ಸಿ.ಆರ್.ಸಿ ಹಾಗೂ ನಾಗೇಶ ಹೆಗಡೆ ಅವರಿಗೆ ವಿಜ್ಞಾನ ಸಂವಹನ-ಜೀವನಮಾನ ಸಾಧನೆ ಪ್ರಶಸ್ತಿ

Date: 26-02-2021

Location: ಬೆಂಗಳೂರು


ವಿಜ್ಞಾನ ಸಂವಹನೆ -ಜೀವಮಾನ ಸಾಧನೆಗಾಗಿ ಜ್ಞಾನ-ವಿಜ್ಞಾನ ಸಮಿತಿಯ ರಾಜ್ಯಾಧ್ಯಕ್ಷ ಹಾಗೂ ಮನೋವೈದ್ಯ ಡಾ. ಸಿ.ಆರ್. ಚಂದ್ರಶೇಖರ ಮತ್ತು ಖ್ಯಾತ ಪರಿಸರವಾದಿ ಹಾಗೂ ಲೇಖಕ ನಾಗೇಶ ಹೆಗಡೆ ಅವರಿಗೆ ಕರ್ನಾಟಕ ರಾಜ್ಯ ವಿಜ್ಞಾನ-ತಂತ್ರಜ್ಞಾನ ಅಕಾಡೆಮಿಯು ಪ್ರಶಸ್ತಿ ಘೋಷಿಸಿದೆ.

ಡಾ. ಸಿ.ಆರ್. ಚಂದ್ರಶೇಖರ ಅವರಿಗೆ 2021ನೇ ಸಾಲಿನ ಹಾಗೂ ನಾಗೇಶ ಹೆಗಡೆ ಅವರಿಗೆ 2020ನೇ ಸಾಲಿನ ಪ್ರಶಸ್ತಿಗಾಗಿ ಆಯ್ಕೆ ಮಾಡಿದ್ದು ಪ್ರಶಸ್ತಿಯು 1 ಲಕ್ಷ ರೂ.ನಗದು ಹಾಗೂ ಚಿನ್ನದ ಪದಕವನ್ನು ಒಳಗೊಂಡಿದೆ.

ಬೆಂಗಳೂರಿನ ಕರ್ನಾಟಕ ರಾಜ್ಯ ವಿಜ್ಞಾನ-ತಂತ್ರಜ್ಞಾನ ಅಕಾಡೆಮಿಯ ಸಭಾಂಗಣದಲ್ಲಿ 2021ರ ಮಾರ್ಚ್ 2 ರಂದು ನಡೆಯಲಿರುವ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಅಕಾಡೆಮಿ ಪ್ರಕಟಣೆ ತಿಳಿಸಿದೆ. ,

 

MORE NEWS

ಮಾತೋಶ್ರೀ ರತ್ನಮ್ಮ ಹೆಗ್ಗಡೆ 47ನೇ ಮಹಿಳಾ ಗ್ರಂಥ ಬಹುಮಾನಕ್ಕೆ ಕೃತಿಗಳ ಆಹ್ವಾನ

25-04-2024 ಬೆಂಗಳೂರು

ಧಾರವಾಡ: ಕರ್ನಾಟಕ ವಿದ್ಯಾವರ್ಧಕ ಸಂಘ ಧಾರವಾದಿಂದ 2023ನೇ ವರ್ಷದ ಮಹಿಳಾ ಶ್ರೇಷ್ಠ ಕನ್ನಡ ಕೃತಿಗಳಿಗೆ “ಮಾತೋಶ್ರೀ...

ಗಿರಡ್ಡಿ ಗೋವಿಂದರಾಜ ವಿಮರ್ಶಾ ಪ್ರಶಸ್ತಿಗೆ ಕೃತಿಗಳ ಆಹ್ವಾನ

25-04-2024 ಬೆಂಗಳೂರು

ಧಾರವಾಡ: ಡಾ. ಗಿರಡ್ಡಿ ಗೋವಿಂದರಾಜ ಫೌಂಡೇಶನ್ ನಿಂದ “ವಿಮರ್ಶಾ ಪ್ರಶಸ್ತಿ"ಗೆ ವಿಮರ್ಶಾ ಕೃತಿಗಳನ್ನು ಆಹ್ವಾ...

ಕವಿಗಳು, ಲೇಖಕರು ಬಹುತೇಕವಾಗಿ ಕಲ್ಪನಾ ಶಕ್ತಿಯಿಂದ ಸಾಹಿತ್ಯವನ್ನು ಸೃಷ್ಟಿಸುತ್ತಾರೆ; ಎಂ. ಬಸವಣ್ಣ

25-04-2024 ಬೆಂಗಳೂರು

ಬೆಂಗಳೂರು: ವಿಜಯನಗರದಲ್ಲಿರುವ 'ಅಮೂಲ್ಯ ಪುಸ್ತಕ' ದ ಅಂಗಡಿಯಲ್ಲಿ ಏಪ್ರಿಲ್ 23ರಂದು ವಿಶ್ವ ಪುಸ್ತಕ ದಿನವನ್ನು ...