ವೀರಪಾಂಡ್ಯ ಕಟ್ಟಬೊಮ್ಮನ್

Author : ಬೆ.ಗೋ. ರಮೇಶ್

Pages 120

₹ 15.00




Year of Publication: 1974
Published by: ರಾಷ್ಟ್ರೋತ್ಥಾನ ಸಾಹಿತ್ಯ
Address: ಕೇಶವ ಶಿಲ್ಪ, ಕೆಂಪೇಗೌಡ ನಗರ, ಬೆಂಗಳೂರು-560019
Phone: 9945036300

Synopsys

ವೀರ ಪಾಂಡ್ಯ ಕಟ್ಟ ಬೊಮ್ಮನ್ ಜೀವನಚರಿತ್ರೆ ಪುಸ್ತಕವನ್ನು ಲೇಖಕ ಬೆ.ಗೊ. ರಮೇಶ್‌ ಅವರು ರಚಿಸಿದ್ದಾರೆ. ಈ ಕೃತಿಯಲ್ಲಿ ತಮಿಳುನಾಡಿನ ಗಂಡುಗಲಿ,ಕ್ರಮಕ್ರಮೇಣ ಭಾರತವನ್ನು ವಶಮಾಡಿಕೊಳ್ಳುತ್ತಿದ್ದ ಇಂಗ್ಲಿಷರ ವಿರುದ್ಧ ಹೋರಾಡಿದ, ಸ್ನೇಹಿತರೇ ಮಾಡಿದ ದ್ರೋಹದಿಂದ ಅವರ ವಶನಾದ, ಕಡೆಯವರೆಗೆ ಪುರುಷಸಿಂಹನಾಗಿ ನಡೆದುಕೊಂಡು, ತಾಯ್ನಾಡಿಗೆ ನಮಸ್ಕಾರ ಸಲ್ಲಿಸುತ್ತ ಗಲ್ಲಿಗೇರಿದ ಎಂದು ವೀರಪಾಂಡ್ಯ ಕಟ್ಟಬೊಮ್ಮನ್ ಅವರ ಕುರಿತಾಗಿ ಈ ಪುಸ್ತಕದಲ್ಲಿ ವಿವರಿಸಲಾಗಿದೆ. ವೀರಪಾಂಡ್ಯ ಕಟ್ಟಬೊಮ್ಮನ್ ಅವರ ಬಾಲ್ಯ ಜೀವನ, ಸ್ವಾತಂತ್ರ್ಯ ಹೋರಾಟದ ತಿರುವುಗಳು, ಸ್ನೇಹಿತರ ಮೋಸಕ್ಕೆ ಗುರಿಯಾದ ಪರಿ, ಗಲ್ಲಿಗೇರಿದಾಗಲೂ ಇದ್ದ ಧೈರ್ಯ ಹೀಗೆ ಅವರ ಬದುಕಿನ ಮುಖ್ಯ ಘಟ್ಟಗಳನ್ನು ಆಧಾರವಾಗಿಟ್ಟಕೊಂಡು ಈ ಕೃತಿಯನ್ನು ರಚಿಸಲಾಗಿದೆ.

About the Author

ಬೆ.ಗೋ. ರಮೇಶ್
(22 August 1945)

ಬೆ.ಗೋ. ರಮೇಶ್ ಮೈಸೂರು ಜಿಲ್ಲೆಯ ಕೆ.ಆರ್. ನಗರ ತಾಲ್ಲೂಕಿನ ದೊಡ್ಡ ಹನಸಗೆಯಲ್ಲಿ ಆಗಸ್ಟ್ 22 , 1945ರಲ್ಲಿ ಜನಿಸಿದರು. ತಂದೆ ಗೊವಿಂದರಾಜು, ತಾಯಿ ರಾಧಮ್ಮನವರು. ಅವರ ಪ್ರಾರಂಭಿಕ ಶಿಕ್ಷಣ ನಡೆದದ್ದು ಬೆಂಗಳೂರಿನ ಮಲ್ಲೇಶ್ವರಂ ಶಾಲೆಯಲ್ಲಿ. ಇಂಟರ್‌ಮೀಡಿಯೆಟ್ ಓದಿದ್ದು ಸರಕಾರಿ ಕಾಲೇಜಿನಲ್ಲಿ. ಮುಂದೆ ರಮೇಶರು ಹಾಸನದ ಮಲ್ನಾಡ್ ಎಂಜನಿಯರಿಂಗ್ ಕಾಲೇಜಿನಿಂದ ಬಿ.ಇ. ಪದವಿ ಪಡೆದರು. ಹೆಬ್ಬಾಳದ ಕೃಷಿ ವಿಶ್ವವಿದ್ಯಾಲಯದಲ್ಲಿ ಕೆಲಕಾಲ ಉದ್ಯೋಗ ನಿರ್ವಹಿಸಿದ ಬೆ. ಗೋ ರಮೇಶರು ಕರ್ನಾಟಕ ಪವರ್ ಕಾರ್ಪೋರೇಷನ್ನಿನಲ್ಲಿ ಸಹಾಯಕ ಎಂಜನಿಯರಾಗಿ, ಸಹಾಯಕ ಎಕ್ಸುಕ್ಯುಟಿವ್ ಎಂಜನಿಯರಾಗಿ, ಎಕ್ಸಿಕ್ಯುಟಿವ್ ಎಂಜನಿಯರಾಗಿ, ರಾಯಚೂರಿನ ಶಾಕೋತ್ಪನ್ನ ವಿದ್ಯುದಾಗಾರದಲ್ಲಿ ಸೇವೆ ಸಲ್ಲಿಸಿ ...

READ MORE

Related Books