ಬೆಂಗಳೂರು ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಪ್ರೊ.ಎಚ್.ಎಸ್.ಶ್ರೀಮತಿ

Date: 25-01-2023

Location: ಬೆಂಗಳೂರು


ಬೆಂಗಳೂರು ನಗರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ನಡೆಸಲು ಉದ್ದೇಶಿಸಿರುವ 16ನೇ ಬೆಂಗಳೂರು ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಹಿರಿಯ ಲೇಖಕಿ, ಸ್ತ್ರೀವಾದಿ ಚಿಂತಕಿ ಪ್ರೊ.ಎಚ್.ಎಸ್.ಶ್ರೀಮತಿ ಅಧ್ಯಕ್ಷರಾಗಲಿದ್ದಾರೆ.

ಇತ್ತೀಚೆಗೆ ನಡೆದ ಬೆಂಗಳೂರು ನಗರ ಪರಿಷತ್ತಿನ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಸರ್ವಾನುಮತದಿಂದ ಎಚ್‌.ಎಸ್.ಶ್ರೀಮತಿ ಅವರನ್ನು ಆಯ್ಕೆ ಮಾಡಲಾಯಿತು, ಮೂಲತಃ ಹೊಸಕೋಟೆಯವರಾದ ಇವರು, ಹಂಪಿಯ ಕನ್ನಡ ವಿಶ್ವವಿದ್ಯಾಲಯದಲ್ಲಿ ಪ್ರಾಧ್ಯಾಪಕರಾಗಿ, ಕಾರ್ಯನಿರ್ವಹಿಸಿ, ನಿವೃತ್ತರಾಗಿರುತ್ತಾರೆ, ಎಚ್‌.ಎಸ್‌.ಶ್ರೀಮತಿ ಅವರು ''ಸ್ತ್ರೀವಾದ ತಾತ್ವಿಕತೆ' 'ಸ್ತ್ರೀವಾದ ಚಿ೦ತನೆ ಮತ್ತು ಹೋರಾಟ', 'ಮಹಿಳಾ ಆರ್ಥಿಕತೆ' ಮುಂತಾದ ಹತ್ತಕ್ಕೂ ಹೆಚ್ಚು ಸ್ವತಂತ್ರ ಕೃತಿಗಳನ್ನೂ, ಸಿಮೊನ್ ದ ಬೋವ ಅವರ 'ದಿ ಸೆಕೆಂಡ್ ಸೆಕ್ಸ್, ಜೆರಾಲ್ಡಿನ್ ಪೋರ್ಬ್ ಅವರ 'ಆಧುನಿಕ ಭಾರತದಲ್ಲಿ ಮಹಿಳೆ' ಮೊದಲಾದ ಹತ್ತಕ್ಕೂ ಹೆಚ್ಚು ಅನುವಾದ ಕೃತಿಗಳನ್ನೂ, 'ಕನ್ನಡ ಮಹಿಳಾ ಸಾಹಿತ್ಯ ಚರಿತ್ರೆ' ಎಂಬ ಬೃಹತ್ ಗ್ರಂಥವನ್ನು ಸಂಪಾದಿಸಿದ್ದಾರೆ. ಹೀಗೆ ಸೃಜನಶೀಲ, ಸಂಶೋಧನೆ ಶ್ರೀಮಂತಗೊಳಿಸಿರುತ್ತಾರೆ. ಅನುವಾದ ಸಾಹಿತ್ಯಗಳ ಮೂಲಕ ಕನ್ನಡ ಸಾರಸ್ವತ ಲೋಕಕ್ಕೆ ತಮ್ಮದೇ ಆದ ಕೊಡುಗೆ ನೀಡಿದ್ದಾರೆ.

MORE NEWS

ಅವಿರತ ಹರೀಶ್ ಅವರ ಅಭಿನಂದನಾ ಕಾರ್ಯಕ್ರಮ ಎಲ್ಲರಿಗೂ ಆದರ್ಶವಾಗಿದೆ; ಬರಗೂರು ರಾಮಚಂದ್ರಪ್ಪ

25-04-2024 ಬೆಂಗಳೂರು

ಬೆಂಗಳೂರು: ಅವಿರತ ಹರೀಶ್ ಗೆಳೆಯರ ಬಳಗದಿಂದ ಹಮ್ಮಿಕೊಂಡಿದ್ದ ಪ್ರಕಾಶಕ, ಲೇಖಕ, ಸಂಘಟಕ ಅವಿರತ ಹರೀಶ್ 60ರ ಸಾಂಸ್ಕೃತಿಕ ಸ...

ಮಾತೋಶ್ರೀ ರತ್ನಮ್ಮ ಹೆಗ್ಗಡೆ 47ನೇ ಮಹಿಳಾ ಗ್ರಂಥ ಬಹುಮಾನಕ್ಕೆ ಕೃತಿಗಳ ಆಹ್ವಾನ

25-04-2024 ಬೆಂಗಳೂರು

ಧಾರವಾಡ: ಕರ್ನಾಟಕ ವಿದ್ಯಾವರ್ಧಕ ಸಂಘ ಧಾರವಾದಿಂದ 2023ನೇ ವರ್ಷದ ಮಹಿಳಾ ಶ್ರೇಷ್ಠ ಕನ್ನಡ ಕೃತಿಗಳಿಗೆ “ಮಾತೋಶ್ರೀ...

ಗಿರಡ್ಡಿ ಗೋವಿಂದರಾಜ ವಿಮರ್ಶಾ ಪ್ರಶಸ್ತಿಗೆ ಕೃತಿಗಳ ಆಹ್ವಾನ

25-04-2024 ಬೆಂಗಳೂರು

ಧಾರವಾಡ: ಡಾ. ಗಿರಡ್ಡಿ ಗೋವಿಂದರಾಜ ಫೌಂಡೇಶನ್ ನಿಂದ “ವಿಮರ್ಶಾ ಪ್ರಶಸ್ತಿ"ಗೆ ವಿಮರ್ಶಾ ಕೃತಿಗಳನ್ನು ಆಹ್ವಾ...