`ಭಾರತದ ಸ್ವಾತಂತ್ರ್ಯ ಚಳುವಳಿಯಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ರ ಪಾತ್ರ' ರಾಜ್ಯ ಮಟ್ಟದ ಪ್ರಬಂಧ ಸ್ಪರ್ಧೆ

Date: 31-07-2022

Location: ಡಾ.ಬಿ.ಆರ್.ಅಂಬೇಡ್ಕರ್ ದಲಿತರ ದಂಡು, ನಂದಿನ ಬಡಾವಣೆ, ಬೆಂಗಳೂರು.


75ನೇ ವರ್ಷದ ಭಾರತ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಡಾ. ಬಿ.ಆರ್.ಅಂಬೇಡ್ಕರ್ ದಲಿತರ ದಂಡು ಹಾಗೂ ಬುದ್ದ ಬುಕ್ ಹೌಸ್ ಇವರ ಜಂಟಿ ಸಹಯೋಗದಲ್ಲಿ ರಾಜ್ಯ ಮಟ್ಟದ ಉಚಿತ ಪ್ರಬಂಧ ಸ್ಪರ್ಧೆಯನ್ನು ಹಮ್ಮಿಕೊಳ್ಳಲಾಗಿದೆ. ಸ್ಪರ್ಧೆಗಾಗಿ "ಭಾರತದ ಸ್ವಾತಂತ್ರ್ಯ ಚಳುವಳಿಯಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ರ ಪಾತ್ರ" ಎಂಬ ವಿಷಯವನ್ನು ಆಯ್ಕೆ ಮಾಡಿಕೊಳ್ಳಲಾಗಿದೆ.

ಸ್ಪರ್ಧೆಯಲ್ಲಿ ಪ್ರಥಮ ಸ್ಥಾನಕ್ಕೆ ಆಯ್ಕೆಯಾಗುವ ಒಬ್ಬ ವಿಜೇತರಿಗೆ 1500ರೂ., ದ್ವಿತೀಯ ಸ್ಥಾನಕ್ಕೆ 1000ರೂ. ಹಾಗೂ ತೃತೀಯ ಬಹುಮಾನವಾಗಿ ಇಬ್ಬರಿಗೆ 500ರೂ ನೀಡಲಾಗುವುದು. ಜೊತೆಗೆ ಆಯ್ಕೆಯಾದ ವಿಜೇತರಿಗೆ ಪ್ರಶಸ್ತಿ ಮೊತ್ತದ ಹಣ, ಇ-ಸರ್ಟಿಫೀಕೆಟ್ ಹಾಗೂ ಪುಸ್ತಕಗಳು ಬಹುಮಾನವಾಗಿ ನೀಡಲಾಗುತ್ತದೆ. ಸ್ಪರ್ಧೆಯಲ್ಲಿ ಭಾಗವಹಿಸುವ ಎಲ್ಲಾ ಸ್ಪರ್ಧಿಗಳಿಗೆ ಇ- ಸರ್ಟಿಫಿಕೇಟ್ ನೀಡಲಾಗುವುದು. ಸ್ಪರ್ಧೆಯಲ್ಲಿ ಭಾಗವಹಿಸಿದ ಉತ್ತಮ ಪ್ರಬಂಧಗಳನ್ನು ಮುಂದಿನ ದಿನಗಳಲ್ಲಿ "ಭಾರತದ ಸ್ವಾತಂತ್ರ್ಯ ಚಳುವಳಿಯಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಪಾತ್ರ" ಎಂಬ ಪುಸ್ತಕವನ್ನು ಹೊರತರಲಾಗುತ್ತಿದ್ದು, ಆ ಪುಸ್ತಕದಲ್ಲಿ ಪ್ರಕಟಿಸಲಾಗುವುದು.

ಸ್ಫರ್ಧೆಯ ನಿಯಮಗಳು: ಕಥೆಯು ಎ4 ಹಾಳೆಯ ಒಂದು ಮಗ್ಗಲಿನಲ್ಲಿ ಕೈಬರಹದ ನಾಲ್ಕು ಪುಟಗಳು ಮೀರದಂತೆ ಇರಬೇಕು. ಪ್ರಬಂಧ ಸ್ಪರ್ಧೆಯಲ್ಲಿ ಭಾಗವಹಿಸುವ ಅಭ್ಯರ್ಥಿಗಳು ಒಂದು ಪ್ರತ್ಯೇಕ ಹಾಳೆಯಲ್ಲಿ ಸ್ಪಷ್ಟವಾಗಿ ಕನ್ನಡದಲ್ಲಿ ಪೂರ್ಣ ಹೆಸರು, ವಿಳಾಸ, ವಾಟ್ಸಪ್ ಫೋನ್ ನಂಬರ್ ಬರೆದು ಪ್ರಬಂಧದೊಂದಿಗೆ ಕಳುಹಿಸಬೇಕು. ಆಗಸ್ಟ್ 10 ರಂದು ಸ್ಪರ್ಧೆಯ ಫಲಿತಾಂಶ ಪ್ರಕಟಿಸಲಾಗುವುದು. ಈ ಸ್ಪರ್ಧೆಯಲ್ಲಿ 8ನೇ ತರಗತಿಯ ಶಾಲಾ ವಿದ್ಯಾರ್ಥಿಗಳಿಂದ ಪದವಿ ಹಂತದ ಕಾಲೇಜು ವಿದ್ಯಾರ್ಥಿಗಳು ಮುಕ್ತವಾಗಿ ಭಾಗವಹಿಸಬಹುದು.

ಕಥೆಗಳನ್ನು ದಿನಾಂಕ 31/07/2022ರ ಒಳಗೆ ಡಾ.ಬಿ.ಆರ್.ಅಂಬೇಡ್ಕರ್ ದಲಿತರ ದಂಡು(ರಿ). ನಂ-5. 1ನೇ ಅಡ್ಡರಸ್ತೆ, 1ನೇ ಮುಖ್ಯ ರಸ್ತೆ, ಕಂಠೀರವನಗರ, ನಂದಿನಿ ಬಡಾವಣೆ, ಬೆಂಗಳೂರು- 560096 ವಿಳಾಸಕ್ಕೆ ನೇರವಾಗಿ/ ಅಂಚೆ ಮೂಲಕ ಅಥವಾ ಕೊರಿಯರ್‌ ಮೂಲಕ ಕಳುಹಿಸಬೇಕು.

 

MORE NEWS

ಸಾಹಿತ್ಯ ಕೃತಿಗಳು ಸಮಾಜದ ಹಲವು ಮುಖಗಳನ್ನು ತೋರಿಸುವ ಶಕ್ತಿ ಪಡೆದಿವೆ; ದೀಪಾ ಭಾಸ್ತಿ

13-12-2025 ಬೆಂಗಳೂರು

ಬಸವಕಲ್ಯಾಣ: ವಚನ ಸಾಹಿತ್ಯದಿಂದ ಈ ನೆಲದ ಭಾಷಿಕ ಮತ್ತು ಸಾಂಸ್ಕೃತಿಕ ಶ್ರೀಮಂತಿಕೆ ಹೆಚ್ಚಾಗಿದೆ ಎಂದು ಅಂತರ್ ರಾಷ್ಟ್ರೀಯ ...

2026ನೇ ಸಾಲಿನ ಟೊಟೊ ಪುರಸ್ಕಾರದ ಮೊದಲನೇ ಪಟ್ಟಿ ಬಿಡುಗಡೆ

12-12-2025 ಬೆಂಗಳೂರು

2026ನೇ ಸಾಲಿನ ಟೊಟೊ ಪುರಸ್ಕಾರಕ್ಕೆ ಕನ್ನಡ ವಿಭಾಗದಲ್ಲಿ ಒಂಭತ್ತು ಜನ ಯುವ ಸೃಜನಶೀಲ ಬರಹಗಾರರ ಹೆಸರನ್ನ ಮೊದಲನೇ ಪಟ್ಟಿಗ...

ಮಕ್ಕಳಲ್ಲಿ ಕಲ್ಪನಾ ಲೋಕ ಬೆಳೆಸಿ: ಬಸು ಬೇವಿನಗಿಡದ

10-12-2025 ಧಾರವಾಡ

ಧಾರವಾಡ: ಮಕ್ಕಳಲ್ಲಿ ಕಲ್ಪನಾ ಶಕ್ತಿ ಬೆಳೆಸುವುದರ ಜೊತೆಗೆ ಓದಿನ ಅಭಿರುಚಿ ಹಿಗ್ಗಿಸಬೇಕಿದೆ. ಅಂದಾಗ ಅವರು ಓದಿನ ರುಚಿಯೊಂ...