ಜಿ. ಎಂ. ಹೆಗಡೆಯವರಿಗೆ 2022ನೆಯ ಸಾಲಿನ ವಿ.ಕೃ. ಗೋಕಾಕ್ ಪ್ರಶಸ್ತಿ

Date: 16-08-2022

Location: ಬೆಂಗಳೂರು


ಬೆಂಗಳೂರಿನ ವಿನಾಯಕ ಗೋಕಾಕ್ ವಾಙ್ಮಯ ಟ್ರಸ್ಟ್ ಮತ್ತು ಭಾರತೀಯ ವಿದ್ಯಾಭವನ ನೀಡುವ ವಿ.ಕೃ. ಗೋಕಾಕ್ ಪ್ರಶಸ್ತಿಗೆ ಜಿ. ಎಂ. ಹೆಗಡೆ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಟ್ರಸ್ಟ್‌ನ ಅಧ್ಯಕ್ಷ ಬಿ. ಎಸ್. ವಿಶ್ವನಾಥ್, ಪ್ರದಾನ ಕಾರ್ಯದರ್ಶಿಗಳು ಅನಿಲ್ ಗೋಕಾಕ್, ಹಿರಿಯ ವಿಮರ್ಶಕ ಡಾ. ನರಹಳ್ಳಿ ಬಾಲಸುಬ್ರಹ್ಮಣ್ಯ ಮತ್ತು ಅಭಿನವ ರವಿಕುಮಾರ್‌ ಸಮಿತಿಯು ತಿಳಿಸಿದೆ.

ಜಿ. ಎಂ. ಹೆಗಡೆ ಅವರು ಉತ್ತರ ಕನ್ನಡ ಜಿಲ್ಲೆಯ ಶಿರಸಿ, ಹತ್ತಿರದ ಆಲ್ಮನೆಯಲ್ಲಿ ಜನಿಸಿದ ಇವರು ಧಾರವಾಡದಲ್ಲಿ ವಿದ್ಯಾಭ್ಯಾಸ ,ಮುಗಿಸಿ ಬಳಿಕ ಕಾಲೇಜಿನಲ್ಲಿ ಪ್ರಾಧ್ಯಾಪಕರಾಗಿ, ಸ್ನಾತಕೋತ್ತರ ಕೇಂದ್ರದ ನಿರ್ದೇಶಕರಾಗಿ 38 ವರ್ಷಗಳ ಸೇವೆಯನ್ನು ಸಲ್ಲಿಸಿದ್ದಾರೆ. ವಿಚಾರಗೋಷ್ಠಿಗಳಲ್ಲಿ ಪ್ರಬಂಧ ಮಂಡನೆ, ಉಪನ್ಯಾಸ, ಸಂಯುಕ್ತ ಕರ್ನಾಟಕ ಪತ್ರಿಕೆಯಲ್ಲಿ ಹತ್ತು ವರುಷಗಳ ಕಾಲ ಅಂಕಣ ಬರಹಗಳನ್ನು ಬರೆದಿದ್ದಾರೆ. ಕರ್ನಾಟಕ ಸಮಾಜ ಸಂಸ್ಕೃತಿ ಸೇರಿದಂತೆ 75ಕ್ಕೂ ಹೆಚ್ಚು ಕೃತಿಗಳನ್ನು ಪ್ರಕಟಿಸಿದ್ದಾರೆ. ಹಲವು ಪ್ರಶಸ್ತಿಗಳನ್ನು ಪಡೆದುಕೊಂಡಿರುವ ಇವರು 2022ನೇ ಸಾಲಿನ ವಿ. ಕೃ. ಗೋಕಾಕ್ ಪ್ರಶಸ್ತಿಗೆ ಭಾಜನರಾಗಿದ್ದಾರೆ.

ಪ್ರಶಸ್ತಿಯು ರೂ 25,000.00 ನಗದು ಮತ್ತು ಫಲಕವನ್ನು ಒಳಗೊಂಡಿರುತ್ತದೆ . ಸೆಪ್ಟೆಂಬರ್‌ ಎರಡನೇ ವಾರದಲ್ಲಿ ಪ್ರಶಸ್ತಿ ಪ್ರಧಾನ ಕಾರ್ಯಕ್ರಮವು ಭಾರತೀಯ ವಿದ್ಯಾಭವನದಲ್ಲಿ ನಡೆಯಲಿರುವುದಾಗಿ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

 

MORE NEWS

ಹೊಸ್ತೋಟ ಮಂಜುನಾಥ ಭಾಗವತರ ಸಂಸ್ಮರಣ ಕೃತಿ ‘ಯಕ್ಷಹಂಸ’ ಲೋಕಾರ್ಪಣೆ

01-05-2024 ಬೆಂಗಳೂರು

ಹೊಸ್ತೋಟ ಮಂಜುನಾಥ ಭಾಗವತರ ಬಗ್ಗೆ ಬರೆದಿರುವ ‘ಯಕ್ಷಹಂಸ’ ಕೃತಿ ಲೋಕಾರ್ಪಣೆ ಸಮಾರಂಭವು ದಿನಾಂಕ 2024 ಏಪ್ರ...

ಹರಿದಾಸ ಸಾಹಿತ್ಯದ ಮೇರು ಶೃಂಗ ಶ್ರೀವಿಜಯದಾಸರು: ಅರಳುಮಲ್ಲಿಗೆ ಪಾರ್ಥಸಾರಥಿ

30-04-2024 ಬೆಂಗಳೂರು

ಬೆಂಗಳೂರಿನ ಚಾಮರಾಜಪೇಟೆಯ ರಾಘವೇಂದ್ರ ಕಾಲೋನಿಯ ಶ್ರೀಪಾದರಾಜ ಸಭಾಭವನದಲ್ಲಿ ರಾಷ್ಟ್ರೀಯ ವೇದ ವಿಜ್ಞಾನ ಸಂಸ್ಥೆ ಟ್ರಸ್ಟ್,...

2024ನೇ ಸಾಲಿನ ಬುಕ್‌ ಬ್ರಹ್ಮ ಕಥಾ ಸ್ಪರ್ಧೆ - ಕಾದಂಬರಿ ಪುರಸ್ಕಾರಕ್ಕೆ ಆಹ್ವಾನ

29-04-2024 ಬೆಂಗಳೂರು

ʻಬುಕ್‌ ಬ್ರಹ್ಮ ಸ್ವಾತಂತ್ರ್ಯೋತ್ಸವ ಕಥಾ ಸ್ಪರ್ಧೆ 2024 ಮತ್ತು ಕಾದಂಬರಿ ಪುರಸ್ಕಾರ 2024ʼ ರೂ. 2 ಲಕ್ಷ 69 ಸ...