ಊರುಕೇರಿ

Author : ಸಿದ್ಧಲಿಂಗಯ್ಯ

Pages 95

₹ 120.00
Year of Publication: 2012
Published by: ಅಂಕಿತ ಪುಸ್ತಕ
Address: 53, ಶ್ಯಾಮ್‌ಸಿಂಗ್ ಕಾಂಪ್ಲೆಕ್ಸ್, ಗಾಂಧಿಬಜಾರ್, ಮುಖ್ಯರಸ್ತೆ, ಬಸವನಗುಡಿ, ಬೆಂಗಳೂರು- 560 0046
Phone: 26617100, 26617755

Synopsys

ಕವಿ ಮತ್ತು ಸಾಮಾಜಿಕ ಹೋರಾಟಗಾರ ಡಾ. ಸಿದ್ಧಲಿಂಗಯ್ಯನವರ ಆತ್ಮಕಥಾನಕ ಇದು. ತುಂಬಾ ಸರಳ ಮಾತುಗಳಲ್ಲಿ ತಮ್ಮ ಬಾಲ್ಯ, ವಿದ್ಯಾಭ್ಯಾಸ, ತಮ್ಮ ಬಡತನ, ತಾವು ಪಟ್ಟ ಕಷ್ಟಗಳನ್ನು ಅವರು ಈ ಕೃತಿಯಲ್ಲಿ ಬಿಡಿಸಿಟ್ಟಿದ್ದಾರೆ.

ಈ ಕೃತಿಯ ಬಗ್ಗೆ ಹಿರಿಯ ವಿಮರ್ಶಕ ಡಿ.ಆರ್‌. ನಾಗರಾಜ ಅವರು ಹೀಗೆ ಬರೆದಿದ್ದಾರೆ-

ಈ ಆತ್ಮಕಥೆಯಲ್ಲಿ ದಲಿತಲೇಖಕರ ಕೃತಿಗಳಲ್ಲಿ ನಾವು ನಿರೀಕ್ಷಿಸಬಹುದಾದ ಅನೇಕ ಅಂಶಗಳಿವೆ. ಬಡತನ, ರೋಚ್ಚು, ಅವಮಾನ ಇತ್ಯಾದಿಗಳೆಲ್ಲ ಇವೆ. ಆದರೆ, ಇಡೀ ಕೃತಿಯಲ್ಲಿ ಹೊಸದಾದ, ಅನಿರೀಕಿತವಾದ ಒಂದು ಮುಖಾಂಗವೂ ಇದೆ. ಅದು ಬಡತನ ಮತ್ತು ಹಿಂಸೆಯ ಬಗ್ಗೆ ಭೀತಿಯ ಗೈರುಹಾಜರಿ. ಈ ಕೃತಿಯ ವಸ್ತು ದಲಿತಕೃತಿಗಳಿಗೆ ಸಾಮಾನ್ಯವಾದದ್ದು, ಸಹಜ ವಾದದ್ದು, ಆದರೆ, ಈ ವಸ್ತುವನ್ನು ನಿರ್ವಹಿಸುವ ಧ್ವನಿ ಭಿನ್ನವಾದದ್ದು, ಚೇತೋಹಾರಿಯಾದದು. ಬಡತನ, ಜಾತಿ ಅವಮಾನದ ಭೀತಿಗಳಿರದ ದಲಿತಕಥೆ ಸುಳ್ಳು. ಆದರೆ, ಅವನ್ನು ಪ್ರತಿಭೆಯಲ್ಲಿ ಲೇಖಕ ಗೆಲ್ಲುತ್ತಾನೆ ಎಂಬ ಮಾತು ನಿಜ. ತಮ್ಮ ಬದುಕಿನಲ್ಲಿನ ಹಸಿವು, ಅವಮಾನಗಳನ್ನು ಕೊಂಚ ವಕೀಕರಣ ಗೊಳಿಸುವ ಮೂಲಕ ಕವಿ ಸಿದ್ದಲಿಂಗಯ್ಯ, ಅವನ್ನು ದಾಟುವ ಮಾರ್ಗಗಳನ್ನು ತೋರಿಸುತ್ತಾರೆ. ಬಡತನ-ಹೋರಾಟಗಳ ಬದುಕು ಈ ಕಥಾನಕದಲ್ಲಿ ತುಂಟತನ, ವ್ಯಂಗ್ಯದಲ್ಲಿ ನಿರೂಪಿತವಾಗಿದೆ; ಆ ಮೂಲಕ ಪ್ರತಿಭೆಯು ಬಡತನವನ್ನು ಗೆಲ್ಲುವ ಹೊಸ ಆತ್ಮವಿಶ್ವಾಸವೊಂದನ್ನು ಆವಿಷ್ಕರಿಸುವ ಅಪರೂಪದ ಬರವಣಿಗೆ ಇದು’.

 

About the Author

ಸಿದ್ಧಲಿಂಗಯ್ಯ
(03 February 1954)

ದಲಿತ ಕವಿ ಎಂದು ಗುರುತಿಸಲಾಗುವ ಡಾ. ಸಿದ್ಧಲಿಂಗಯ್ಯ ಅವರು ದಲಿತ-ಬಂಡಾಯ ಸಾಹಿತ್ಯ ಚಳುವಳಿಯ ಪ್ರಮುಖ ಕವಿ-ಹೋರಾಟಗಾರ. ಮಾಗಡಿಯಲ್ಲಿ 1954ರ ಫೆಬ್ರುವರಿ 3ರಂದು ಜನಿಸಿದರು. ತಾಯಿ ವೆಂಕಮ್ಮ- ತಂದೆ ದೇವಯ್ಯ. ಬಡತನದಲ್ಲಿಯೇ ಗ್ರಾಮೀಣ ಭಾಗದ ಶಾಲೆಗಳಲ್ಲಿ ತಮ್ಮ ಪ್ರಾರಂಭಿಕ ಶಾಲಾ ವಿದ್ಯಾಭ್ಯಾಸ ಮಾಡಿ ಎಂ.ಎ. ಪದವಿಗಳಿಸಿ ಬೆಂಗಳೂರು ವಿಶ್ವವಿದ್ಯಾನಿಲಯದಲ್ಲಿ ಅಧ್ಯಾಪಕರಾಗಿ, ನಿರ್ದೇಶಕರಾಗಿ, ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿದ್ದಾರೆ. ಡಾ. ಅಂಬೇಡ್ಕರ್ ಅಧ್ಯಯನ ಮತ್ತು ಸಂಶೋಧನಾ ಕೇಂದ್ರದಲ್ಲಿ ನಿರ್ದೇಶಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಕನ್ನಡ ಅಭಿವೃದ್ಧಿ ಪ್ರಾಧಿಕಾರದಲ್ಲಿ ಸೇವೆ ಸಲ್ಲಿಸಿದ ನಂತರ ಸಿದ್ಧಲಿಂಗಯ್ಯನವರು ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾಗಿದ್ದರು. ನಡೆದ ಅಖಿಲ ಕರ್ನಾಟಕ ...

READ MORE

Related Books