ಬಿ.ಎಂ.ಶ್ರೀ. ಪ್ರತಿಷ್ಠಾನದ ಗ್ರಂಥಾಲಯ ವಿಭಾಗದಿಂದ `ಪುಸ್ತಕ ಸಂತೆ' ವಿಶೇಷ ಕಾರ್ಯಕ್ರಮ

Date: 22-06-2022

Location: ಬೆಂಗಳೂರು.


ಬೆಂಗಳೂರಿನ ಬಿ.ಎಂ.ಶ್ರೀ. ಪ್ರತಿಷ್ಠಾನದ ಗ್ರಂಥಾಲಯ ವಿಭಾಗವು ತನ್ನಲ್ಲಿರುವ ಹೆಚ್ಚುವರಿ ಪುಸ್ತಕಗಳನ್ನು ʼಪುಸ್ತಕ ಸಂತೆʼ ವಿಶೇಷ ಕಾರ್ಯಕ್ರಮದ ಮೂಲಕ ಪುಸ್ತಕ ಪ್ರಿಯರಿಗೆ, ಸಾಹಿತ್ಯಾಸಕ್ತರಿಗೆ ವಿಲೇವಾರಿ ಮಾಡುವ ನಿರ್ಧಾರ ಕೈಗೊಂಡಿದೆ.

ಈ ನಿಟ್ಟಿನಲ್ಲಿ 2022 ಜುಲೈ 10 ಭಾನುವಾರ ಪೂರ್ವಾಹ್ನ 10.30 ಗಂಟೆಗೆ ಪುಸ್ತಕ ಸಂತೆಯಲ್ಲಿರುವ ಪುಸ್ತಕಗಳನ್ನು ಪುಸ್ತಕ ಮಾರಾಟಗಾರರಲ್ಲದ ಆಸಕ್ತರು ತೆಗೆದುಕೊಂಡು ಹೋಗಬಹುದು. ಪುಸ್ತಕ ಪ್ರೀತಿ ಇರುವವರಿಗೆ ಪುಸ್ತಕಗಳನ್ನು ಉಚಿತವಾಗಿ ನೀಡಲಾಗುತ್ತದೆ ಎಂದು ಬಿ.ಎಂ.ಶ್ರೀ. ಪ್ರತಿಷ್ಠಾನದ ಗೌರವ ಕಾರ್ಯದರ್ಶಿ ಡಾ. ಶಾಂತರಾಜು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಳಾಸ: ಬಿ.ಎಂ.ಶ್ರೀ ಕಲಾಭವನ, ಬಿ.ಎಂ.ಶ್ರೀ ಪ್ರತಿಷ್ಠಾನದ ರಸ್ತೆ, 3ನೇ ಮುಖ್ಯ ರಸ್ತೆ, ನರಸಿಂಹರಾಜ ಕಾಲೋನಿ, ಬೆಂಗಳೂರು-560019, ದೂರವಾಣಿ- 080-26615877, 9972812127

MORE NEWS

ಹಿರಿಯ ಪತ್ರಕರ್ತ ಅರ್ಜುನ್ ದೇವ್ ನಿಧನ

24-04-2024 ಬೆಂಗಳೂರು

ಹಿರಿಯ ಪತ್ರಕರ್ತರು, ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ ಮಾಜಿ ಅಧ್ಯಕ್ಷ ಎನ್. ಅರ್ಜುನ್ ದೇವ್ (92) ಅವರು ಕೆಂಗೇರಿ...

ಪುಸ್ತಕ ಸಂಸ್ಕೃತಿ ಬೆಳೆಸುವುದು ಸಾಮಾಜಿಕ ನ್ಯಾಯದ ಭಾಗ ಅಂತ ಸರ್ಕಾರಗಳು ಭಾವಿಸಬೇಕು: ಬರಗೂರು

23-04-2024 ಬೆಂಗಳೂರು

ಬೆಂಗಳೂರು: ನಿಜವಾದ ಪುಸ್ತಕ ಪ್ರೀತಿ ಬೆಳೆಯ ಬೇಕಿರುವುದು, ಉಳಿಯ ಬೇಕಿರುವುದು ಮುಂದಿನ ಪೀಳಿಗೆಯಿಂದ, ಆ ಮುಂದಿನ ಪೀ...

ಪ್ರಕಾಶನ ಸಂಸ್ಥೆಯನ್ನು ತೆರೆದಿರುವ ಪ್ರಕಾಶಕರೆಲ್ಲರೂ ಹುಚ್ಚರೇ; ಕೆ.ಎನ್. ಗಣೇಶಯ್ಯ

23-04-2024 ಬೆಂಗಳೂರು

ಪುಸ್ತಕಗಳನ್ನು ಕೊಂಡುಕೊಂಡು ಓದುವವರ ಪ್ರಮಾಣ ಕಡಿಮೆಯೂ ಆಗಿಲ್ಲ ಹೆಚ್ಚು ಕೂಡ ಆಗಿಲ್ಲ. ಬಹುಶಃ ಪುಸ್ತಕವನ್ನು ಓದಬೇಕು ಅನ್...