ವಿಜ್ಞಾನ ಪ್ರಪಂಚ (ಭಾಗ-3, ವಸ್ತು-ಚೈತನ್ಯ)

Author : ಶಿವರಾಮ ಕಾರಂತ

Pages 611

₹ 536.00




Year of Publication: 2016
Published by: ಸಪ್ನ ಬುಕ್ ಹೌಸ್
Address: # 11, 3ನೇ ಮುಖ್ಯರಸ್ತೆ, ಗಾಂಧೀನಗರ, ಬೆಂಗಳೂರು

Synopsys

ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಡಾ. ಕೆ. ಶಿವರಾಮ ಕಾರಂತ ಅವರ ಕೃತಿ-ವಿಜ್ಞಾನ ಪ್ರಪಂಚ ( ಭಾಗ-3 ವಸ್ತು-ಚೈತನ್ಯ.) ವಿಜ್ಞಾನ ಪ್ರಪಂಚದ ಸರಣಿ ಕೃತಿಗಳಲ್ಲಿ ಪ್ರತಿ ಪುಸ್ತಕವು ಮಹತ್ವದ ಮೈಲುಗಲ್ಲಾಗಿದೆ. ಈ ಕೃತಿಯಲ್ಲಿ ವಸ್ತು ಹಾಗೂ ಚೈತನ್ಯ ಕುರಿತಂತೆ ವಿವಿಧ ಮೂಲಗಳಿಂದ ಮಾಹಿತಿ ಸಂಗ್ರಹಿಸಿ, ನೀಡಿದ್ದು, ವಿಜ್ಞಾನದ ದೃಷ್ಟಿಯಿಂದಲೂ ಈ ಕೃತಿ ಯೋಗ್ಯವಾಗಿದೆ. ವಿಜ್ಞಾನದ ಒಳನೋಟಗಳನ್ನು ನೀಡುವ ಮಹತ್ವದ ಕೃತಿಯಾಗಿಯೂ ಗಮನ ಸೆಳೆಯುತ್ತದೆ.

 

 

About the Author

ಶಿವರಾಮ ಕಾರಂತ
(10 October 1902 - 09 December 1997)

ತಮ್ಮ ಬಹುಮುಖ ಪ್ರತಿಭೆಯಿಂದ ಕನ್ನಡ ಸಾಹಿತ್ಯ ಶ್ರೀಮಂತಗೊಳಿಸಿದ ಕೋಟ ಶಿವರಾಮ ಕಾರಂತರ ಕೊಡುಗೆ ಅನನ್ಯ- ಅಭೂತಪೂರ್ವ. 1902ರ ಅಕ್ಟೋಬರ್ 10ರಂದು ಜನಿಸಿದರು. ತಂದೆ ಶೇಷ ಕಾರಂತ ತಾಯಿ ಲಕ್ಷ್ಮಮ್ಮ. ಕುಂದಾಪುರದಲ್ಲಿ ಪ್ರೌಢಶಾಲಾ ವ್ಯಾಸಂಗವನ್ನು ಮುಗಿಸಿ ಮಂಗಳೂರಿನ ಸರ್ಕಾರಿ ಕಾಲೇಜನ್ನು ಸೇರಿದಾಗಲೆ ಗಾಂಧೀಜಿಯವರ ಅಸಹಕಾರ ಚಳುವಳಿಗೆ ಧುಮುಕಿದರು. ಆಡು ಮುಟ್ಟದ ಸೊಪ್ಪಿಲ್ಲ ಎಂಬಂತೆ ಕಾರಂತರು ಪ್ರವೇಶಿಸದ ಕ್ಷೇತ್ರವಿಲ್ಲ. ಅವರು ಸರ್ಕಾರದಲ್ಲಿ ಅಥವಾ ಇತರರ ಆಶ್ರಯದಲ್ಲಿ ದುಡಿಯಲಿಲ್ಲ. ಒಂಟಿಸಲಗದಂತೆ ನಡೆದರು, ವ್ಯಾಪಾರ ಮಾಡಿದರು, ವಸಂತ, ವಿಚಾರವಾಣಿ ಪತ್ರಿಕೆ ನಡೆಸಿದರು. ಬಾಲವನ ಸ್ಥಾಪಿಸಿದ್ದರು. ಚಲನಚಿತ್ರ , ಯಕ್ಷಗಾನ ಪ್ರಯೋಗಗಳನ್ನು ನಡೆಸಿದ್ದರು, ಹೀಗೆ ...

READ MORE

Related Books