ವಿಜ್ಞಾನ ಪ್ರಪಂಚ ಭಾಗ-1 (ಈ ಜಗತ್ತು)

Author : ಶಿವರಾಮ ಕಾರಂತ

Pages 593

₹ 536.00




Year of Publication: 2015
Published by: ಸಪ್ನ ಬುಕ್ ಹೌಸ್
Address: ಆರ್.ಓ. #11, 3ನೇ ಮುಖ್ಯರಸ್ತೆ, ಗಾಂಧಿನಗರ, ಬೆಂಗಳೂರು-9

Synopsys

ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಡಾ. ಕೆ., ಶಿವರಾಮ ಕಾರಂತ ಅವರ ಕೃತಿ-ವಿಜ್ಞಾನ ಪ್ರಪಂಚ ಭಾಗ-1 (ಈ ಜಗತ್ತು). ವಿಜ್ಞಾನ ಪ್ರಪಂಚ ಸರಣಿ ಮಾಲಿಕೆಯಡಿ ಪ್ರಕಟಿತ ಈ ಪುಸ್ತಕವು ಭೌತಿಕ ಜಗತ್ತಿನ ಸಂಪೂರ್ಣ ಮಾಹಿತಿ ನೀಡುತ್ತದೆ. ವಿವಿಧ ಮೂಲಗಳಿಂದ ಸಂಗ್ರಹಿಸಿದ ಈ ಮಾಹಿತಿಯು ಜ್ಞಾನಾರ್ಜನೆಗೆ, ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸಲು, ಸಂದರ್ಶನಗಳನ್ನು ಎದುರಿಸಲು ಸತ್ಯಂತ ಉಪಯುಕ್ತವಾಗಿದೆ.

About the Author

ಶಿವರಾಮ ಕಾರಂತ
(10 October 1902 - 09 December 1997)

ತಮ್ಮ ಬಹುಮುಖ ಪ್ರತಿಭೆಯಿಂದ ಕನ್ನಡ ಸಾಹಿತ್ಯ ಶ್ರೀಮಂತಗೊಳಿಸಿದ ಕೋಟ ಶಿವರಾಮ ಕಾರಂತರ ಕೊಡುಗೆ ಅನನ್ಯ- ಅಭೂತಪೂರ್ವ. 1902ರ ಅಕ್ಟೋಬರ್ 10ರಂದು ಜನಿಸಿದರು. ತಂದೆ ಶೇಷ ಕಾರಂತ ತಾಯಿ ಲಕ್ಷ್ಮಮ್ಮ. ಕುಂದಾಪುರದಲ್ಲಿ ಪ್ರೌಢಶಾಲಾ ವ್ಯಾಸಂಗವನ್ನು ಮುಗಿಸಿ ಮಂಗಳೂರಿನ ಸರ್ಕಾರಿ ಕಾಲೇಜನ್ನು ಸೇರಿದಾಗಲೆ ಗಾಂಧೀಜಿಯವರ ಅಸಹಕಾರ ಚಳುವಳಿಗೆ ಧುಮುಕಿದರು. ಆಡು ಮುಟ್ಟದ ಸೊಪ್ಪಿಲ್ಲ ಎಂಬಂತೆ ಕಾರಂತರು ಪ್ರವೇಶಿಸದ ಕ್ಷೇತ್ರವಿಲ್ಲ. ಅವರು ಸರ್ಕಾರದಲ್ಲಿ ಅಥವಾ ಇತರರ ಆಶ್ರಯದಲ್ಲಿ ದುಡಿಯಲಿಲ್ಲ. ಒಂಟಿಸಲಗದಂತೆ ನಡೆದರು, ವ್ಯಾಪಾರ ಮಾಡಿದರು, ವಸಂತ, ವಿಚಾರವಾಣಿ ಪತ್ರಿಕೆ ನಡೆಸಿದರು. ಬಾಲವನ ಸ್ಥಾಪಿಸಿದ್ದರು. ಚಲನಚಿತ್ರ , ಯಕ್ಷಗಾನ ಪ್ರಯೋಗಗಳನ್ನು ನಡೆಸಿದ್ದರು, ಹೀಗೆ ...

READ MORE

Related Books