Date: 24-05-2023
Location: ಕನ್ನಡ ಸಾಹಿತ್ಯ ಪರಿಷತ್ತು, ಬೆಂಗಳೂರು
ಬೆಂಗಳೂರು: ಕನ್ನಡ ಸಾಹಿತ್ಯ ಪರಿಷತ್ತಿನ 2021-2022 ಮತ್ತು 2023ನೇ ಸಾಲಿನ ‘ಶ್ರೀಮತಿ ಕಂಡ್ಲೂರು ಗಿರಿಜಮ್ಮ ಮತ್ತು ನರಸಿಂಹ ಜೋಗಿ’ ದತ್ತಿ ಪ್ರಶಸ್ತಿಗೆ ಕಾಸರಗೋಡು ಚಿನ್ನಾ ಸೇರಿದಂತೆ ಮೂವರು ರಂಗ ಕಲಾವಿದರು ಆಯ್ಕೆಯಾಗಿದ್ದಾರೆ.
ಶ್ರೀಮತಿ ಕಂಡ್ಲೂರು ಗಿರಿಜಮ್ಮ ಮತ್ತು ನರಸಿಂಹ ಜೋಗಿ ದತ್ತಿ ಪ್ರಶಸ್ತಿಯನ್ನು ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ಈ ದತ್ತಿಯನ್ನು ಸ್ಥಾಪಿಸಿ ಕನ್ನಡ ರಂಗಭೂಮಿಯಲ್ಲಿ ದುಡಿಯುತ್ತಿರುವ ಕಲಾವಿದರೊಬ್ಬರಿಗೆ ಪ್ರತಿ ವರ್ಷ ಗುರುತಿಸಿ ಪ್ರಸ್ತುತ ಪ್ರಶಸ್ತಿಯನ್ನು ಪ್ರಧಾನ ಮಾಡಲಾಗುತ್ತದೆ. ಈ ಪ್ರಶಸ್ತಿಯು 5000(ಐದು ಸಾವಿರ)ರೂ. ನಗದು ಹಾಗೂ ಸ್ಮರಣಿಕೆ ಹಾಗೂ ಫಲ ತಾಂಬೂಲಗಳನ್ನೂ ಒಳಗೊಂಡಿರುತ್ತದೆ. ದಾನಿಗಳ ಮೂಲ ಉದ್ದೇಶದಂತೆ ಕರ್ನಾಟಕದಲ್ಲಿ ನಾಟಕ ಕ್ಷೇತ್ರದಲ್ಲಿ ನಿರಂತರ ಸೇವೆ ಸಲ್ಲಿಸುತ್ತಿರುವ ರಂಗ ಕಲಾವಿದರನ್ನು ಗುರುತಿಸಿ ಅವರ ಪ್ರತಿಭೆಯನ್ನು ಹಾಗೂ ಅವರ ಸಾಧನೆಗಳನ್ನು ಗಮನಿಸಿ ಶ್ರೀಮತಿ ಕಂಡ್ಲೂರು ಗಿರಿಜಮ್ಮ ಮತ್ತು ನರಸಿಂಹ ಜೋಗಿ ದತ್ತಿ ಪ್ರಶಸ್ತಿ ಆಯ್ಕೆ ಸಮಿತಿ ಆಯ್ಕೆ ಮಾಡಿದೆ. ಇದುವರೆಗೆ ಎಳು ಜನ ರಂಗ ಕಲಾವಿದರಿಗೆ ಶ್ರೀಮತಿ ಕಂಡ್ಲೂರು ಗಿರಿಜಮ್ಮ ಮತ್ತು ನರಸಿಂಹ ಜೋಗಿ ದತ್ತಿ ಪ್ರಶಸ್ತಿಯನ್ನು ಪ್ರಧಾನ ಮಾಡಲಾಗಿದೆ. ಕರೋನಾ ಹಿನ್ನೆಲೆಯಲ್ಲಿ ಎರಡೂ ವರ್ಷಗಳ ಕಾಲ ಯಾವುದೇ ಕಾರ್ಯಕ್ರಮ ನಡೆಯದೇ ಇರುವ ಹಿನ್ನೆಲೆಯಲ್ಲಿ ಈ ಪ್ರಶಸ್ತಿಯ ಪ್ರಕಟಣೆ ಬಾಕಿ ಇತ್ತು. ಪ್ರಸ್ತುತ ನಾಡೋಜ ಡಾ. ಮಹೇಶ ಜೋಶಿ ಅವರ ಅಧ್ಯಕ್ಷ ಅವಧಿಯಲ್ಲಿ ಬಾಕಿ ಉಳಿದಿದ್ದ ದತ್ತಿ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಗುತ್ತಿದೆ.
2021ನೆಯ ಸಾಲಿನ ಶ್ರೀಮತಿ ಕಂಡ್ಲೂರು ಗಿರಿಜಮ್ಮ ಮತ್ತು ನರಸಿಂಹ ಜೋಗಿ ದತ್ತಿ ಪ್ರಶಸ್ತಿಗೆ ಹಿರಿಯ ರಂಗ ಕರ್ಮಿ ಶ್ರೀ ಕಾಸರಗೋಡು ಚಿನ್ನ ಅವರಿಗೆ, 2022ನೆಯ ಸಾಲಿನ ಪ್ರಶಸ್ತಿಗೆ ರಂಗ ಕಲಾವಿದೆ ಶ್ರೀಮತಿ ಭಾರತಿ ಬಿಜಾಪುರ ಹಾಗೂ 2023ನೆಯ ಸಾಲಿನ ಪ್ರಶಸ್ತಿಗೆ ಬೆಂಗಳೂರಿನ ಹಿರಿಯ ನಾಟಕ ಕಲಾವಿದ ಶ್ರೀ ರಂಗಶ್ರೀ ರಂಗಸ್ವಾಮಿ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ನಾಡೋಜ ಡಾ. ಮಹೇಶ ಜೋಶಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ನಾಡೋಜ ಡಾ. ಮಹೇಶ ಜೋಶಿ ಅವರ ಅಧ್ಯಕ್ಷತೆಯಲ್ಲಿ ನಡೆದ ಆಯ್ಕೆ ಸಮಿತಿಯಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿ ಶ್ರೀ, ನೇ. ಭ. ರಾಮಲಿಂಗ ಶೆಟ್ಟಿ, ಡಾ. ಪದ್ಮಿನಿ ನಾಗರಾಜು ಹಾಗೂ ಗೌರವ ಕೋಶಾಧ್ಯಕ್ಷರಾದ ಡಾ. ಬಿ.ಎಂ.ಪಟೇಲ್ ಪಾಂಡು ಅವರು ಉಪಸ್ಥಿತರಿದ್ದರು.
ಸ್ವರ್ಣಿಮ ಭಾರತಿ ಸಾಹಿತ್ಯ ಸಮ್ಮಾನ್ ವತಿಯಿಂದ ಆಯೋಜಿಸಿದ್ದ ‘ವನರಾಗ ಶರ್ಮಾ ಪುಸ್ತಕ ಪ್ರಶಸ್ತಿ’ ಸ್ಪರ್ಧೆಯ...
ಬೆಂಗಳೂರು: ಸಿದ್ಧಾಂತ ಪ್ರಕಾಶನದಿಂದ ಲೇಖಕ ಕವಿ ಜೆ.ಆರ್ ನರಸಿಂಹಮೂರ್ತಿ ರವರ 'ನುಡಿ ನಮನ ' ಕವನ ಸಂಕಲನ ಹಾಗೂ &...
ಮೈಸೂರು ವಿಶ್ವವಿದ್ಯಾಲಯದಿಂದ ''ಸರ್ವೋದಯ ಪರಿಕಲ್ಪನೆಯ ಪ್ರಸ್ತುತತೆ ಮತ್ತು ದುರ್ಬಲ ವರ್ಗಗಳ ಸಬಲೀಕರಣದಲ್ಲಿ ಸ್...
©2023 Book Brahma Private Limited.