25 ಮಂದಿಗೆ ಕೆಯುಡಬ್ಲ್ಯುಜೆ ದತ್ತಿ ನಿಧಿ ಪ್ರಶಸ್ತಿ

Date: 28-03-2024

Location: ಬೆಂಗಳೂರು


ಬೆಂಗಳೂರು: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದಿಂದ ಕೊಡಮಾಡುವ ಪ್ರಸಕ್ತ ಸಾಲಿನ ಕೆಯುಡಬ್ಲ್ಯುಜೆ ದತ್ತಿ ನಿಧಿ ಪ್ರಶಸ್ತಿ ಪಟ್ಟಿ ಪ್ರಕಟವಾಗಿದೆ.

ಒಟ್ಟು 21 ಮಂದಿಗೆ ಪ್ರಶಸ್ತಿ ಹಾಗೂ ನಾಲ್ವರು ವಿಶೇಷ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ದತ್ತಿನಿಧಿ ಪ್ರಶಸ್ತಿಗಳು ತಲಾ 5 ಸಾವಿರ ರೂ. ನಗದು, ಪ್ರಶಸ್ತಿ ಫಲಕ ಮತ್ತು ಗೌರವ ಪುರಸ್ಕಾರಗಳನ್ನು ಹೊಂದಿರುತ್ತವೆ.

ದತ್ತಿ ಪ್ರಶಸ್ತಿಯನ್ನು ಎಪ್ರಿಲ್ 1 ಸೋಮವಾರದಂದು ಚಿತ್ರದುರ್ಗದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಪ್ರದಾನ ಮಾಡಲಾಗುವುದು ಎಂದು ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

21 ಮಂದಿ ಪ್ರಶಸ್ತಿ ಪುರಸ್ಕೃತರ ಪಟ್ಟಿ: ಬಿ.ಎಂ.ಬಶೀರ್, ಮಂಗಳೂರು(ಡಾ.ಬಾಬಾ ಸಾಹೇಬ ಅಂಬೇಡ್ಕರ್ ಪ್ರಶಸ್ತಿ), ಕುಂತಿನಾಥ ಶ್ರೀ ಕಲಮನಿ, ಬೆಳಗಾವಿ(ಗೊಮ್ಮಟ ಮಾಧ್ಯಮ ಪ್ರಶಸ್ತಿ), ವಿ.ವೆಂಕಟೇಶ್, ಬೆಂಗಳೂರು(ಡಿವಿಜಿ ಪ್ರಶಸ್ತಿ), ಸಿ.ಜಿ.ಮಂಜುಳ, ಬೆಂಗಳೂರು(ಸಿ.ಆರ್.ಕೃಷ್ಣರಾವ್(ಸಿಆರ್ಕೆ) ಪ್ರಶಸ್ತಿ), ಮಲ್ಲಿಗೆ ಮಾಚಮ್ಮ, ಮೈಸೂರು(ಯಶೋಧಮ್ಮ ಜಿ ನಾರಾಯಣ ಪ್ರಶಸ್ತಿ), ಮೋಹನ ಹೆಗಡೆ, ಹುಬ್ಬಳ್ಳಿ(ಎಸ್.ವಿ.ಜಯಶೀಲರಾವ್ ಪ್ರಶಸ್ತಿ), ಸನತ್ ಕುಮಾರ್ ಬೆಳಗಲಿ(ಡಾ.ಎಂ.ಎಂ.ಕಲಬುರ್ಗಿ ಪ್ರಶಸ್ತಿ), : ಬಿ.ಎಂ.ನಂದೀಶ್, ಹಾಸನ(ಕಿಡಿ ಶೇಷಪ್ಪ ಪ್ರಶಸ್ತಿ), ಆರ್.ಜಯಕುಮಾರ್, ಬೆಂಗಳೂರು(ಎಚ್.ಎಸ್.ದೊರೆಸ್ವಾಮಿ ಪ್ರಶಸ್ತಿ), ಸಿ.ಕೆ.ಮಹೇಂದ್ರ, ಮೈಸೂರು(ಪಿ.ಆರ್.ರಾಮಯ್ಯ ಪ್ರಶಸ್ತಿ), ಅಶೋಕ್ ರಾಮ್, ರಾಮನಗರ(ಎಚ್.ಕೆ.ವೀರಣ್ಣಗೌಡ ಪ್ರಶಸ್ತಿ), ಶಶಿಕುಮಾರ್ ಬಿ ಕೆರೂರ, ಬಾಗಲಕೋಟೆ(ರಾಜಶೇಖರಕೋಟಿ ಪ್ರಶಸ್ತಿ), ಮನೋಹರ ಮಲ್ಲಾಡದ, ರಾಣೆಬೆನ್ನೂರು(ಪಿ.ರಾಮಯ್ಯ ಪ್ರಶಸ್ತಿ), ಎಚ್.ಕೆ.ಬಸವರಾಜು, ಬೆಂಗಳೂರು(ಮ.ರಾಮಮೂರ್ತಿ ಪ್ರಶಸ್ತಿ), ಪ್ರಭುಲಿಂಗ ಶಾಸ್ತ್ರಿಮಠ, ಬೆಂಗಳೂರು(ಗರುಡನಗಿರಿ ನಾಗರಾಜ್ ಪ್ರಶಸ್ತಿ), ವಿಜಯಕುಮಾರ್ ವಾರದ, ಕಲಬುರಗಿ(ಮಹದೇವ ಪ್ರಕಾಶ್ ಪ್ರಶಸ್ತಿ), ಎನ್.ಬಾಬು, ಭದ್ರಾವತಿ(ಶಿವಮೊಗ್ಗದ ಮಿಂಚು ಶ್ರೀನಿವಾಸ್ ಪ್ರಶಸ್ತಿ), ನಾಮದೇವ ವಾಟ್ಕರ್, ಯಾದಗಿರಿ(ಎಚ್.ಎಸ್.ರಂಗಸ್ವಾಮಿ ಪ್ರಶಸ್ತಿ), ರವಿ ಆರ್, ದಾವಣಗೆರೆ(ಎಂ.ನಾಗೇಂದ್ರರಾವ್ ಪ್ರಶಸ್ತಿ), ಕೆ.ಗೋಪಿಕಾ ಮಲ್ಲೇಶ್, ಕೋಲಾರ(ಗಿರಿಜಮ್ಮ ರುದ್ರಪ್ಪ ತಾಳಿಕೋಟೆ ಪ್ರಶಸ್ತಿ), ಆರ್.ಸಿ.ಪುಟ್ಟರಾಜು, ಚಾಮರಾಜನಗರ(ಗುರುಲಿಂಗಸ್ವಾಮಿ ಹೊಳಿಮಠ ಪ್ರಶಸ್ತಿ).

ವಿಶೇಷ ಪ್ರಶಸ್ತಿ ಪಟ್ಟಿ: ಚಿಕ್ಕಪ್ಪನಳ್ಳಿ ಷಣ್ಮುಖ, ಎಸ್.ಬಿ.ರವಿಕುಮಾರ್.ಮಂಜುನಾಥ್, ರವಿ ಮಲ್ಲಾಪುರ


 

MORE NEWS

ಕನ್ನಡ ಸಾಹಿತ್ಯ ಪರಿಷತ್ತಿನ 2023ನೇ ಸಾಲಿನ ವಿವಿಧ ಪುಸ್ತಕ ದತ್ತಿ ಪ್ರಶಸ್ತಿಗಳಿಗೆ ಕೃತಿಗಳ ಆಹ್ವಾನ

28-04-2024 ಬೆಂಗಳೂರು

ಬೆಂಗಳೂರು: ಕನ್ನಡ ಸಾಹಿತ್ಯ ಪರಿಷತ್ತು 2023ನೇ ಸಾಲಿನಲ್ಲಿ ಪುಸ್ತಕಗಳಿಗೆ ನೀಡಲಾಗುವ ವಿವಿಧ ದತ್ತಿ ಪುರಸ್ಕಾರಗಳಿಗಾಗಿ ಕ...

ಅಂತರಾಷ್ಟ್ರೀಯ ಕಾವ್ಯ ಪ್ರಶಸ್ತಿ ಪುರಸ್ಕೃತೆ ಡಾ. ಮಮತಾ ಸಾಗರ್ ಅವರಿಗೆ ಅಭಿನಂದನೆ ಕಾರ್ಯಕ್ರಮ

28-04-2024 ಬೆಂಗಳೂರು

ಬೆಂಗಳೂರು: ಬೆಂಗಳೂರು ನಗರ ಜಿಲ್ಲಾ ಶರಣ ಸಾಹಿತ್ಯ ಪರಿಷತ್ತು, ಕದಳಿ ಮಹಿಳಾ ವೇದಿಕೆ ಹಾಗೂ ಲಂಡನ್ ನ ಬಸವ ಅಂತರಾಷ್ಟ್ರೀಯ ...

ವಿನಾಯಕ ಗೋಕಾಕ್ ವಾಙ್ಮಯ ಟ್ರಸ್ಟ್‌ನ ಅಧ್ಯಕ್ಷರಾಗಿ ನರಹಳ್ಳಿ ಬಾಲಸುಬ್ರಹ್ಮಣ್ಯ ಆಯ್ಕೆ

27-04-2024 ಬೆಂಗಳೂರು

ಬೆಂಗಳೂರು: ಸಾಹಿತ್ಯ ಮತ್ತು ಸಾಂಸ್ಕೃತಿಕ ಕ್ಷೇತ್ರಗಳಲ್ಲಿ ಗಣನೀಯ ಕಾರ್ಯಕ್ರಮಗಳನ್ನು ರೂಪಿಸಿ ಪ್ರಸ್ತುತಪಡಿಸುತ್ತಿರುವ ವ...