ಗಿರೀಶ್ ಕಾಸರವಳ್ಳಿ ಅವರಿಗೆ 'ವಿಶ್ವಪ್ರಭಾ' ಪುರಸ್ಕಾರ

Date: 17-01-2022

Location: ಬೆಂಗಳೂರು


ಕನ್ನಡ, ನಾಡು-ನುಡಿ, ಸಂಸ್ಕೃತಿಗೆ ಅನನ್ಯ ಸೇವೆ ಸಲ್ಲಿಸಿರುವ ಕಲಾವಿದರಿಗೆ, ಉಡುಪಿ ವಿಶ್ವನಾಥ ಶೆಣಿೈ ಹಾಗೂ ಪ್ರಭಾವತಿ ವಿಶ್ವನಾಥ ಶೆಣೈ ಇವರ ಪ್ರಾಯೋಜಕತ್ವದಲ್ಲಿ ಪ್ರತಿವರ್ಷ ಪ್ರದಾನ ಮಾಡುತ್ತಿರುವ 'ವಿಶ್ವಪ್ರಭಾ ಪುರಸ್ಕಾರ' ಕ್ಕೆ ಈ ವರ್ಷ ಕನ್ನಡದ ಹೆಸರಾಂತ ಚಲನಚಿತ್ರ ನಿರ್ದೇಶಕ ಗಿರೀಶ್ ಕಾಸರವಳ್ಳಿಯವರು ಪಾತ್ರರಾಗಿದ್ದಾರೆ.

ಕನ್ನಡ ಸಿನಿಮಾ ಜಗತ್ತಿನಲ್ಲಿ ಈಗಾಗಲೇ 15 ಚಲನಚಿತ್ರಗಳನ್ನು ನಿರ್ದೇಶಿಸಿರುವ ಕಾಸರವಳ್ಳಿಯವರು ತಮ್ಮ ಅಷ್ಟೂ ಚಲನಚಿತ್ರಗಳಿಗೆ ರಾಜ್ಯ, ರಾಷ್ಟ್ರ ಹಾಗೂ ಅಂತರಾಷ್ಟ್ರೀಯ ಮಟ್ಟದ ಪ್ರತಿಷ್ಠಿತ ಪ್ರಶಸ್ತಿಗಳನ್ನು ಪಡೆದಿರುವುದು ಅವರ ಅಸಾಧಾರಣ ಪ್ರತಿಭೆಗೆ ಸಾಕ್ಷಿ.

ಹದಿನಾರು ಬಾರಿ ರಾಷ್ಟ್ರಪತಿಯವರಿಂದ 'ಕಮಲ ಪತ್ರ' ಪ್ರಶಸ್ತಿಯನ್ನು ಪಡೆದಿರುವ ಇವರು, ನಾಲ್ಕು ಬಾರಿ 'ಸ್ವರ್ಣಕಮಲ' ಪ್ರಶಸ್ತಿಯನ್ನು ಪಡೆದಿರುತ್ತಾರೆ .

ಇದೇ ಬರುವ ಜನವರಿ 31, 2022 ರಂದು ಉಡುಪಿಯ ಎಂ.ಜಿ.ಎಂ ಕಾಲೇಜಿನ ಮುದ್ದಣ ಮಂಟಪದಲ್ಲಿ ನಡೆಯಲಿರುವ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ 'ವಿಶ್ವಪ್ರಭಾ ಪುರಸ್ಕಾರ -2022' ವನ್ನು ಒಂದು ಲಕ್ಷದ ಗೌರವಧನ ಸಹಿತ ಪ್ರಶಸ್ತಿ ಫಲಕದೊಂದಿಗೆ ಗಿರೀಶ್ ಕಾಸರವಳ್ಳಿಯವರಿಗೆ ಪ್ರದಾನ ಮಾಡಲಾಗುವುದು .

MORE NEWS

ಕುವೆಂಪು ಪರಿಸರದಲ್ಲಿ ದೇವರನ್ನ ಕಂಡರೆ, ರಾಜ್‌ಕುಮಾರ್‌ ಅಭಿಮಾನಿಗಳಲ್ಲಿ ದೇವರನ್ನ ಕಂಡರು: ಬರಗೂರು

18-04-2024 ಬೆಂಗಳೂರು

ಬೆಂಗಳೂರು: ರಾಷ್ಟ್ರಕವಿ ಕುವೆಂಪು ಅವರೇ ನನ್ನ ವಿಶ್ವ ಮಾನವ ಸಂದೇಶವನ್ನು ಜನರಿಗೆ ತಲುಪಿಸುವ ಶಕ್ತಿ ಇರುವುದು ರಾಜ್&zwnj...

ಹಾಸನ ಸಂಸ್ಕೃತ ಭವನದಲ್ಲಿ ವಿಶ್ವ ಕಲಾ ದಿನಾಚರಣೆ, ಚಿತ್ರಕಲಾ ಪ್ರದರ್ಶನ ಸ್ಫರ್ಧೆ

18-04-2024 ಬೆಂಗಳೂರು

ಕಲೆಗೆ ಗೌರವವನ್ನು ವ್ಯಕ್ತಪಡಿಸಲು ವಿಶ್ವ ಕಲಾ ದಿನವನ್ನು ಆಚರಿಸಲಾಗುತ್ತಿದೆ. ವಿಶ್ವ ಕಲಾ ದಿನವು ಸಮಾಜದಲ್ಲಿ ಕಲೆಯ ಪ್ರಾ...

ತನುಶ್ರೀ ಸಾಹಿತ್ಯ ವೇದಿಕೆಯಿಂದ ಕವಿಗೋಷ್ಠಿಗೆ ಕವನಗಳ ಆಹ್ವಾನ

16-04-2024 ಬೆಂಗಳೂರು

ಚಿತ್ರದುರ್ಗ: ತನುಶ್ರೀ ಸಾಹಿತ್ಯ, ಸಾಂಸ್ಕೃತಿಕ ಕಲಾ ವೇದಿಕೆಯಿಂದ ರಾಜ್ಯ ಮಟ್ಟದ ಕವಿಗೋಷ್ಠಿಗೆ ಕವನಗಳನ್ನು ಆಹ್ವಾನಿಸಲಾಗ...