Date: 22-06-2022
Location: ಕುಣಿಗಲ್ ತಾಲ್ಲೂಕು, ತುಮಕೂರು.
ಕುಣಿಗಲ್‌ನ ಅವ್ವ ಪುಸ್ತಕಾಲಯ ಸಾಹಿತ್ಯ ಬಳಗ ಇದರ ವತಿಯಿಂದ ನರಸಯ್ಯ ಅವರ ಸ್ಮರಣಾರ್ಥ ಕೊಡಮಾಡುವ "2022ರ ಅವ್ವ ಸೃಜನಶೀಲ ಸಾಹಿತ್ಯ ಪ್ರಶಸ್ತಿ"ಗಾಗಿ 2020ರ ಜುಲೈ ತಿಂಗಳಿಂದ 2022 ರ ಜೂನ್ ತಿಂಗಳವರೆ ಪ್ರಕಟವಾಗಿರುವ ಕನ್ನಡ ಸಾಹಿತ್ಯ ಕೃತಿಗಳನ್ನು ಆಹ್ವಾನಿಸಲಾಗಿದೆ.
ಸ್ಪರ್ಧೆಯ ನಿಯಮಗಳು: ಈ ಹಿಂದೆ ಪ್ರಶಸ್ತಿ ಪಡೆದವರು ಈ ವರ್ಷದ ಪ್ರಶಸ್ತಿಗೆ ಅರ್ಹರಾಗಿರುವುದಿಲ್ಲ. ಕೃತಿಯ ಮೂರು ಪ್ರತಿಗಳನ್ನು ಪ್ರತ್ಯೇಕ ಹಾಳೆಯಲ್ಲಿ ಬರೆದ ಸ್ವಪರಿಚಯ, ವಿಳಾಸ ಮತ್ತು ಇತ್ತೀಚಿನ ಭಾವಚಿತ್ರದೊಂದಿಗೆ ಅಂಚೆಯ ಮೂಲಕವೇ (ರಿಜಿಸ್ಟರ್ ಪೋಸ್ಟ್) ಕಳಿಸಬಬೇಕು. ಒಬ್ಬ ಲೇಖಕ ತನ್ನ ಎರಡು ಕೃತಿಗಳ ಮೂಲಕ ಈ ಪ್ರಶಸ್ತಿಗೆ ಅರ್ಜಿ ಸಲ್ಲಿಸಬಹುದು. ಕೃತಿಗಳನ್ನು ಹಿಂತಿರುಗಿಸಲಾಗುವುದಿಲ್ಲ. ಯಾವುದೇ ಪತ್ರ ವ್ಯವಹಾರಕ್ಕೆ ಅವಕಾಶವಿಲ್ಲ. ಆತ್ಮಕತೆ, ವಿಮರ್ಶಾ ಸಂಕಲನ, ಪಿ.ಹೆಚ್.ಡಿ ಪ್ರಬಂಧಗಳು, ಅನುವಾದ ಹಾಗೂ ಸಂಶೋಧನಾ ಕೃತಿಗಳನ್ನು ಹೊರತುಪಡಿಸಿ ಸಾಹಿತ್ಯದ ಯಾವುದೇ ಪ್ರಕಾರದ (ಕತೆ, ಕಾದಂಬರಿ, ಕವಿತೆ, ಹನಿಗವನ, ನಾಟಕ, ಲೇಖನ, ಪ್ರಬಂಧ, ಪ್ರವಾಸ ಕಥನ ಇತ್ಯಾದಿ) ಕೃತಿಗಳೊಂದಿಗೆ ಅರ್ಜಿ ಸಲ್ಲಿಸಬಹುದು.
ಮೊದಲ ಸ್ಥಾನ ಪಡೆದ ಸೃಜನಶೀಲ ಕೃತಿಗೆ ಈ ವರ್ಷದ ಪ್ರಶಸ್ತಿಯ ಜೊತೆಗೆ 1501 ರೂಗಳ ನಗದು ಬಹುಮಾನ, 1500ರೂ ಮೌಲ್ಯದ ಪುಸ್ತಕ ಬಹುಮಾನ ಮತ್ತು ಫಲಕ ನೀಡಲಾಗುವುದು. ಸೃಜನಶೀಲವೆನಿಸಿದ ಮೂರು ಕೃತಿಗಳಿಗೆ ತಲಾ 500ರೂಗಳ ನಗದು ಬಹುಮಾನ, 500ರೂ ಮೌಲ್ಯದ ಪುಸ್ತಕ ಬಹುಮಾನ ಹಾಗೂ ಪ್ರಮಾಣ ಪತ್ರ ನೀಡಿ ಅಭಿನಂದಿಸಲಾಗುವುದು. ಅಕ್ಟೋಬರ್ ತಿಂಗಳಾಂತ್ಯಕ್ಕೆ ಕಿರುಪಟ್ಟಿ ಬಿಡುಗಡೆ ಮಾಡಲಾಗುವುದು.
ಆಸಕ್ತರು ತಮ್ಮ ಕೃತಿಗಳನ್ನು 2022ರ ಆಗಸ್ಟ್ 31ರ ಒಳಗೆ ಅವ್ವ ಪುಸ್ತಕಾಲಯ, #189, ಕುಡಿಯುವ ನೀರಿನ ಘಟಕ, ಕೆಂಚನಹಳ್ಳಿ ಅಂಚೆ ಹುಲಿಯೂರುದುರ್ಗ ಹೋಬಳಿ, ಕುಣಿಗಲ್ ತಾಲ್ಲೂಕು ತುಮಕೂರು ಜಿಲ್ಲೆ - 572123 ವಿಳಾಸಕ್ಕೆ ಕಳುಹಿಸಿಕೊಡಬೇಕು.
ಹೆಚ್ಚಿನ ಮಾಹಿತಿಗಾಗಿ ಅವ್ವ ಪುಸ್ತಕಾಲಯ ತಂಡವನ್ನು ಫೇಸ್ಬುಕ್, ಯೂಟ್ಯೂಬ್, ಇನ್ಸ್ಟಾಗ್ರಾಮ್, ಬ್ಲಾಗ್, ಕ್ಲಬ್ ಹೌಸ್ ಗಳಲ್ಲಿ ಹಿಂಬಾಲಿಸಬಹುದು.
ಮೇಲ್ : avvapustakaalaya@gmail.com
ಮೊ : 8548948660
ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ಕಾರ್ಯನಿರ್ವಹಿಸುವ ಅವಕಾಶವನ್ನು ಕನ್ನಡಿಗರಿಗೆ ಕೊಡುವುದಾಗಿ ನಾಡೋಜ ಡಾ. ಮಹೇಶ ಜೋಶಿ ಅವ...
ಬೆಂಗಳೂರು: ಕನ್ನಡ ಸಾಹಿತ್ಯ ಪರಿಷತ್ತು 2022- 23ನೇ ಸಾಲಿನ ಕನ್ನಡ ಪ್ರವೇಶ, ಕಾವ, ಜಾಣ, ರತ್ನ ಪರೀಕ್ಷೆಗಳಿಗೆ ಅರ್ಜಿಗಳನ...
ಕನ್ನಡದ ಹೆಸರಾಂತ ಸಾಹಿತಿ ಡಾ. ಮಾಸ್ತಿ ವೆಂಕಟೇಶ ಅಯ್ಯಂಗಾರ್ ಅವರ 131ನೇ ವರ್ಷದ ಜನ್ಮದಿನದ ಪ್ರಯುಕ್ತ ಡಾ. ಮಾಸ್ತ...
©2022 Book Brahma Private Limited.