ಊರು ಕೇರಿ-೨

Author : ಸಿದ್ಧಲಿಂಗಯ್ಯ

Pages 188

₹ 120.00




Year of Publication: 2012
Published by: ಅಂಕಿತ ಪುಸ್ತಕ
Address: 53, ಶ್ಯಾಮ್‌ಸಿಂಗ್ ಕಾಂಪ್ಲೆಕ್ಸ್, ಗಾಂಧಿಬಜಾರ್, ಮುಖ್ಯರಸ್ತೆ, ಬಸವನಗುಡಿ, ಬೆಂಗಳೂರು- 560 0046
Phone: 26617100, 26617755

Synopsys

ದಲಿತಕವಿ ಡಾ. ಸಿದ್ಧಲಿಂಗಯ್ಯ ಅವರ ಆತ್ಮಕತೆ ಊರು ಕೇರಿ’ಯ ಎರಡನೆಯ ಭಾಗ. ಮೊದಲ ಭಾಗಕ್ಕೆ ದೊರೆತ ಅತ್ಯಪೂರ್ವ ಪ್ರತಿಕ್ರಿಯೆಯಿಂದಾಗಿ ಕವಿಗಳು ಎರಡನೆಯ ಭಾಗ ಪ್ರಕಟಿಸಿದ್ದಾರೆ.

ಹಿರಿಯ ವಿಮರ್ಶಕ ಡಿ.ಆರ್‌. ನಾಗರಾಜ ಅವರು ’ಸಿದ್ಧಲಿಂಗಯ್ಯನವರ ಆತ್ಮಕತೆಯಲ್ಲಿ ದಲಿತ ಲೇಖಕರ ಕೃತಿಗಳಲ್ಲಿ ನಾವು ನಿರೀಕ್ಷಿಸಬಹುದಾದ ಅನೇಕ ಅಂಶಗಳಿವೆ. ಬಡತನ, ರೊಚ್ಚು, ಅವಮಾನ ಇತ್ಯಾದಿಗಳೆಲ್ಲ ಇವೆ. ಆದರೆ ಇಡೀ ಕೃತಿಯಲ್ಲಿ ಹೊಸದಾದ, ಅನಿರೀಕ್ಷಿತವಾದ ಒಂದು ಮುಖ್ಯಾಂಗವೂ ಇದೆ. ಅದು ಬಡತನ ಮತ್ತು ಹಿಂಸೆಯ ಬಗ್ಗೆ ಭೀತಿಯ ಗೈರುಹಾಜರಿ. ಈ ಕೃತಿಯ ವಸ್ತು ದಲಿತ ಕೃತಿಗಳಿಗೆ ಸಾಮಾನ್ಯವಾದದ್ದು, ಸಹಜವಾದದ್ದು. ಆದರೆ ಈ ವಸ್ತುವನ್ನು ನಿರ್ವಹಿಸುವ ಧ್ವನಿ ಭಿನ್ನವಾದದ್ದು, ಚೇತೋಹಾರಿಯಾದದ್ದು. ಬಡತನ, ಜಾತಿ, ಅವಮಾನಗಳ ಭೀತಿಗಳಿರದ ದಲಿತ ಕತೆ ಸುಳ್ಳು. ಆದರೆ ಅವನ್ನು ಪ್ರತಿಭೆಯಲ್ಲಿ ಲೇಖಕ ಗೆಲ್ಲುತ್ತಾನೆ ಎಂಬ ಮಾತು ನಿಜ. ತಮ್ಮ ಬದುಕಿನಲ್ಲಿನ ಹಸಿವು, ಅವಮಾನಗಳನ್ನು ಕೊಂಚ ವಕೀಕರಣಗೊಳಿಸುವ ಮೂಲಕ ಕವಿ ಸಿದ್ದಲಿಂಗಯ್ಯ ಅವನ್ನು ದಾಟುವ ಮಾರ್ಗಗಳನ್ನು ತೋರಿಸುತ್ತಾರೆ. ಈ ದೃಷ್ಟಿಯಿಂದ “ಊರುಕೇರಿ'ಯಲ್ಲಿ ದಲಿತ ವ್ಯಕ್ತಿತ್ವವನ್ನು ಹೊಸ ರೀತಿಯಲ್ಲಿ ಪ್ರತಿಮೀಕರಿಸುವ ಪ್ರಯತ್ನವಿದೆ’ ಎಂದು ಅಭಿಪ್ರಾಯಪಟ್ಟಿದ್ದಾರೆ.

About the Author

ಸಿದ್ಧಲಿಂಗಯ್ಯ
(03 February 1954)

ದಲಿತ ಕವಿ ಎಂದು ಗುರುತಿಸಲಾಗುವ ಡಾ. ಸಿದ್ಧಲಿಂಗಯ್ಯ ಅವರು ದಲಿತ-ಬಂಡಾಯ ಸಾಹಿತ್ಯ ಚಳುವಳಿಯ ಪ್ರಮುಖ ಕವಿ-ಹೋರಾಟಗಾರ. ಮಾಗಡಿಯಲ್ಲಿ 1954ರ ಫೆಬ್ರುವರಿ 3ರಂದು ಜನಿಸಿದರು. ತಾಯಿ ವೆಂಕಮ್ಮ- ತಂದೆ ದೇವಯ್ಯ. ಬಡತನದಲ್ಲಿಯೇ ಗ್ರಾಮೀಣ ಭಾಗದ ಶಾಲೆಗಳಲ್ಲಿ ತಮ್ಮ ಪ್ರಾರಂಭಿಕ ಶಾಲಾ ವಿದ್ಯಾಭ್ಯಾಸ ಮಾಡಿ ಎಂ.ಎ. ಪದವಿಗಳಿಸಿ ಬೆಂಗಳೂರು ವಿಶ್ವವಿದ್ಯಾನಿಲಯದಲ್ಲಿ ಅಧ್ಯಾಪಕರಾಗಿ, ನಿರ್ದೇಶಕರಾಗಿ, ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿದ್ದಾರೆ. ಡಾ. ಅಂಬೇಡ್ಕರ್ ಅಧ್ಯಯನ ಮತ್ತು ಸಂಶೋಧನಾ ಕೇಂದ್ರದಲ್ಲಿ ನಿರ್ದೇಶಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಕನ್ನಡ ಅಭಿವೃದ್ಧಿ ಪ್ರಾಧಿಕಾರದಲ್ಲಿ ಸೇವೆ ಸಲ್ಲಿಸಿದ ನಂತರ ಸಿದ್ಧಲಿಂಗಯ್ಯನವರು ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾಗಿದ್ದರು. ನಡೆದ ಅಖಿಲ ಕರ್ನಾಟಕ ...

READ MORE

Related Books