ಆಲಮೇಲ: 'ಬೆರಗು' ಪ್ರಶಸ್ತಿ ಘೋಷಣೆ

Date: 02-12-2025

Location: ಆಲಮೇಲ


ದೇವೂ ಮಾಕೊಂಡ, ಪದ್ಮನಿ ನಾಗರಾಜ್ ಗೆ ಬೆರಗು ಪ್ರಶಸ್ತಿ 

ಆಲಮೇಲ: ವಿಜಯಪುರ ಜಿಲ್ಲೆ ಕಡಣಿಯ ಬೆರಗು ಪ್ರಕಾಶನ ಸಂಸ್ಥೆಯು ನೀಡುವ ರಾಜ್ಯಮಟ್ಟದ 2025ನೇ ಸಾಲಿನ ಪ್ರೊ.ಎಚ್.ಟಿ.ಪೋತೆ ಹಸ್ತಪ್ರತಿ ಪ್ರಶಸ್ತಿಗೆ ಸಿಂದಗಿಯ ದೇವೂ ಮಾಕೊಂಡ ಅವರ "ಯುದ್ಧ ಮೃದಂಗ' ಅನುವಾದಿತ ಸಂಕಲನದ ಹಸ್ತಪ್ರತಿ ಆಯ್ಕೆಯಾಗಿದೆ ಹಾಗೂ ಪ್ರೊ.ಎಚ್. ಟಿ.ಪೋತೆ ಸೃಜನಶೀಲ ಸಾಹಿತ್ಯ ಪ್ರಶಸ್ತಿಗೆ ಬೆಂಗಳೂರಿನ ಡಾ.ಪದ್ಮನಿ ನಾಗರಾಜು ಅವರ ಸಮುದ್ರದ ತೆರೆಯ ಸರಿಸಿ ಕಥಾ ಸಂಕಲನ ಮತ್ತು ವಿಜಯಪುರದ ಡಾ. ಸುಜಾತ ಚಲವಾದಿ ಅವರ ಲಚಮವ್ವ ಮತ್ತು ಇತರ ಕತೆಗಳು 2024ರ ಕೃತಿಗಳನ್ನು ಆಯ್ಕೆಮಾಡಲಾಗಿ ದೆ. ದಿ.ಯಮುನಾಬಾಯಿ ರಾಜಣ್ಣ ಭೋವಿ ಸ್ಮರಣಾರ್ಥ 2024ರ ಸಾಲಿನ ಸೃಜನೇತರ ವಿಭಾಗದ ಪುಸ್ತಕ ಪ್ರಶಸ್ತಿಗೆ ಬಾಗಲಕೋಟೆಯ ಮಹಾದೇವ ಬಸರಕೋಡ ಅವರ ಸುರಧೇನು ಮತ್ತು ತುಮಕೂರಿನ ಅನಂತ ಕುಣಿಗಲ್ ಅವರ 'ಅಪ್ಪನ ಅಟೋಗ್ರಾಫ್' ಕೃತಿಗಳನ್ನು ಆಯ್ಕೆ ಮಾಡಲಾಗಿದೆ ಎಂದು ಬೆರಗು ಪ್ರಕಾಶನ ಸಂಸ್ಥೆಯ ವಿಜಯಲಕ್ಷ್ಮಿ ಆರ್. ಕತ್ತಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಬೆರಗು ಪ್ರಕಾಶನವು ಕಳೆದ 6 ವರ್ಷಗಳಿಂದಲೂ ಪ್ರಶಸ್ತಿಗಳನ್ನು ನೀಡುತ್ತಾ ಬಂದಿದ್ದು. ಪ್ರಸಕ್ತ ವರ್ಷದ ಪ್ರಶಸ್ತಿಗೆ 118 ಪುಸ್ತಕಗಳು, ಹಾಗೂ ಹಸ್ತಪ್ರತಿ ಸ್ಪರ್ಧೆಗೆ 57 ಹಸ್ತಪ್ರತಿಗಳು ನಾಡಿನ ವಿವಿಧ ಭಾಗಗಳಿಂದ ಮತ್ತು ಮಹಾರಾಷ್ಟ್ರ, ಕೇರಳ ಹಾಗೂ ಬೇರೆ ಬೇರೆ ರಾಜ್ಯಗಳಿಂದ ಬಂದಿದ್ದವು. ಖ್ಯಾತ ಕವಿ, ಕತೆಗಾರ ವಾಸುದೇವ ನಾಡಿಗ ಹಾಗೂ ವಿಜಯ ಪುರದ ಸಾಹಿತಿ ಶಂಕರ ಬೈಚಬಾಳ ಅವರು ತೀರ್ಪುಗಾರರಾಗಿ ಕಾರ್ಯನಿರ್ವಹಿಸಿದ್ದರು. 

ಪ್ರಶಸ್ತಿಯ ವಿವರಗಳು : 

ಹಸ್ತಪ್ರತಿ ಪ್ರಶಸ್ತಿಯು ಹತ್ತು ಸಾವಿರ ರೂ. ನಗದು, ಪ್ರಶಸ್ತಿಫಲಕ ಹಾಗೂ ಸ್ಮರಣಿಕೆಯೊಳಗೊಂಡಿದ್ದು ಬೆರಗು ಪ್ರಕಾಶನವು ಹಸ್ತಪ್ರತಿಯನ್ನು ಪ್ರಕಟಿಸುವ ಮೂಲಕ ಗೌರವಿಸಲಿದೆ ಹಾಗೂ ಪುಸ್ತಕ ಪ್ರಶಸ್ತಿಯು ಐದು ಸಾವಿರ ರೂ.ನಗದು, ಪ್ರಶಸ್ತಿ-ಫಲಕ ಹಾಗೂ ಸ್ಮರಣಿಕೆಯೊಳಗೊಂ-ಡಿದ್ದು ಜನವರಿ 2026ರ ಮೊದಲ ವಾರ ಕಡಣಿಯಲ್ಲಿ ನಡೆಯುವ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಪ್ರಕಟಣೆ ತಿಳಿಸಿದೆ.

MORE NEWS

`Growing Up karantha' ಕೃತಿಯನ್ನ ನಾನು ಹಠದಿಂದಲೇ ಬರೆದಿದ್ದೇನೆ; ಉಲ್ಲಾಸ್‌ ಕಾರಂತ್

07-12-2025 ಬೆಂಗಳೂರು

ಬೆಂಗಳೂರು: ಮನುಷ್ಯ ಸಂಸ್ಕೃತಿಯ ಬಹುದೊಡ್ಡ ಕೊಡುಗೆಯಾಗಿ ವಿಭಿನ್ನ ಭಾಷೆಯ ಬರವಣಿಗೆ ಸಮಾಜದ ಪ್ರತಿಬಿಂಬವಾಗಿವೆ. ಓರ್ವ ಉತ್...

ವಿಭಿನ್ನ ಸಾಹಿತ್ಯಗಳ ವಿಚಾರಧಾರೆಗಳ ಸಮ್ಮಿಲನ 'BLF'

07-12-2025 ಬೆಂಗಳೂರು

ಬೆಂಗಳೂರು ಸಾಹಿತ್ಯ ಉತ್ಸವದ 14ನೇ ಆವೃತ್ತಿಯು ಡಿ.6 ಮತ್ತು 7ರಂದು ನಗರದ ಸ್ವಾತಂತ್ಯ್ರ ಉದ್ಯಾನವನದಲ್ಲಿ ಹಮ್ಮಿಕೊಳ್ಳಲಾಗ...

ಓದುಗರು ಹೊಸತನದ ಕೃತಿಗಳನ್ನು ಓದಬೇಕು: ಶ್ರೀನಿವಾಸ ಪ್ರಭು

07-12-2025 ಬೆಂಗಳೂರು

ಬೆಂಗಳೂರು: ಅಂಕಿತ ಪುಸ್ತಕ ಪ್ರಕಾಶನದ ವತಿಯಿಂದ ಲೇಖಕ ಸು. ರುದ್ರಮೂರ್ತಿ ಶಾಸ್ತ್ರಿ ಅವರ 'ಜನ ಭಾರತ', ಉಷಾ ನರಸ...