ವಕ್ರತುಂಡೋಕ್ತಿ

Author : ವಿಶ್ವೇಶ್ವರ ಭಟ್

Pages 192

₹ 95.00
Year of Publication: 2011
Published by: ಅಂಕಿತ ಪುಸ್ತಕ
Address: 53, ಶ್ಯಾಮ್ಸಿಂಗ್ ಕಾಂಪ್ಲೆಕ್ಸ್, ಗಾಂಧಿಬಜಾರ್ ಮುಖ್ಯರಸ್ತೆ, ಬಸವನಗುಡಿ, ಬೆಂಗಳೂರು - 560 004
Phone: 080 - 2661 710

Synopsys

ವಿಶ್ವೇಶ್ವರ ಭಟ್ಟರ ಈ ವಕ್ರತುಂಡೋಕ್ತಿಯ ಸಾಲು ಒಂದು ಅಥವಾ ಎರಡು ಸಾಲುಗಳದ್ದು ಮಾತ್ರ. ಗಾತ್ರದಲ್ಲಿ ಚಿಕ್ಕದಾದರೂ ಚೆಲುವಾಗಿವೆ.  ಒಂದೊಂದೂ ತಿಳಿಹಾಸ್ಯದ ಬುಗ್ಗೆ. ಕೆಲವು ವಿನ್ಯಾಸದಲ್ಲಿ ಗದ್ಯದಂತೆ ಕಂಡರೂ ಪರಿಣಾಮದಲ್ಲಿ ಒಳ್ಳೆಯ ಹನಿಗವನಗಳಂತಿವೆ. ಅವರು ನಡೆಸುತ್ತಿದ್ದ ಪತ್ರಿಕೆಗಳಲ್ಲಿ ಈ ವಕ್ರತುಂಡೋಕ್ತಿಗಳು ಪ್ರಕಟಣೆ ಕಂಡಿದ್ದವು. 

About the Author

ವಿಶ್ವೇಶ್ವರ ಭಟ್

ವಿಶ್ವೇಶ್ವರ ಭಟ್ ಅವರು ಉತ್ತರಕನ್ನಡ ಜಿಲ್ಲೆಯ  ಕುಮಟಾದ ಮೂರೂರಿನವರು. ಓದಿದ್ದು ಎಂ.ಎಸ್ಸಿ. ಹಾಗೂ ಎಂ.ಎ. ನಾಲ್ಕು ಚಿನ್ನದ ಪದಕ ವಿಜೇತರು, ಇಂಗ್ಲೆಂಡಿನಲ್ಲಿ ಪತ್ರಿಕೋದ್ಯಮದಲ್ಲಿ ಉನ್ನತ ವ್ಯಾಸಂಗ, ಸಂಯುಕ್ತ ಕರ್ನಾಟಕ, ಕನ್ನಡಪ್ರಭದಲ್ಲಿ ಉಪಸಂಪಾದಕರಾಗಿ ವೃತ್ತಿ ಜೀವನ ಆರಂಭ, ವಿಜಯ ಕರ್ನಾಟಕ, ಕನ್ನಡ ಪ್ರಭ ಹಾಗೂ ಸುವರ್ಣ ನ್ಯೂಸ್ ಚಾನಲ್‌ನ ಪ್ರಧಾನ ಸಂಪಾದಕ, ಏಷಿಯನ್ ಕಾಲೇಜ್ ಆಫ್ ಜರ್ನಲಿಸಮ್‌ನಲ್ಲಿ ಅಸಿಸ್ಟೆಂಟ್ ಪ್ರೊಫೆಸರ್, ಕೇಂದ್ರ ಪ್ರವಾಸೋದ್ಯಮ ಹಾಗೂ ಸಂಸ್ಕೃತಿ ಖಾತೆ ಸಚಿವರಿಗೆ ವಿಶೇಷ ಕರ್ತವ್ಯ ಅಧಿಕಾರಿಯಾಗಿಯೂ ಸೇವೆ ಸಲ್ಲಿಸಿದ್ದಾರೆ. ಸದ್ಯ,  “ವಿಶ್ವವಾಣಿ' ದಿನಪತ್ರಿಕೆಯ ಪ್ರಧಾನ ಸಂಪಾದಕರು. 'ನೂರೆಂಟು ವಿಶ್ವ, 'ಇದೇ ಅಂತರಂಗ ಸುದ್ದಿ' ...

READ MORE

Related Books