ಚೊಚ್ಚಲ ಕೃತಿಗಳಿಗೆ ಪ್ರೋತ್ಸಾಹ ಧನ: ಅರ್ಜಿ ಆಹ್ವಾನ

Date: 11-03-2020

Location: ಬೆಂಗಳೂರು


ಕನ್ನಡ ಪುಸ್ತಕ ಪ್ರಾಧಿಕಾರದಿಂದ 2019ನೇ ಸಾಲಿನ ಯುವ ಬರಹಗಾರರ ಚೊಚ್ಚಲ ಕೃತಿಗಳನ್ನು ಪ್ರಕಟಿಸಲು ಪ್ರೋತ್ಸಾಹಧನ ನೀಡುವ ಸಲುವಾಗಿ ಅರ್ಜಿಗಳನ್ನು ಆಹ್ವಾನಿಸಿದೆ. ಅರ್ಜಿದಾರರು 18 ರಿಂದ 35 ವರ್ಷ ವಯೋಮಿತಿ ಇರಬೇಕು. ಸ್ವ-ವಿವರವುಳ್ಳ ಮನವಿಯೊಂದಿಗೆ ದೃಢೀಕೃತ ಎಸ್.ಎಸ್.ಎಲ್.ಸಿ. ಪ್ರಮಾಣ ಪತ್ರದ ಪ್ರತಿ ಅಥವಾ ದೃಢೀಕರಿಸಲ್ಪಟ್ಟ ಜನ್ಮ ದಾಖಲಾತಿ ಪ್ರಮಾಣ ಪತ್ರದ ಪ್ರತಿ ಸಲ್ಲಿಸಬೇಕು. ತಮ್ಮ ಚೊಚ್ಚಲ ಕೃತಿಯಾಗಿದ್ದು, ಎಲ್ಲಿಯೂ ಪ್ರಕಟವಾಗಿಲ್ಲವೆಂದು ಸ್ವಯಂ ದೃಢೀಕರಣ ಪತ್ರ ನೀಡಬೇಕು.

ಆಯ್ಕೆಗಾಗಿ ಸಲ್ಲಿಸುವ ಹಸ್ತಪ್ರತಿಯು ಡಿ.ಟಿ.ಪಿ. ಮಾಡಿಸಿದಾಗ 1/8 ಡೆಮ್ಮಿ ಅಳತೆಯಲ್ಲಿ ಕನಿಷ್ಟ 60 ಪುಟಗಳಿರಬೇಕು. ಅನುವಾದ, ಪಠ್ಯಪುಸ್ತಕ ಹಾಗೂ ಬೇರಾವುದೇ ಪದವಿಗೆ ಸಿದ್ಧಪಡಿಸಿದ ಪ್ರಬಂಧಗಳನ್ನು ಹೊರತುಪಡಿಸಿ, ಕಥೆ, ಕಾದಂಬರಿ, ಕವನ, ನಾಟಕ, ವಿಮರ್ಶಾ ಲೇಖನ, ಪ್ರಬಂಧ ಮುಂತಾದ ಕನ್ನಡ ಸಾಹಿತ್ಯದ ಪ್ರಕಾರಗಳಿಗೆ ಸಂಬಂಧಿಸಿದಂತೆ ಹಸ್ತಪ್ರತಿ ಇರಬೇಕು.

ಕೃತಿಯ ಪಠ್ಯದಲ್ಲಿ ಯಾವುದೇ ಧರ್ಮ, ದೇವರು, ಜಾತಿ, ಕೋಮು, ವೃತ್ತಿ, ಸಮುದಾಯ, ಆಚರಣೆ, ಪದ್ಧತಿ, ಮತ್ತಿತರ ಸಂಗತಿಗಳಿಗೆ ಸಂಬಂಧಿಸಿದಂತೆ ಹಾಗೂ ರಾಷ್ಟ್ರೀಯ ನಾಯಕರ ಕುರಿತಂತೆ ನೇರವಾಗಿಯೇ ಆಗಲಿ ಅಥವಾ ಪರೋಕ್ಷವಾಗಿಯೇ ಆಗಲಿ ಮನನೋಯಿಸುವಂತಹ ವಿಷಯವಾಗಲಿ ಇರಬಾರದು. ರಾಷ್ಟ್ರೀಯ ಭಾವೈಕ್ಯತೆಗೆ ಧಕ್ಕೆ ತರುವಂತಹ ವಿಷಯ / ಸಂಗತಿಗಳು ಪ್ರಸ್ತಾಪವಾಗಿರಬಾರದು. ಪ್ರಾಧಿಕಾರಕ್ಕೆ ಸಲ್ಲಿಸಲ್ಪಡುವ ಅರ್ಜಿಗಳನ್ನು/ ಹಸ್ತಪ್ರತಿ ಹಿಂದಿರುಗಿಸಲಾಗುವುದಿಲ್ಲ.

ಅರ್ಜಿಯನ್ನು ಏಪ್ರಿಲ್ 15 ರೊಳಗೆ ಆಡಳಿತಾಧಿಕಾರಿಗಳು, ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಭವನ, ಜೆ.ಸಿ.ರಸ್ತೆ, ಬೆಂಗಳೂರು 560002 ಅವರಿಗೆ ಕಳುಹಿಸಿಕೊಡಲು ಕೋರಿದೆ. ಹೆಚ್ಚಿನ ಮಾಹಿತಿಗೆ ಆಡಳಿತಾಧಿಕಾರಿಗಳು, ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಭವನ, ಮೊದಲನೇ ಮಹಡಿ, ಜೆ.ಸಿ.ರಸ್ತೆ, ಬೆಂಗಳೂರು. ದೂ: ಸಂಖ್ಯೆ: 080-22484516 / 22017704  ಸಂಪರ್ಕಿಸಬಹುದು ಎಂದು ಕನ್ನಡ ಪುಸ್ತಕ ಪ್ರಾಧಿಕಾರದ ಆಡಳಿತಾಧಿಕಾರಿ ತಿಳಿಸಿದ್ದಾರೆ. 

 

MORE NEWS

ಚೊಚ್ಚಲ ಕೃತಿಗೆ ಧನಸಹಾಯಕ್ಕಾಗಿ ಅರ್ಜಿ ಆಹ್ವಾನ

04-12-2025 ಬೆಂಗಳೂರು

ಬೆಂಗಳೂರು : ಕನ್ನಡ ಪುಸ್ತಕ ಪ್ರಾಧಿಕಾರದ (kannada Pustaka Pradhikara) ವತಿಯಿಂದ 2025-26ನೇ ಸಾಲಿನ ಯುವಬರಹಗಾರರ ಚ...

‘ಹುಡುಗತನ’ ಹಾಗೂ ‘ಹುಡುಗಿತನ’ದ ಪರಿಣಾಮಕಾರಿ ಚಿತ್ರಣ

04-12-2025 ಬೆಂಗಳೂರು

ಮಕ್ಕಳಿಗೆ ದೆವ್ವ, ಭೂತ ಮುಂತಾದ ಸಂಗತಿಗಳನ್ನು ಹೇಳಬಾರದೆಂದು ಹೇಳುತ್ತ ಅವರಲ್ಲಿ ಮತ್ತಷ್ಟು ಹೆದರಿಕೆ ಹುಟ್ಟಿಸಿರುತ್ತೇವೆ...

ಕನ್ನಡದ ಲೇಖಕಿ, ಭಾರತದ ಮೊದಲ ಅನುವಾದಕಿಗೆ ಸಂದ ವಿಶ್ವದ ಅತ್ಯಂತ ಪ್ರಭಾವಶಾಲಿ ಪ್ರಶಸ್ತಿ

21-05-2025 ಬೆಂಗಳೂರು

ಲಂಡನ್: ದಕ್ಷಿಣ ಭಾರತದ ಸಾಹಿತ್ಯ ಲೋಕ, ಅದರಲ್ಲೂ ಕನ್ನಡ ಸಾಹಿತ್ಯದ ಪಾಲಿಗೆ ಮೇ 20, 2025 ಸುವರ್ಣಾಕ್ಷರದಲ್ಲಿ ಬರೆದಿಡಬೇ...