‘ಅನಂತಸ್ವಾಮಿಯ ನಾಡಗೀತೆ ರಾಗ ವಿವಾದಗೊಳಿಸಿ ಅವಮಾನಿಸದಿರಿ’

Date: 29-01-2020

Location: ಅವಧಿ


ಬೆಂಗಳೂರಿನಲ್ಲಿ 'ಅವಧಿ' ಹಮ್ಮಿಕೊಂಡಿದ್ದ 'ಬಹುರೂಪಿ' ಪ್ರಕಾಶನ ಪ್ರಕಟಿಸಿರುವ 'ನನ್ನ ಅಣ ಮೈಸೂರು ಅನಂತಸ್ವಾಮಿ' ಕೃತಿ ಅವಧಿ ಅಂತರ್ಜಾಲ ತಾಣದಲ್ಲಿ ಬಿಡುಗಡೆ ಗೊಂಡಿತು. ಕೃತಿಯ ಲೇಖಕಿ, ಅನಂತಸ್ವಾಮಿ ಅವರ ಮಗಳು ಸುನೀತಾ ಅನಂತಸ್ವಾಮಿ, ವಿಜಯ್‌ ರಾಮಪ್ಪನ್ ಹಾಗೂ ಪತ್ನಿ ಶಾಂತಾ ಅನಂತಸ್ವಾಮಿ ಹಾಜರಿದ್ದರು.

ಕೃತಿ ಬಿಡುಗಡೆಯ ನಂತರ ಮಾತನಾಡಿ, “2006 ರಲ್ಲಿಯೇ ನಾಡಗೀತೆಗೆ ಯಾವ ರಾಗ ಸಂಯೋಜನೆಯನ್ನು ಉಳಿಸಿಕೊಳ್ಳಬೇಕು ಎಂದು ನಿರ್ಧರಿಸಲು ಸರ್ಕಾರ ರಚಿಸಿದ್ದ ಸಮಿತಿಯು ಮೈಸೂರು ಅನಂತಸ್ವಾಮಿಯವರ ರಾಗವನ್ನು ಶಿಫಾರಸು ಮಾಡಿತ್ತು. ಆದರೂ ಸಹ ಅದನ್ನು ಸರ್ಕಾರ ಅಧಿಕೃತವಾಗಿ ಘೋಷಿಸಿಲ್ಲ. ಇದರಿಂದ ನಾಡಗೀತೆಯ ರಾಗ ವಿವಾದಕ್ಕೆ ತುತ್ತಾಗಿದೆ” ಎಂದು ಬೇಸರ ವ್ಯಕ್ತಪಡಿಸಿದರು.

“ಮೈಸೂರು ಅನಂತಸ್ವಾಮಿಯವರು 'ಜಯ ಭಾರತ ಜನನಿಯ ತನುಜಾತೆ' ಹಾಡಿಗೆ ಸಂಯೋಜಿಸಿದ ರಾಗವನ್ನು ಸ್ವತಃ ಕುವೆಂಪು ಅವರೇ ಮೆಚ್ಚಿದ್ದರು. ಸರ್ಕಾರ ಈ ಗೀತೆಯನ್ನು ನಾಡಗೀತೆ ಎಂದು ಪರಿಗಣಿಸುವ ಸಾಕಷ್ಟು ಮುಂಚೆಯೇ ಅನಂತಸ್ವಾಮಿ ಅವರು ಇದನ್ನು ನಾಡಿನ ಎಲ್ಲೆಡೆ ಹಾಡಿ ಜನಪ್ರಿಯಗೊಳಿಸಿದ್ದರು. ಖ್ಯಾತ ಹಾಡುಗಾರ ಪಿ ಕಾಳಿಂಗರಾಯರೂ ಸಹ ತಮ್ಮ ದಾಟಿಯನ್ನು ಬಿಟ್ಟು, ಮೈಸೂರು ಅನಂತಸ್ವಾಮಿ ಅವರ ಸಂಯೋಜನೆಯನ್ನು ಮೆಚ್ಚಿ ಅದನ್ನು ಅಳವಡಿಸಿಕೊಂಡಿದ್ದರು” ಎಂದರು.

ಅನಂತಸ್ವಾಮಿ ಅವರು ಭಾವಗೀತೆಯ ಲೋಕಕ್ಕೆ ಕೊಟ್ಟ ಕೊಡುಗೆ ಅಪಾರ. ನಾಡಗೀತೆಯ ರಾಗವನ್ನು ವಿವಾದಗೊಳಿಸುವ ಮೂಲಕ ಅವರಿಗೆ ಅವಮಾನ ಮಾಡಬೇಡಿ ಎಂದು ಅವರ ಕುಟುಂಬದವರು ಮನವಿ ಮಾಡಿದರು.

ಮೈಸೂರು ಅನಂತಸ್ವಾಮಿ ಅವರನ್ನು ಆಪ್ತವಾಗಿ ಚಿತ್ರಿಸುವ ಈ ಕೃತಿಯನ್ನು ಪ್ರಸ್ತುತ ಅಮೆರಿಕಾದಲ್ಲಿರುವ ಸುನೀತಾ ಅನಂತಸ್ವಾಮಿ ರಚಿಸಿದ್ದು, ಅಪರೂಪದ ಛಾಯಾಚಿತ್ರಗಳನ್ನು ಹೊಂದಿದೆ. ಲೇಖಕ ಜಿ.ಎನ್. ಮೋಹನ ಇತರೆ ಗಣ್ಯರಿದ್ದರು.

MORE NEWS

25 ಮಂದಿಗೆ ಕೆಯುಡಬ್ಲ್ಯುಜೆ ದತ್ತಿ ನಿಧಿ ಪ್ರಶಸ್ತಿ

28-03-2024 ಬೆಂಗಳೂರು

ಬೆಂಗಳೂರು: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದಿಂದ ಕೊಡಮಾಡುವ ಪ್ರಸಕ್ತ ಸಾಲಿನ ಕೆಯುಡಬ್ಲ್ಯುಜೆ ದತ್ತಿ ನಿಧಿ ಪ್ರಶಸ್...

ಖ್ಯಾತ ರಂಗ ನಿರ್ದೇಶಕ ಶ್ರೀ ಪಾದ ಭಟ್ ಗೆ 'ರಂಗ ಭೂಪತಿ' ಪ್ರಶಸ್ತಿ

28-03-2024 ಬೆಂಗಳೂರು

ಬೆಂಗಳೂರು: ಪ್ರಸಿದ್ಧ ನಾಟಕಕಾರರಾದ ದಿ.ಗೋಪಾಲ ವಾಜಪೇಯಿ ಅವರ ಹೆಸರಿನಲ್ಲಿ ಸ್ಥಾಪಿಸಲಾಗಿರುವ 'ರಂಗ ಭೂಪತಿ' ಪ್ರ...

ದಾವಣಗೆರೆಯ ಎಲ್ಲಾ ಭಾಷಾರಸಸ್ವಾದಗಳನ್ನು ಅಚ್ಚುಕಟ್ಟಾಗಿ ಕಟ್ಟಿಕೊಟ್ಟ ಕೃತಿಯಿದು; ಎಂ. ವಿ. ರೇವಣಸಿದ್ದಯ್ಯ

28-03-2024 ಬೆಂಗಳೂರು

ಬೆಂಗಳೂರು: ಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಅನಿವಾಸಿ ಲೇಖಕ ಶಿಕಾಗೋದ ರವಿ ಹಂಜ್ ಅವರ ಇಂಗ್ಲಿಷ್ ಕೃತಿ ...