ಉಯ್ಯಾಲೆ

Author : ಚದುರಂಗ (ಎಂ. ಸುಬ್ರಹ್ಮಣ್ಯರಾಜೇ ಅರಸ್)

Pages 257

₹ 200.00




Year of Publication: 2017
Published by: ಐಬಿಎಚ್ ಪ್ರಕಾಶನ
Address: # 18/1, 1ನೇ ಮಹಡಿ, 2ನೇ ಮುಖ್ಯರಸ್ತೆ, ಎನ್.ಆರ್. ಕಾಲೊನಿ, ಬೆಂಗಳೂರು-560019,
Phone: 0802667 6003

Synopsys

ಖ್ಯಾತ ಕಾದಂಬರಿಕಾರ ಚದುರಂಗ ಅವರ ಕಾದಂಬರಿ-ಉಯ್ಯಾಲೆ. ಉಯ್ಯಾಲೆ ಹೆಸರಿನಲ್ಲೇ ನಿರ್ಮಾಣಗೊಂಡ ಚಲನಚಿತ್ರಕ್ಕೆ ಅವರೇ ಚಿತ್ರಕಥೆಯನ್ನು ಬರೆದರು. ಈ ಚಿತ್ರಕ್ಕೆ ಉತ್ತಮ ಚಿತ್ರಕಥಾ ಲೇಖಕ ಪ್ರಶಸ್ತಿಯೂ ಬಂದಿದೆ. ಹೆಣ್ಣುಗಂಡಿನ ಸೂಕ್ಷ್ಮ ಮನಸ್ಸಿನ ಚಿತ್ರಣ.ವನ್ನು ಕಾದಂಬರಿ ಒಳಗೊಂಡಿದೆ. ಕಥಾವಸ್ತು, ನಿರೂಪಣಾ ಶೈಲಿ, ಪಾತ್ರಗಳ ಸೃಷ್ಟಿ, ಸನ್ನಿವೇಶಗಳ ಜೋಡಣೆ, ಪರಿಣಾಮಕಾರಿ ಸಂಭಾಷಣೆ ಇತ್ಯಾದಿ ಸಾಹಿತ್ಯಕ ಅಂಶಗಳಿಂದ ಈ ಕಾದಂಬರಿಯು ಓದುಗರ ಗಮನ ಸೆಳೆಯುತ್ತದೆ.

About the Author

ಚದುರಂಗ (ಎಂ. ಸುಬ್ರಹ್ಮಣ್ಯರಾಜೇ ಅರಸ್)
(01 January 1916 - 19 October 1998)

ಸಣ್ಣ ಕಥೆಗಾರ, ಕಾದಂಬರಿಕಾರ, ನಾಟಕಕಾರ ಆದ ಚದುರಂಗರು (ಎಂ. ಸುಬ್ರಹ್ಮಣ್ಯರಾಜೇ ಅರಸ್ ಅವರು) ಕನ್ನಡದ ಮಹತ್ವದ ಲೇಖಕರಲ್ಲಿ ಒಬ್ಬರು. ಮೈಸೂರು ಜಿಲ್ಲೆಯ ಹುಣಸೂರು ತಾಲ್ಲೂಕಿನ ಕಲ್ಲಹಳ್ಳಿ ಗ್ರಾಮದಲ್ಲಿ 1916ರ ಜನವರಿ 1ರಂದು ಜನಿಸಿದರು. ತಂದೆ ಮುದ್ದುರಾಜೇ ಅರಸ್ ಮತ್ತು ತಾಯಿ ಮರುದೇವಿ ಅರಸ್. ರಾಜಮನೆತನದ ಒಡನಾಟವಿದ್ದ ಇವರ ವಿದ್ಯಾಭ್ಯಾಸ ಮೈಸೂರಿನಲ್ಲಿ ನಡೆಯಿತು. ಮೈಸೂರಿನ ರಾಯಲ್ ಸ್ಕೂಲ್, ಬೆಂಗಳೂರಿನ ಇಂಟರ್ ಮೀಡಿಯೇಟ್  ಕಾಲೇಜು, ಮೈಸೂರು ಮಹಾರಾಜ ಕಾಲೇಜುಗಳಲ್ಲಿ ವ್ಯಾಸಂಗ ಮಾಡಿ ಬಿ.ಎ. ಪದವಿ ಪಡೆದರು. ಕಾನೂನು ಮತ್ತು ಸ್ನಾತಕೋತ್ತರ ಶಿಕ್ಷಣಕ್ಕಾಗಿ ಪುಣೆಗೆ ಹೋದರು. ಕಾರಣಾಂತರಗಳಿಂದ ಶಿಕ್ಷಣ ಪೂರ್ಣಗೊಳ್ಳಲಿಲ್ಲ. ಗಾಂಧಿ ...

READ MORE

Related Books