ಆರ್ಥಿಕ ಕುಸಿತದಿಂದ ಮಾನವೀಯ ಮೌಲ್ಯಗಳಿಗೆ ಅಪಾಯ ಎದುರಾಗಿದೆ: ಬರಗೂರು ರಾಮಚಂದ್ರಪ್ಪ

Date: 08-09-2019

Location: ಹರಪನಹಳ್ಳಿ


ಹರಪನಹಳ್ಳಿಯಲ್ಲಿ ಭಾನುವಾರ ಬಂಡಾಯ ಸಾಹಿತ್ಯ ಸಂಘಟನೆ ಆಯೋಜಿಸಿದ್ದ ‘ಸಮಕಾಲೀನ ಸಂದರ್ಭದಲ್ಲಿ ಸಂವಿಧಾನ ಮತ್ತು ಚಳವಳಿಗಳು’ ಕುರಿತ ವಿಚಾರ ಸಂಕಿರಣವನ್ನು ಬಂಡಾಯ ಸಾಹಿತಿ ಬರಗೂರು ರಾಮಚಂದ್ರಪ್ಪ ಡೊಳ್ಳು ಬಾರಿಸಿ ಉದ್ಘಾಟಿಸಿದರು. .

ವಿಚಾರ ಸಂಕಿರಣ ಉದ್ಘಾಟನೆ ಮಾಡಿ ಮಾತನಾಡಿದ ಬರಗೂರು ರಾಮಚಂದ್ರಪ್ಪ ಅವರು ಜಗತ್ತಿನಲ್ಲಿ ನಕಲಿ ದೇವರ ಸಂಖ್ಯೆ ಹೆಚ್ಚಾಗಿ, ದನಿಯಿಲ್ಲದ ದೇವರನ್ನೇ ಶೋಷಣೆ ಮಾಡಲಾಗುತ್ತಿದೆ. ಆರ್ಥಿಕ ಕುಸಿತದಿಂದ ಮಾನವೀಯ ಮೌಲ್ಯಗಳಿಗೆ ಅಪಾಯ ಎದುರಾಗಿದೆ. ಜನಪ್ರತಿನಿಧಿಗಳು ಸ್ವತಂತ್ರ ವ್ಯಕ್ತಿತ್ವ ರೂಪಿಸಿಕೊಂಡು, ಪ್ರಗತಿಪರರೆಲ್ಲರೂ ಒಗ್ಗೂಡಿದರೆ ಮಾತ್ರ ಪ್ರಜಾಪ್ರಭುತ್ವ ಉಳಿಯುತ್ತದೆ ಎಂದು ಅಭಿಪ್ರಾಯಪಟ್ಟರು.

ವಿಚಾರವಾದಿ ರಾಜಪ್ಪ ದಳವಾಯಿ ಅಧ್ಯಕ್ಷತೆ ವಹಿಸಿದ್ದರು. ಕುಪ್ಪಳ್ಳಿ ಕುವೆಂಪು ಕನ್ನಡ ಅಧ್ಯಯನ ಪೀಠದ ನಿರ್ದೇಶಕ ಡಾ.ಬಿ.ಎಂ. ಪುಟ್ಟಯ್ಯ, ಸಂಚಾಲಕ ಹೊಸಳ್ಳಿ ಮಲ್ಲೇಶ್, ಡಾ.ವೀಣಾ ಮಹಾಂತೇಶ, ಅಬ್ದುಲ್‍ ತೋರಣಗಲ್ಲು, ಎಂ.ತಿಮಪ್ಪ, ಬಸವರಾಜ ಸಂಗಪ್ಪನವರ್, ಇಸ್ಮಾಯಿಲ್ ಎಲಿಗಾರ, ಅಂಜಿನಪ್ಪ, ಶಿಕಾರಿ ಬಾಲಪ್ಪ, ಎಂ. ಗಂಗಪ್ಪ ಇದ್ದರು

MORE NEWS

ಅವಿರತ ಹರೀಶ್ ಅವರ ಅಭಿನಂದನಾ ಕಾರ್ಯಕ್ರಮ ಎಲ್ಲರಿಗೂ ಆದರ್ಶವಾಗಿದೆ; ಬರಗೂರು ರಾಮಚಂದ್ರಪ್ಪ

25-04-2024 ಬೆಂಗಳೂರು

ಬೆಂಗಳೂರು: ಅವಿರತ ಹರೀಶ್ ಗೆಳೆಯರ ಬಳಗದಿಂದ ಹಮ್ಮಿಕೊಂಡಿದ್ದ ಪ್ರಕಾಶಕ, ಲೇಖಕ, ಸಂಘಟಕ ಅವಿರತ ಹರೀಶ್ 60ರ ಸಾಂಸ್ಕೃತಿಕ ಸ...

ಮಾತೋಶ್ರೀ ರತ್ನಮ್ಮ ಹೆಗ್ಗಡೆ 47ನೇ ಮಹಿಳಾ ಗ್ರಂಥ ಬಹುಮಾನಕ್ಕೆ ಕೃತಿಗಳ ಆಹ್ವಾನ

25-04-2024 ಬೆಂಗಳೂರು

ಧಾರವಾಡ: ಕರ್ನಾಟಕ ವಿದ್ಯಾವರ್ಧಕ ಸಂಘ ಧಾರವಾದಿಂದ 2023ನೇ ವರ್ಷದ ಮಹಿಳಾ ಶ್ರೇಷ್ಠ ಕನ್ನಡ ಕೃತಿಗಳಿಗೆ “ಮಾತೋಶ್ರೀ...

ಗಿರಡ್ಡಿ ಗೋವಿಂದರಾಜ ವಿಮರ್ಶಾ ಪ್ರಶಸ್ತಿಗೆ ಕೃತಿಗಳ ಆಹ್ವಾನ

25-04-2024 ಬೆಂಗಳೂರು

ಧಾರವಾಡ: ಡಾ. ಗಿರಡ್ಡಿ ಗೋವಿಂದರಾಜ ಫೌಂಡೇಶನ್ ನಿಂದ “ವಿಮರ್ಶಾ ಪ್ರಶಸ್ತಿ"ಗೆ ವಿಮರ್ಶಾ ಕೃತಿಗಳನ್ನು ಆಹ್ವಾ...