ಸದ್ಭಾವನಾ ಪ್ರತಿಷ್ಠಾನದ ವತಿಯಿಂದ ಕನ್ನಡದ ಸ್ಪಷ್ಟ ಬರವಣಿಗಾಗಿ ಕಮ್ಮಟ


ಬೆಂಗಳೂರಿನ ಸದ್ಭಾವನಾ ಪ್ರತಿಷ್ಠಾನವು ಕನ್ನಡದ ಲೇಖಕರಿಗೆ, ವಿದ್ಯಾರ್ಥಿಗಳಿಗೆ ಹಾಗೂ ಆಸಕ್ತ ಸಾರ್ವಜನಿಕರಿಗೆ ಕನ್ನಡದಲ್ಲಿ ಸ್ಪಷ್ಟವಾಗಿ, ಸ್ವಚ್ಛವಾಗಿ ಬರೆಯುವ ಕ್ರಮವನ್ನು ಬೋಧಿಸುವ ಒಂದು ದಿನದ ಕಮ್ಮಟವನ್ನು ದಿನಾಂಕ 26-09-2021ರ ಭಾನುವಾರದಂದು ಬೆಂಗಳೂರಿನ ಮಾಗಡಿ ಮುಖ್ಯರಸ್ತೆಯ ಶ್ರೀಗಂಧದ ಕಾವಲಿನಲ್ಲಿರುವ ಕೆಂಪೇಗೌಡ ನಿರ್ವಹಣಾ ಅಧ್ಯಯನ ಮಹಾವಿದ್ಯಾಲಯ ಮತ್ತು ಸಂಶೋಧನಾ ಸಂಸ್ಥೆಯಲ್ಲಿ ಆಯೋಜಿಸಿದೆ. ಇದು ಉಪನ್ಯಾಸ, ಪ್ರಾತ್ಯಕ್ಷಿಕೆ, ಚರ್ಚೆ ಮತ್ತು ಅಭ್ಯಾಸಗಳನ್ನು ಒಳಗೊಂಡಿರುತ್ತದೆ.

ಭಾಷಾತಜ್ಞರಾದ ಕೆ. ರಾಜಕುಮಾರ್ ಅವರು ಕಮ್ಮಟದ ನಿರ್ದೇಶಕರಾಗಿದ್ದು,ಕನ್ನಡದ ಬಳಕೆಯಲ್ಲಿ ಎದುರಾಗುವ ಸಮಸ್ಯೆಗಳಿಗೆ ಖಚಿತ ಪರಿಹಾರಗಳನ್ನು ದೊರಕಿಸಿಕೊಡುವ ಉದ್ದೇಶ ಈ ಕಮ್ಮಟದ್ದು.ಆಸಕ್ತರು 50 ರೂಪಾಯಿಗಳನ್ನು ಪಾವತಿಸಿ ನೋಂದಾಯಿಸಿಕೊಳ್ಳಬಹುದು. ಮೊದಲ 50 ಅಭ್ಯರ್ಥಿಗಳಿಗೆ ಮಾತ್ರ ಪ್ರವೇಶಾವಕಾಶವಿದ್ದು, ಕಮ್ಮಟದಲ್ಲಿ ಭಾಗವಹಿಸುವವರಿಗೆ ಲೇಖನ ಸಾಮಗ್ರಿ ನೀಡಲಾಗುವುದು. ಅಂದು ಸಂಜೆ ಪ್ರಮಾಣಪತ್ರಗಳನ್ನು ವಿತರಿಸಲಾಗುವುದು.

ಹೆಚ್ಚಿನ ಮಾಹಿತಿಗಾಗಿ ಸದ್ಭಾವನಾ ಪ್ರತಿಷ್ಠಾನದ ಎಂ. ಪ್ರಕಾಶಮೂರ್ತಿ ಅವರನ್ನು 9448709651/8762802170ಕ್ಕೆ ಕರೆಮಾಡಿ ಸಂಪರ್ಕಿಸಬಹುದು

MORE FEATURES

ಸಾಮಾನ್ಯರ ಹಲವು ಪ್ರಶ್ನೆಗಳಿಗೆ ಇದರಲ್ಲಿ ಉತ್ತರವಿದೆ

25-04-2024 ಬೆಂಗಳೂರು

"ಓದುವ ಗುಣವನ್ನು ಕಳೆದುಕೊಂಡಿರುವ ನಮ್ಮ ನಾಗರಿಕರು ನಿಜಾರ್ಥದಲ್ಲಿ ಸತ್ಯ ಬೇಕಾದರೆ ಈ ಪುಸ್ತಕವನ್ನು ಓದಬೇಕು. ಮುಂದ...

ಬೆಟ್ಟ ಹತ್ತುವುದೆಂದರೆ ಕೇವಲ ಚಾರಣವಲ್ಲ, ಅದೊಂದು ಬದುಕಿನ ಪಯಣ

25-04-2024 ಬೆಂಗಳೂರು

"ಬೆಟ್ಟ ಹತ್ತುವುದೆಂದರೆ ಕೇವಲ ಚಾರಣವಲ್ಲ. ಅದೊಂದು ಬದುಕಿನ ಪಯಣ. ಪ್ರತಿ ಕ್ಷಣ ಎದಿರಾಗುವ ಅಪಾಯಗಳನ್ನು ಸಲೀಸಾಗಿ ಗ...

ನನ್ನ ಪತಿಯ ಪ್ರೋತ್ಸಾಹದಿಂದ ನನಗೆ ಬರೆಯುವ ಗೀಳು ಬಂತು

25-04-2024 ಬೆಂಗಳೂರು

‘ನನ್ನ ಪತಿಯ ಪ್ರೋತ್ಸಾಹದಿಂದ ನನಗೆ ಬರೆಯುವ ಗೀಳು ಬಂತು. ಹಾಗಾಗಿ, ಕೆಲವೊಂದು ಪುಸ್ತಕಗಳನ್ನು ಬರೆದಿದ್ದೇನೆ. 202...