ಗಣೇಶ ಅವರ 'ಪುಟ್ಟ ಯಜಮಾನ' ಕೃತಿ ರಾಜ್ಯ ಪ್ರಶಸ್ತಿಗೆ ಆಯ್ಕೆ

Date: 05-11-2019

Location: .


ಸಾಹಿತಿ ಗಣೇಶ ಪಿ. ನಾಡೋರ ಅವರು ಮಕ್ಕಳಿಗಾಗಿ ಬರೆದ ಪುಟ್ಟ ಯಜಮಾನ ಕಾದಂಬರಿ ಪ್ರಸ್ತುತ ಸಾಲಿನ ಜಿ.ಬಿ. ಹೊಂಬಳ ಮಕ್ಕಳ ಸಾಹಿತ್ಯ ರಾಜ್ಯ ಪ್ರಶಸ್ತಿಗೆ ಆಯ್ಕೆಯಾಗಿದೆ. ನ. 10 ರಂದು ಧಾರವಾಡದಲ್ಲಿ ಕರ್ನಾಟಕ ವಿದ್ಯಾವರ್ಧಕ ಸಂಘದ ನಾಡೋಜ ಪಾಟೀಲ ಪುಟ್ಟಪ್ಪ ಸಭಾಭವನದಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ಜರುಗಲಿದೆ. ಹಿರಿಯ ಸಾಹಿತಿ ಎಚ್. ಎಸ್. ವೆಂಕಟೇಶಮೂರ್ತಿ “ಪುಟ್ಟ ಯಜಮಾನ” ಕೃತಿ ಬಿಡುಗಡೆ ಮಾಡಿ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಪ್ರಶಸ್ತಿಯು 15 ಸಾವಿರ ನಗದು, ಫಲಕ ಹಾಗೂ ಸನ್ಮಾನವನ್ನು ಒಳಗೊಂಡಿರುತ್ತದೆ. ಗಣೇಶ ನಾಡೋರ ಅವರು ಸುಮಾರು ಮೂವತ್ತು ವರ್ಷಗಳಿಂದ ನಿರಂತರವಾಗಿ ಮಕ್ಕಳಿಗಾಗಿ ಪ್ರೀತಿಯಿಂದ ಬರೆಯುತ್ತಿರುವ ಕ್ರಿಯಾಶೀಲ ಲೇಖಕರು.

'ನಗೆ', 'ಕರಿಮುಖ', 'ಪೂರ್ವಿ, ಸಾಯಿಲಕ್ಸಿ ಮನೆಗೆ ಸಾಂತಕ್ಲಾಸ್ ಬಂದ' ಮುಂತಾಗಿ ಇಲ್ಲಿಯವರೆಗೆ ಮಕ್ಕಳಿಗಾಗಿ 18 ಕೃತಿಗಳನ್ನು ಪ್ರಕಟಿಸಿದ್ದಾರೆ, ದಟ್ಟವಾದ ಸಮಕಾಲೀನ ಪ್ರಜ್ಞೆ ಮಕ್ಕಳಿಗಾಗಿ ಗಂಭೀರ ಓದಿನ ಕೃತಿಗಳು ಇವರ ಗಮನಾರ್ಹ ವಿಶೇಷ ಕೃತಿಗಳು. 'ರಾಜ್ಯ ಸಾಹಿತ್ಯ ಅಕಾಡೆಮಿ ಪ್ರಶಸ್ತಿ, ಬಾಲ ವಿಕಾಸ ಅಕಾಡೆಮಿ ಪ್ರಶಸ್ತಿ, ಕನ್ನಡ ಸಾಹಿತ್ಯ ಪರಿಷತ್ತಿನ ಅತ್ತಿ ಪ್ರಶಸ್ತಿ, ಬಿ. ಎಂ. ಶ್ರೀ. ಪ್ರತಿಷ್ಠಾನ ಪ್ರಶಸ್ತಿ ಮುಂತಾಗಿ ಹಲವಾರು ಗೌರವಗಳು ಅವರಿಗೆ ಸಂದಿವೆ.

MORE NEWS

ಅವಿರತ ಹರೀಶ್ ಅವರ ಅಭಿನಂದನಾ ಕಾರ್ಯಕ್ರಮ ಎಲ್ಲರಿಗೂ ಆದರ್ಶವಾಗಿದೆ; ಬರಗೂರು ರಾಮಚಂದ್ರಪ್ಪ

25-04-2024 ಬೆಂಗಳೂರು

ಬೆಂಗಳೂರು: ಅವಿರತ ಹರೀಶ್ ಗೆಳೆಯರ ಬಳಗದಿಂದ ಹಮ್ಮಿಕೊಂಡಿದ್ದ ಪ್ರಕಾಶಕ, ಲೇಖಕ, ಸಂಘಟಕ ಅವಿರತ ಹರೀಶ್ 60ರ ಸಾಂಸ್ಕೃತಿಕ ಸ...

ಮಾತೋಶ್ರೀ ರತ್ನಮ್ಮ ಹೆಗ್ಗಡೆ 47ನೇ ಮಹಿಳಾ ಗ್ರಂಥ ಬಹುಮಾನಕ್ಕೆ ಕೃತಿಗಳ ಆಹ್ವಾನ

25-04-2024 ಬೆಂಗಳೂರು

ಧಾರವಾಡ: ಕರ್ನಾಟಕ ವಿದ್ಯಾವರ್ಧಕ ಸಂಘ ಧಾರವಾದಿಂದ 2023ನೇ ವರ್ಷದ ಮಹಿಳಾ ಶ್ರೇಷ್ಠ ಕನ್ನಡ ಕೃತಿಗಳಿಗೆ “ಮಾತೋಶ್ರೀ...

ಗಿರಡ್ಡಿ ಗೋವಿಂದರಾಜ ವಿಮರ್ಶಾ ಪ್ರಶಸ್ತಿಗೆ ಕೃತಿಗಳ ಆಹ್ವಾನ

25-04-2024 ಬೆಂಗಳೂರು

ಧಾರವಾಡ: ಡಾ. ಗಿರಡ್ಡಿ ಗೋವಿಂದರಾಜ ಫೌಂಡೇಶನ್ ನಿಂದ “ವಿಮರ್ಶಾ ಪ್ರಶಸ್ತಿ"ಗೆ ವಿಮರ್ಶಾ ಕೃತಿಗಳನ್ನು ಆಹ್ವಾ...