2022-2023ನೇ ಸಾಲಿನ ʻಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಪ್ರಶಸ್ತಿʼ ಪ್ರಕಟ

Date: 24-05-2023

Location: ಕನ್ನಡ ಸಾಹಿತ್ಯ ಪರಿಷತ್ತು, ಬೆಂಗಳೂರು


ಬೆಂಗಳೂರು: ಹಿರಿಯ ಲೇಖಕಿ ಬಿ.ಟಿ ಲಲಿತಾ ನಾಯಕ್, ವಸುಮತಿ ಉಡುಪ, ಪ್ರೊ. ಮಲ್ಲಿಕಾರ್ಜುನ ಹಿರೇಮಠ ಹಾಗೂ ಅಮರೇಶ ನುಗಡೋಣಿ ಅವರು 2022 ಹಾಗೂ 2023ನೇ ಸಾಲಿನ ʻಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಪ್ರಶಸ್ತಿʼಗೆ ಆಯ್ಕೆಯಾಗಿದ್ದಾರೆ.

ಡಾ. ಮನು ಬಳಿಗಾರ್‌ ಪರಿಷತ್ತಿನ ಅಧ್ಯಕ್ಷರಾಗಿದ್ದಾಗ ಅವರಿಗೆ ನೀಡುತ್ತಿದ್ದ ಮಾಸಿಕ ಗೌರವ ಸಂಭಾವನೆಯನ್ನು ಪರಿಷತ್ತಿನಲ್ಲಿಯೇ ದತ್ತಿ ನಿಧಿ ರೂಪದಲ್ಲಿಟ್ಟು 'ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಪ್ರಶಸ್ತಿ'ಯನ್ನು ಸ್ಥಾಪಿಸಿದ್ದರು. 12,61,000 ( ಹನ್ನೆರಡು ಲಕ್ಷದ ಅರವತ್ತೊಂದು ಸಾವಿರ)ರೂ. ಗಳ ಖಾಯಂ ದತ್ತಿನಿಧಿಯಿಂದ ಈ ಪ್ರಶಸ್ತಿ ಸ್ಥಾಪನೆಗೊಂಡಿದ್ದು, ಪ್ರತಿವರ್ಷ ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ಗಣನೀಯ ಸಾಧನೆ ಮಾಡಿದ ಒಬ್ಬ ಲೇಖಕ ಹಾಗೂ ಲೇಖಕಿಗೆ ತಲಾ 30,000(ಮೂವತ್ತು ಸಾವಿರ)ರೂ. ನಗದು, ಸ್ಮರಣಿಕೆ, ಹಾರ ಹಾಗೂ ಫಲತಾಂಬೂಲ ನೀಡಿ ಗೌರವಿಸಲಾಗುತ್ತದೆ. ಅದರಂತೆ 2022-2023ನೇ ಸಾಲಿನ ʻಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಪ್ರಶಸ್ತಿʼಗೆ ಹಿರಿಯ ಲೇಖಕಿ ಶ್ರೀಮತಿ ವಸುಮತಿ ಉಡುಪ ಹಾಗೂ ಲೇಖಕ ಪ್ರೊ. ಮಲ್ಲಿಕಾರ್ಜುನ ಹಿರೇಮಠ ಅವರನ್ನು ಆಯ್ಕೆ ಮಾಡಲಾಗಿದೆ.

ಇನ್ನು 2023ನೆಯ ಸಾಲಿನ ಪ್ರಶಸ್ತಿಗೆ ಹಿರಿಯ ಲೇಖಕಿ ಡಾ. ಬಿ.‌ ಟಿ. ಲಲಿತಾ ನಾಯಕ್ ಹಾಗೂ ಲೇಖಕ ಡಾ. ಅಮರೇಶ ನುಗಡೋಣಿ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ನಾಡೋಜ ಡಾ. ಮಹೇಶ ಜೋಶಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಡಾ. ಮಹೇಶ ಜೋಶಿ ಅವರ ಅಧ್ಯಕ್ಷತೆಯಲ್ಲಿ ನಡೆದ ಆಯ್ಕೆ ಸಮಿತಿ ಸಭೆಯಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ನಿಕಟಪೂರ್ವ ಅಧ್ಯಕ್ಷರಾದ ನಾಡೋಜ ಡಾ. ಮನು ಬಳಿಗಾರ, ವಿಮರ್ಶಕಿ ಡಾ. ಎಂ. ಎಸ್‌. ಆಶಾದೇವಿ, ಪರಿಷತ್ತಿನ ಗೌರವ ಕಾರ್ಯದರ್ಶಿ ಶ್ರೀ, ನೇ. ಭ. ರಾಮಲಿಂಗ ಶೆಟ್ಟಿ, ಡಾ. ಪದ್ಮಿನಿ ನಾಗರಾಜು ಹಾಗೂ ಗೌರವ ಕೋಶಾಧ್ಯಕ್ಷರಾದ ಡಾ. ಬಿ.ಎಂ.ಪಟೇಲ್‌ ಪಾಂಡು ಅವರು ಉಪಸ್ಥಿತರಿದ್ದರು.

MORE NEWS

ಅವಿರತ ಹರೀಶ್ ಅವರ ಅಭಿನಂದನಾ ಕಾರ್ಯಕ್ರಮ ಎಲ್ಲರಿಗೂ ಆದರ್ಶವಾಗಿದೆ; ಬರಗೂರು ರಾಮಚಂದ್ರಪ್ಪ

25-04-2024 ಬೆಂಗಳೂರು

ಬೆಂಗಳೂರು: ಅವಿರತ ಹರೀಶ್ ಗೆಳೆಯರ ಬಳಗದಿಂದ ಹಮ್ಮಿಕೊಂಡಿದ್ದ ಪ್ರಕಾಶಕ, ಲೇಖಕ, ಸಂಘಟಕ ಅವಿರತ ಹರೀಶ್ 60ರ ಸಾಂಸ್ಕೃತಿಕ ಸ...

ಮಾತೋಶ್ರೀ ರತ್ನಮ್ಮ ಹೆಗ್ಗಡೆ 47ನೇ ಮಹಿಳಾ ಗ್ರಂಥ ಬಹುಮಾನಕ್ಕೆ ಕೃತಿಗಳ ಆಹ್ವಾನ

25-04-2024 ಬೆಂಗಳೂರು

ಧಾರವಾಡ: ಕರ್ನಾಟಕ ವಿದ್ಯಾವರ್ಧಕ ಸಂಘ ಧಾರವಾದಿಂದ 2023ನೇ ವರ್ಷದ ಮಹಿಳಾ ಶ್ರೇಷ್ಠ ಕನ್ನಡ ಕೃತಿಗಳಿಗೆ “ಮಾತೋಶ್ರೀ...

ಗಿರಡ್ಡಿ ಗೋವಿಂದರಾಜ ವಿಮರ್ಶಾ ಪ್ರಶಸ್ತಿಗೆ ಕೃತಿಗಳ ಆಹ್ವಾನ

25-04-2024 ಬೆಂಗಳೂರು

ಧಾರವಾಡ: ಡಾ. ಗಿರಡ್ಡಿ ಗೋವಿಂದರಾಜ ಫೌಂಡೇಶನ್ ನಿಂದ “ವಿಮರ್ಶಾ ಪ್ರಶಸ್ತಿ"ಗೆ ವಿಮರ್ಶಾ ಕೃತಿಗಳನ್ನು ಆಹ್ವಾ...