ಬೇಲೂರು ತಾಲ್ಲೂಕು ಸಮ್ಮೇಳನಾಧ್ಯಕ್ಷರಾಗಿ ಬೇಲೂರು ರಘುನಂದನ್ ಆಯ್ಕೆ

Date: 11-01-2020

Location: ಬೇಲೂರು


ಬೇಲೂರು ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಆಯೋಜಿಸಿರುವ 8ನೇ ಕನ್ನಡ ಸಾಹಿತ್ಯ ಸಮ್ಮೇಳನ ಸರ್ವಾಧ್ಯಕ್ಷರಾಗಿ ಬೇಲೂರು ರಘುನಂದನ್ ಅವರು ಆಯ್ಕೆಯಾಗಿದ್ದಾರೆ. ಜನವರಿ 11ರಂದು ಬೆಳಗ್ಗೆ 10:30ರಿಂದ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯಲಿದೆ.

ಹಾಸನ ಜಿಲ್ಲೆಯ ಜಗದ್ವಿಖ್ಯಾತ ಬೇಲೂರು ಪಟ್ಟಣದ ಸಂಜಾತರಾಗಿರುವ ಪ್ರೊ.ಬೇಲೂರು ರಘುನಂದನ್ ಅವರು, ಬೇಲೂರಿನಲ್ಲಿ ಪದವಿ ಪಡೆದರು. ಹಾಸನದ ಹೇಮಗಂಗೋತ್ರಿಯಲ್ಲಿ ಚಿನ್ನದ ಪದಕದೊಂದಿಗೆ ಎಂ.ಎ, ಪದವಿ ಪಡೆದರು. ಕನ್ನಡ ವಿಶ್ವವಿದ್ಯಾನಿಲಯದಲ್ಲಿ ಎಂ.ಫಿಲ್.ಮುಗಿಸಿ ಪಿಎಚ್ ಡಿ ಸಂಶೋಧನೆ ನಡೆಸುತ್ತಿದ್ದಾರೆ. ಕನ್ನಡ ಸಹ ಪ್ರಾಧ್ಯಾಪಕರಾಗಿ ವೃತ್ತಿ ಆರಂಭಿಸಿದ ಇವರು ಬೆಂಗಳೂರಿನ ಪ್ರಥಮ ದರ್ಜೆ ಕಾಲೇಜಿನಲ್ಲಿ ಬೋಧಕರಾಗಿದ್ದಾರೆ.

ಬೇಲೂರಿನ ಗಮಕ ವಿದುಷಿ ಶ್ರೀಮತಿ ವನಮಲಾ ಅವರಲ್ಲಿ ಗಮಕ ಕಲೆಯ ಅಧ್ಯಯನ ಮಾಡಿ ‘ಗಮಕಪಾರೀಣ’ ಪರೀಕ್ಷೆಯಲ್ಲೂ ಉತ್ತೀರ್ಣರಾಗಿದ್ದಾರೆ. ಕವನ ಸಂಕಲನಗಳು, ಕಟ್ಟುಪದಗಳು, ಮಕ್ಕಳ ಸಾಹಿತ್ಯ, ಪ್ರವಾಸಸಾಹಿತ್ಯ, ಅಂಕಣಗಳು, ನಾಟಕಗಳು, ಕಥೆಗಳು ಮುಂತಾದ ಸಾಹಿತ್ಯ ಸೃಷ್ಟಿ ಮಾಡಿದ್ದಾರೆ. ಸಾಹಿತ್ಯ ಸಂಪಾದನಾ ಕಾರ್ಯವನ್ನು ನಿರ್ವಹಿಸಿದ್ದಾರೆ. ಈ ತನಕ 30ಕ್ಕೂ ಹೆಚ್ಚು ಕೃತಿಗಳು ಬೆಳಕು ಕಂಡಿದ್ದು, ಕೆಲವು ಕೃತಿಗಳು ವಿವಿಧ ಭಾಷೆಗಳಿಗೆ ಅನುವಾದಗೊಂಡಿವೆ. ಇವರ ನಾಟಕಗಳು ರಂಗಭೂಮಿಯಲ್ಲಿ ಪ್ರದರ್ಶನಗಳನ್ನು ಕಂಡಿವೆ.

ಕರ್ನಾಟಕ ನಾಟಕ ಅಕಾಡೆಮಿಯ ಸದಸ್ಯರಾಗಿಯೂ ಸೇವೆ ಸಲ್ಲಿಸಿದ್ದಾರೆ. ಸಾಹಿತ್ಯ ಅಕಾಡೆಮಿ, ರಾಜ್ಯ ಹಾಗೂ ಅಂತಾರಾಜ್ಯ ವಿವಿಧ ಸಂಘಸಂಸ್ಥೆಗಳು ಸನ್ಮಾನಿಸಿವೆ. ಆರ್ಯಭಟ, ಕನ್ನಡ ಸೇವಾರತ್ನ, ಸಾಲುಮರದ ತಿಮ್ಮಕ್ಕ ಹಸುರು ಪ್ರಶಸ್ತಿ, ಅನೇಕ ದತ್ತಿ ಪ್ರಶಸ್ತಿಗಳು ಸಂದಿವೆ.

ಸಾಹಿತ್ಯ ಸಮ್ಮೇಳನವನ್ನು ಖ್ಯಾತ ಚಲನ ಚಿತ್ರ ನಟ ಮಂಡ್ಯ ರಮೇಶ್ ಅವರು ಉದ್ಘಾಟಿಸಲಿದ್ದಾರೆ. ಮಾಜಿ ಪ್ರಧಾನಿ ದೇವೇಗೌಡ, ಸಂಸದ ಪ್ರಜ್ವಲ್ ರೇವಣ್ಣ, ಸಚಿವ ಜೆ.ಸಿ.ಮಾಧುಸ್ವಾಮಿ ಉಪಸ್ಥಿತರಿರಲಿದ್ದಾರೆ. ಶಾಸಕ ಕೆ.ಎಸ್.ಲಿಂಗೇಶ್ ಅಧ್ಯಕ್ಷತೆ ವಹಿಸಲಿದ್ದಾರೆ.

MORE NEWS

ವಿನಾಯಕ ಗೋಕಾಕ್ ವಾಙ್ಮಯ ಟ್ರಸ್ಟ್‌ನ ಅಧ್ಯಕ್ಷರಾಗಿ ನರಹಳ್ಳಿ ಬಾಲಸುಬ್ರಹ್ಮಣ್ಯ ಆಯ್ಕೆ

27-04-2024 ಬೆಂಗಳೂರು

ಬೆಂಗಳೂರು: ಸಾಹಿತ್ಯ ಮತ್ತು ಸಾಂಸ್ಕೃತಿಕ ಕ್ಷೇತ್ರಗಳಲ್ಲಿ ಗಣನೀಯ ಕಾರ್ಯಕ್ರಮಗಳನ್ನು ರೂಪಿಸಿ ಪ್ರಸ್ತುತಪಡಿಸುತ್ತಿರುವ ವ...

ಅವಿರತ ಹರೀಶ್ ಅವರ ಅಭಿನಂದನಾ ಕಾರ್ಯಕ್ರಮ ಎಲ್ಲರಿಗೂ ಆದರ್ಶವಾಗಿದೆ; ಬರಗೂರು ರಾಮಚಂದ್ರಪ್ಪ

25-04-2024 ಬೆಂಗಳೂರು

ಬೆಂಗಳೂರು: ಅವಿರತ ಹರೀಶ್ ಗೆಳೆಯರ ಬಳಗದಿಂದ ಹಮ್ಮಿಕೊಂಡಿದ್ದ ಪ್ರಕಾಶಕ, ಲೇಖಕ, ಸಂಘಟಕ ಅವಿರತ ಹರೀಶ್ 60ರ ಸಾಂಸ್ಕೃತಿಕ ಸ...

ಮಾತೋಶ್ರೀ ರತ್ನಮ್ಮ ಹೆಗ್ಗಡೆ 47ನೇ ಮಹಿಳಾ ಗ್ರಂಥ ಬಹುಮಾನಕ್ಕೆ ಕೃತಿಗಳ ಆಹ್ವಾನ

25-04-2024 ಬೆಂಗಳೂರು

ಧಾರವಾಡ: ಕರ್ನಾಟಕ ವಿದ್ಯಾವರ್ಧಕ ಸಂಘ ಧಾರವಾದಿಂದ 2023ನೇ ವರ್ಷದ ಮಹಿಳಾ ಶ್ರೇಷ್ಠ ಕನ್ನಡ ಕೃತಿಗಳಿಗೆ “ಮಾತೋಶ್ರೀ...