ಸಾಹಿತಿ ಡಾ. ಇಂದಿರಾ ಹೆಗ್ಗಡೆ ಅವರಿಗೆ ಡಾ. ಬಿ. ಸರೋಜಾದೇವಿ ಸಾಹಿತ್ಯ ದತ್ತಿ ಪ್ರಶಸ್ತಿ ಪ್ರದಾನ

Date: 28-07-2020

Location: ಬೆಂಗಳೂರು


ಹಿರಿಯ ಸಾಹಿತಿ ಡಾ. ಇಂದಿರಾ ಹೆಗ್ಗಡೆ ಅವರಿಗೆ ಡಾ. ಬಿ. ಸರೋಜಾದೇವಿ ಸಾಹಿತ್ಯ ದತ್ತಿ ಪ್ರಶಸ್ತಿಯನ್ನು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಡಾ. ಮನು ಬಳಿಗಾರ್ ಅವರು ಪ್ರದಾನ ಮಾಡಿದರು.

ಪ್ರಶಸ್ತಿಯು 15 ಸಾವಿರ ರೂ ನಗದು, ಪ್ರಶಸ್ತಿ ಫಲಕವನ್ನು ಒಳಗೊಂಡಿತ್ತು. ಕೋವಿಡ್-19 ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಡಾ. ಇಂದಿರಾ ಹೆಗ್ಗಡೆ ಅವರ ಬೆಂಗಳೂರಿನ ವಿಜಯನಗರದ ನಿವಾಸಕ್ಕೆ ತೆರಳಿ ಪ್ರಶಸ್ತಿ ಪ್ರದಾನ ನೆರವೇರಿಸಲಾಯಿತು. ನಂತರ ಮಾತನಾಡಿದ ಮನು ಬಳಿಗಾರ್ "ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ ಪ್ರತಿಭಾವಂತ ಲೇಖಕಿಯೊಬ್ಬರಿಗೆ ಕೊಡಮಾಡುವ ಈ ಮೌಲಿಕ ದತ್ತಿ ಪ್ರಶಸ್ತಿಯನ್ನು ಹಿರಿಯ ಲೇಖಕಿ ಡಾ. ಇಂದಿರಾ ಹೆಗ್ಗಡೆ ಅವರಿಗೆ ಪ್ರದಾನ ಮಾಡುತ್ತಿರುವುದು ಸಂತೋಷ. ಕಾದಂಬರಿ, ಸಣ್ಣಕಥೆ, ಕಾವ್ಯ, ಜೀವನ ಚರಿತ್ರೆ, ಸಂಶೋಧನೆ ಮುಂತಾದ ಪ್ರಕಾರಗಳಲ್ಲಿ ಅನೇಕ ಕೃತಿಗಳನ್ನು ಡಾ. ಇಂದಿರಾ ಅವರು ಸಾರಸ್ವತ ಲೋಕಕ್ಕೆ ನೀಡಿದ್ದಾರೆ. ತಮ್ಮ ಪತಿ ಎಸ್.ಆರ್. ಹೆಗ್ಗಡೆ ಅವರ ಹೆಸರಿನಲ್ಲಿ ಚಾರಿಟಬಲ್ ಟ್ರಸ್ಟ್ ಸ್ಥಾಪಿಸಿ ಸಾಮಾಜಿಕ ಕಾರ್ಯಗಳಲ್ಲಿಯೂ ಇಂದಿರಾ ಅವರು ತೊಡಗಿಸಿಕೊಂಡಿರುವುದು ಶ್ಲಾಘನೀಯ’ ಎಂದು ಪ್ರಶಂಸಿಸಿದರು. ಕ.ಸಾ.ಪ. ಗೌರವ ಕಾರ್ಯದರ್ಶಿ ವ.ಚ. ಚನ್ನೇಗೌಡ ಉಪಸ್ಥಿತರಿದ್ದರು.

MORE NEWS

25 ಮಂದಿಗೆ ಕೆಯುಡಬ್ಲ್ಯುಜೆ ದತ್ತಿ ನಿಧಿ ಪ್ರಶಸ್ತಿ

28-03-2024 ಬೆಂಗಳೂರು

ಬೆಂಗಳೂರು: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದಿಂದ ಕೊಡಮಾಡುವ ಪ್ರಸಕ್ತ ಸಾಲಿನ ಕೆಯುಡಬ್ಲ್ಯುಜೆ ದತ್ತಿ ನಿಧಿ ಪ್ರಶಸ್...

ಖ್ಯಾತ ರಂಗ ನಿರ್ದೇಶಕ ಶ್ರೀ ಪಾದ ಭಟ್ ಗೆ 'ರಂಗ ಭೂಪತಿ' ಪ್ರಶಸ್ತಿ

28-03-2024 ಬೆಂಗಳೂರು

ಬೆಂಗಳೂರು: ಪ್ರಸಿದ್ಧ ನಾಟಕಕಾರರಾದ ದಿ.ಗೋಪಾಲ ವಾಜಪೇಯಿ ಅವರ ಹೆಸರಿನಲ್ಲಿ ಸ್ಥಾಪಿಸಲಾಗಿರುವ 'ರಂಗ ಭೂಪತಿ' ಪ್ರ...

ದಾವಣಗೆರೆಯ ಎಲ್ಲಾ ಭಾಷಾರಸಸ್ವಾದಗಳನ್ನು ಅಚ್ಚುಕಟ್ಟಾಗಿ ಕಟ್ಟಿಕೊಟ್ಟ ಕೃತಿಯಿದು; ಎಂ. ವಿ. ರೇವಣಸಿದ್ದಯ್ಯ

28-03-2024 ಬೆಂಗಳೂರು

ಬೆಂಗಳೂರು: ಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಅನಿವಾಸಿ ಲೇಖಕ ಶಿಕಾಗೋದ ರವಿ ಹಂಜ್ ಅವರ ಇಂಗ್ಲಿಷ್ ಕೃತಿ ...