ಏಪ್ರಿಲ್ 18ರಂದು ‘ಡಾ.ರಾಜಕುಮಾರ್ ಸಿರಿಗನ್ನಡ ಪ್ರಶಸ್ತಿ’ ಪ್ರದಾನ ಸಮಾರಂಭ

Date: 15-04-2024

Location: ಬೆಂಗಳೂರು


ಕಳೆದ ಇಪ್ಪತ್ತೈದು ವರ್ಷಗಳಿಂದಲೂ ಸಾಹಿತ್ಯಕ, ಸಾಂಸ್ಕೃತಿಕ ಹಾಗೂ ಜನಪರ ಕಾರ್ಯಕ್ರಮಗಳನ್ನು ಯಶಸ್ವಿಯಾಗಿ ನಡೆಸುತ್ತಾ, ಧೀರೋದಾತ್ತ ರಾಜಕಾರಣಿಗಳಾದ ಶ್ರೀ ಶಾಂತವೇರಿ ಗೋಪಾಲಗೌಡ ಮತ್ತು ಕೆಚ್ಚೆದೆಯ ಕಲಿ, ಅಪ್ರತಿಮ ದೇಶಭಕ್ತೆ  ಶ್ರೀಮತಿ ಯಶೋಧರಮ್ಮ ದಾಸಪ್ಪ ಇವರುಗಳ ಹೆಸರಿನಲ್ಲಿ ಪ್ರಶಸ್ತಿಯನ್ನು ಸ್ಥಾಪಿಸಿ ನಾಡು - ನುಡಿಗೆ ಅನುಪಮ ಸೇವೆ ಸಲ್ಲಿಸಿದ ಸಾಧಕರಿಗೆ ಪ್ರಶಸ್ತಿ ನೀಡಿ ಗೌರವಿಸುತ್ತಾ  ಬರುತ್ತಿರುವ ಈ ನಮ್ಮ ಕನ್ನಡ ಜನಶಕ್ತಿ ಕೇಂದ್ರವು, ತನ್ನ ವಿಶಿಷ್ಟ,  ಪ್ರಬುದ್ಧ ಹಾಗೂ ವೈವಿಧ್ಯಮಯ ಕಾರ್ಯಕ್ರಮಗಳಿಂದಾಗಿ ಬೆಂಗಳೂರು ನಗರದ ಸುಸಂಸ್ಕೃತ ನಾಗರೀಕರ ಅಭಿಮಾನ ಹಾಗೂ ಮೆಚ್ಚುಗೆಯನ್ನು ಪಡೆದು ಸದೃಢವಾಗಿ ಮುನ್ನಡೆದಿದೆ. 

ಇದೀಗ, ಭಾರತೀಯ ಚಿತ್ರರಂಗದ ಮಹಾನ್ ಕಲಾವಿದರಾದ ಪದ್ಮಭೂಷಣ ಡಾ. ರಾಜಕುಮಾರ್ ಹೆಸರಿನಲ್ಲಿ ಪ್ರಶಸ್ತಿಯನ್ನು ಸ್ಥಾಪಸಿ, ಸಾಧನೆ ಮಾಡಿದ ಸಾಧಕರಿಗೆ ಪ್ರತಿ ವರ್ಷ ವರನಟ ಡಾ. ರಾಜಕುಮಾರ್ ಸಿರಿಗನ್ನಡ ಪ್ರಶಸ್ತಿ ನೀಡಿ ಗೌರವಿಸಲಾಗುವುದು. ಪ್ರಶಸ್ತಿಯು ರೂ. 25000- ನಗದು, ಕಂಚಿನ ಪಲಕ ಮತ್ತು ಪ್ರಶಸ್ತಿ ಪತ್ರ ಒಳಗೊಂಡಿರುತ್ತದೆ. ಪ್ರಥಮ ವರ್ಷದ ಈ ಪ್ರಶಸ್ತಿಗೆ ಶ್ರೀ ಬಿ. ಕೆ. ಶಿವರಾಂ ಆಯ್ಕೆಯಾಗಿರುತ್ತಾರೆ.

ಶಿವರಾಂ ರವರು ಸಹಾಯಕ ಪೊಲೀಸ್ ಆಯುಕ್ತರಾಗಿ ನಿಷ್ಠೆ , ದಕ್ಷತೆ ಮತ್ತು ಪ್ರಾಮಾಣಿಕತೆಯಿಂದ  ಕರ್ತವ್ಯ ನಿರ್ವಹಿಸಿ ಉತ್ತಮ ಸೇವೆ ಸಲ್ಲಿಸಿರುತ್ತಾರೆ. ಪ್ರಶಸ್ತಿ ಪ್ರದಾನ ಕಾರ್ಯಕ್ರಮ  ಎಪ್ರಿಲ್ 18 ರಂದು ನಡೆಯಲಿದೆ. ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ವಾಟ್ಸಾಪ್ ಮಾಡಲಾಗಿದೆ ಎಂದು ಕನ್ನಡ ಜನಶಕ್ತಿ ಕೇಂದ್ರದ ಸಿ.ಕೆ. ರಾಮೇಗೌಡ ಅವರು ತಿಳಿಸಿದ್ದಾರೆ. 

MORE NEWS

2024ನೇ ಸಾಲಿನ ಬುಕ್‌ ಬ್ರಹ್ಮ ಕಥಾ ಸ್ಪರ್ಧೆ - ಕಾದಂಬರಿ ಪುರಸ್ಕಾರಕ್ಕೆ ಆಹ್ವಾನ

29-04-2024 ಬೆಂಗಳೂರು

ʻಬುಕ್‌ ಬ್ರಹ್ಮ ಸ್ವಾತಂತ್ರ್ಯೋತ್ಸವ ಕಥಾ ಸ್ಪರ್ಧೆ 2024 ಮತ್ತು ಕಾದಂಬರಿ ಪುರಸ್ಕಾರ 2024ʼ ರೂ. 2 ಲಕ್ಷ 69 ಸ...

ಚೆನ್ನವೀರ ಕಣವಿ ಕಾವ್ಯ ಸ್ಪರ್ಧೆ ಮತ್ತು ಶ್ರೀಮತಿ ಶಾಂತಾದೇವಿ ಕಣವಿ ಕಥಾ ಸ್ಪರ್ಧೆಗೆ ಆಹ್ವಾನ 

29-04-2024 ಬೆಂಗಳೂರು

ಕರ್ನಾಟಕ ವಿದ್ಯಾವರ್ಧಕ ಸಂಘ ಧಾರವಾಡ ಇವರ ವತಿಯಂದ ಹಾಗೂ ನಾಡೋಜ ಚೆನ್ನವೀರ ಕಣವಿ ಮತ್ತು ಶ್ರೀಮತಿ ಶಾಂತಾದೇವಿ ಕಣವಿ ದತ್ತ...

ಕನ್ನಡ ಸಾಹಿತ್ಯ ಪರಿಷತ್ತಿನ 2023ನೇ ಸಾಲಿನ ವಿವಿಧ ಪುಸ್ತಕ ದತ್ತಿ ಪ್ರಶಸ್ತಿಗಳಿಗೆ ಕೃತಿಗಳ ಆಹ್ವಾನ

28-04-2024 ಬೆಂಗಳೂರು

ಬೆಂಗಳೂರು: ಕನ್ನಡ ಸಾಹಿತ್ಯ ಪರಿಷತ್ತು 2023ನೇ ಸಾಲಿನಲ್ಲಿ ಪುಸ್ತಕಗಳಿಗೆ ನೀಡಲಾಗುವ ವಿವಿಧ ದತ್ತಿ ಪುರಸ್ಕಾರಗಳಿಗಾಗಿ ಕ...