ಗಾನಕೋಗಿಲೆ ‘ಎಸ್‌. ಪಿ. ಬಿ’ ಇನ್ನಿಲ್ಲ

Date: 25-09-2020

Location: ಚೆನ್ನೈ


ಭಾರತೀಯ ಬಹುಭಾಷಾ ಖ್ಯಾತಿಯ ಗಾಯಕ ಎಸ್. ಪಿ. ಬಾಲಸುಬ್ರಹ್ಮಣ್ಯಂ (74) ಅವರು ಶುಕ್ರವಾರ ನಿಧನರಾದರು. ಹಲವು ದಿನಗಳಿಂದ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಎಸ್‌ಪಿಬಿ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿತ್ತು.

ಆಗಸ್ಟ್‌ 5ರಂದು ಶೀತ ಮತ್ತು ಜ್ವರ ಕಾಣಿಸಿಕೊಂಡು ಉಸಿರಾಟಕ್ಕೆ ತೊಂದರೆಯಾಗಿತ್ತು. ವೈದ್ಯಕೀಯ ಪರೀಕ್ಷೆ ಬಳಿಕ ಅವರಿಗೆ ಕೋವಿಡ್‌–19 ಸೋಂಕು ದೃಢಪಟ್ಟಿದ್ದ ಹಿನ್ನೆಲೆ ಕುಟುಂಬ ಸದಸ್ಯರ ಸಲಹೆ ಮೇರೆಗೆ ಅವರನ್ನು ಎಂಜಿಎಂ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಅವರು ಇಂದು ಮೃತಪಟ್ಟಿದ್ದಾರೆ. ಅಂತ್ಯಕ್ರಿಯೆಯನ್ನು ಚೆನ್ನೈನ ಫಾರ್ಮ್ ಹೌಸ್‌ನಲ್ಲಿ ನಡೆಸುವ ಸಾಧ್ಯತೆಗಳಿವೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.1946ರ ಜೂನ್‌ 4 ರಂದು ಜನಿಸಿದ್ದ ಈ ಮಹಾನ್ ಚೇತನ, ಗಾಯನ ಮಾತ್ರವಲ್ಲದೆ, ನಟನೆ, ಸಂಗೀತ ಕಾರ್ಯಕ್ರಮಗಳ ನಿರ್ವಹಣೆ ಮುಂತಾದವುಗಳಲ್ಲಿ ನಿರಂತರವಾಗಿ ತಮ್ಮನ್ನು ತೊಡಗಿಸಿಕೊಂಡಿದ್ದರು. ಕನ್ನಡ, ತಮಿಳು, ತೆಲುಗು, ಹಿಂದಿ, ಮಲೆಯಾಳಂ ಸೇರಿದಂತೆ ಒಟ್ಟು 16 ಭಾಷೆಗಳಲ್ಲಿ 40 ಸಾವಿರಕ್ಕೂ ಹೆಚ್ಚು ಹಾಡುಗಳನ್ನು ಹಾಡಿದ್ದಾರೆ.

ಕನ್ನಡದ ಪ್ರಮುಖ ಕವಿಗಳಾದ ಬೇಂದ್ರೆ, ಕುವೆಂಪು, ಜಿ.ಎಸ್‌. ಶಿವರುದ್ರಪ್ಪ, ಕೆ.ಸಿ. ಶಿವಪ್ಪ, ದೊಡ್ಡರಂಗೇಗೌಡ ಮತ್ತಿತರರ ಗೀತೆಗಳನ್ನು ತಮ್ಮ ಸುಮಧುರ ಕಂಠದಿಂದ ಹಾಡಿ ಜನರಿಗೆ ತಲುಪಿಸಿದ ಕೀರ್ತಿ ಗಾಯಕ ಎಸ್‌.ಪಿ. ಬಾಲಸುಬ್ರಹ್ಮಣ್ಯಂ ಅವರಿಗೆ ಸಲ್ಲುತ್ತದೆ.

ಜುಲೈನಲ್ಲಿ ಬಾಲಸುಬ್ರಹ್ಮಣ್ಯಂ ಅವರು ಕೊರೊನಾ ವಿರುದ್ಧ ಜಾಗೃತಿ ಮೂಡಿಸಲು ಸಾಹಿತಿ ವೈರಮುತ್ತು ರಚಿಸಿದ್ದ ಹಾಡಿಗೆ ದನಿಯಾಗಿದ್ದರು. ಇವರ ಕಲಾ ಸೇವೆಗೆ ಭಾರತ ಸರ್ಕಾರ 2001ರಲ್ಲಿ ಪದ್ಮಶ್ರೀ, 2011ರಲ್ಲಿ ಪದ್ಮವಿಭೂಷಣ ಪ್ರಶಸ್ತಿಯನ್ನು ನೀಡಿ ಗೌರವಿಸಿತ್ತು.

ಅವರ ಅಪರೂಪದ ಚಿತ್ರಗಳು ಇಲ್ಲಿವೆ-

MORE NEWS

ಎಸ್.ಜ್ಯೋತಿ ಅವರ ‘ಅತ್ತೆ ನಿಮಗೊಂದು ಪ್ರಶ್ನೆ’ ಪುಸ್ತಕ ಬಿಡುಗಡೆ ಸಮಾರಂಭ

19-03-2024 ಬೆಂಗಳೂರು

ತುಮಕೂರು: ಪುರಾಣ ಕಾವ್ಯ ಬೇರೆ, ಪುರಾಣ ಶಾಸ್ತ್ರ ಬೇರೆ. ಪುರಾಣ ಶಾಸ್ತ್ರಗಳು ವಾಚ್ಯಾರ್ಥವಾದರೆ, ಪುರಾಣ ಕಾವ್ಯಗಳು ಧ್ವನ್...

ಕನ್ನಡ-ಕರ್‍ನಾಟಕಗಳಿಗೆ ಸಂಬಂದಿಸಿದ ಸಂಶೋದನಾ ಪ್ರಬಂದಗಳಿಗೆ ಆಹ್ವಾನ

17-12-2023 ಬೆಂಗಳೂರು

ಮಸ್ಕಿ: ಬಂಡಾರ ಪ್ರಕಾಶನವು `ಕನ್ನಡ ಆರಯ್ಪು-2023' ಸಲುವಾಗಿ ಕನ್ನಡ-ಕರ್‍ನಾಟಕಗಳಿಗೆ ಸಂಬಂದಿಸಿದ ಸಂಶೋದನಾ ಪ್ರ...

ಸಾಂಸ್ಕೃತಿಕ ಸಂವಿಧಾನದ ಅರಿವು ಅಗತ್ಯ : ಪ್ರೊ.ನಟರಾಜ ಬೂದಾಳು

06-12-2023 ಬೆಂಗಳೂರು

ಕಲಬುರಗಿ: ಗುಲಬರ್ಗಾ ವಿಶ್ವವಿದ್ಯಾಲಯ ಕನ್ನಡ ಅಧ್ಯಯನ ಸಂಸ್ಥೆ, ಶ್ರೀ ಸಿದ್ಧಲಿಂಗೇಶ್ವರ ಪ್ರಕಾಶನ ಕಲಬುರಗಿ ಮತ್ತು ಜನ ಪ್...