಡಬಳ್ಳಾಪುರದಲ್ಲಿ. ತಂದೆ ರಾಮಯ್ಯ, ತಾಯಿ ಅಕ್ಕಯ್ಯಮ್ಮ. ದೊಡ್ಡಬಳ್ಳಾಪುರದಲ್ಲಿ ಪ್ರಾಥಮಿಕ ಶಿಕ್ಷಣ ಮುಗಿಸಿದ ನಾಗರಾಜ್ ಪ್ರೌಢ ವ್ಯಾಸಂಗಕ್ಕಾಗಿ ಬೆಂಗಳೂರಿಗೆ ಬಂದರು. ಅಂದಿನ ಸರ್ಕಾರಿ ಆರ್ಟ್ಸ್ ಮತ್ತು ಸೈನ್ಸ್ ಕಾಲೇಜಿನ ವಿದ್ಯಾರ್ಥಿಯಾದ ಅವರು ಆನರ್ಸ್ ಪದವಿಯನ್ನು ಅಲ್ಲಿಯೇ ಪಡೆದರು. ಮುಂದೆ ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ಎಂ.ಎ ಪದವಿ ಪಡೆದ ಡಿ.ಆರ್ ಸ್ವಲ್ಪ ಕಾಲ ಸಂಶೋಧಕ ವೃತ್ತಿಯಲ್ಲಿದ್ದು ಅಲ್ಲಿಯೇ ಕನ್ನಡ ಅಧ್ಯಾಪಕರಾದರು. ಪ್ರವಾಚಕರಾದರು, ಜೊತೆಗೆ ಕೈಲಾಸಂ ಪೀಠದ ಸಂದರ್ಶಕ ಪ್ರಾಧ್ಯಾಪಕರೂ ಆದರು. ಕನ್ನಡದ ವಿಮರ್ಶೆಗೆ ಸಾಂಸ್ಕೃತಿಕ ಆಯಾಮವನ್ನು ಒದಗಿಸಿದ ನಾಗರಾಜ್ ಅಮೆರಿಕದ ...

READ MORE

Related Books