ಪ್ರಮುಖ ಕತೆಗಾರ ವಸುಧೇಂದ್ರ ಅವರು ಬರೆದಿರುವ ಅಮೃತ ಸೊಪ್ಪು, ವಾಹಿನಿ, ಡೆವಿಲ್ ಡಾಗ್, ವಿಷಮ ಭಿನ್ನರಾಶಿ, ನಿಯಮ ಬಾಹಿರ, ಸೈಕಲ್ ಸವಾರಿ, ಚತುರ್ಮುಖ, ಆಡಬಾರದ ಮಾತುಗಳು ಕಾಡುವಾಗ- ಹೀಗೆ ಎಂಟು ಕಥೆಗಳನ್ನು ಈ ಕೃತಿಯು ಒಳಗೊಂಡಿದೆ. ತಂದೆ ತಾಯಿ, ಸಂಸ್ಕಾರವನ್ನೂ ಮರೆತು ತಂತ್ರಜ್ಞಾನ ಜಗತ್ತಿನಲ್ಲಿ ಹುದ್ದೆಯಲ್ಲಿ ಮೇಲೇರಲು ಹಪಾಹಪಿಸುವ ಯುವ ಜನಾಂಗವನ್ನು ಈ ಕೃತಿಯಲ್ಲಿ ಹಿಡಿದಿಟ್ಟಿದ್ದಾರೆ.