ಹಾವೇರಿಯಲ್ಲಿ 86ನೇ ಕನ್ನಡ ಸಾಹಿತ್ಯ ಸಮ್ಮೇಳನ

Date: 06-02-2020

Location: ಕಲಬುರಗಿ


ಕಲಬುರಗಿ: ಹಾವೇರಿಯಲ್ಲಿ ಅಖಿಲ ಭಾರತ 86ನೇ ಕನ್ನಡ ಸಾಹಿತ್ಯ ಸಮ್ಮೇಳನ ನಡೆಸಲು ಕನ್ನಡ ಸಾಹಿತ್ಯ ಪರಿಷತ್ತಿನ ಕಾರ್ಯಕಾರಿ ಸಮಿತಿ ನಿರ್ಧರಿಸಿದೆ.

ಗುರುವಾರ ನಡೆದ ಸಮಿತಿಯ ಸಭೆಯಲ್ಲಿ ಹಾವೇರಿ, ಚಿಕ್ಕಬಳ್ಳಾಪುರ, ಮಂಗಳೂರು ಜಿಲ್ಲೆಗಳ ಪ್ರತಿನಿಧಿಗಳು ಸಮ್ಮೇಳನದ ಆತಿಥ್ಯ ವಹಿಸಲು ಆಸಕ್ತಿ ತೋರಿಸಿದ್ದರು. ಅಂತಿಮವಾಗಿ ಹಾವೇರಿಯಲ್ಲಿ ಮುಂದಿನ ಸಮ್ಮೇಳನ ನಡೆಸಲು ತೀರ್ಮಾನಿಸಲಾಯಿತು.

ತಪ್ಪು ಮಾಡಿಲ್ಲ. ರಾಜೀನಾಮೆ ನೀಡೋಲ್ಲ:

ಸಾಹಿತ್ಯ ಸಮ್ಮೇಳನದಲ್ಲಿ ಸ್ವಾಯತ್ತತೆ ಕಾಪಾಡುವಲ್ಲಿ ವಿಫಲರಾದ ಕಸಾಪ ಅಧ್ಯಕ್ಷರು ರಾಜೀನಾಮೆ ನೀಡಬೇಕು ಎಂಬ ಅಭಿಪ್ರಾಯ ಕೇಳಿ ಬಂದ ಹಿನ್ನೆಲೆಯಲ್ಲಿ ಸ್ಪಷ್ಟೀಕರಣ ನೀಡಿದ ಮನು ಬಳಿಗಾರ ಅವರು ’ಸರ್ಕಾರದ ಆಣತಿಯಂತೆ ನಡೆದುಕೊಂಡಿಲ್ಲ’ ಎಂದು ಪ್ರತಿಕ್ರಿಯಿಸಿದರು.

ಪರಿಷತ್ತು ಆರ್ಥಿಕ ಸ್ವಾಯತ್ತ ಸಂಸ್ಥೆಯಲ್ಲ. ಸರ್ಕಾರದಿಂದ ಬರುವ ಹಣ ದುರ್ಬಳಕೆ ಆಗದಂತೆ ನೋಡಿಕೊಳ್ಳುವ ಉತ್ತರದಾಯಿತ್ವ ಪರಿಷತ್ತಿಗಿದೆ. ಚಿಕ್ಕಮಗಳೂರು ಸಮ್ಮೇಳನಕ್ಕೆ ಸಂಬಂಧಿಸಿದಂತೆ ನಾನು ಸಮ್ಮೇಳನ ಮುಂದೂಡುವಂತೆ ಆದೇಶಿಸಿದ್ದೆ. ಜಿಲ್ಲಾ ಘಟಕ ಅದಕ್ಕೆ ಒಪ್ಪಲಿಲ್ಲ. ಸಮ್ಮೇಳನದ ಅಧ್ಯಕ್ಷರನ್ನು ಬದಲಿಸುವಂತೆ ನಾನು ಹೇಳಿಲ್ಲ. ಅನುದಾನ ಬಿಡುಗಡೆ ಮಾಡುವುದು ಸರ್ಕಾರಕ್ಕೆ ಸಂಬಂಧಿಸಿದ ಸಂಗತಿ’ ಎಂದು ಹೇಳಿದರು.

 

MORE NEWS

ನಾಳೆಯಿಂದ ಮೂರು ದಿನಗಳ ಕಾಲ ಹಾವೇರಿಯಲ್ಲಿ ಅಕ್ಷರ ಜಾತ್ರೆ

05-01-2023 ಬೆಂಗಳೂರು

86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೆಳನಕ್ಕೆ ಹಾವೇರಿ ಸಜ್ಜಾಗಿದೆ. ಮೂರು ವರ್ಷಗಳ ನಂತರ ನಡೆಯುತ್ತಿರುವ ಮೂರು&n...

ಭಾರತ ಅಖಂಡವಾಗಿ ಉಳಿಯಲಿ- ಎಚ್‌ಎಸ್‌ವಿ ಆಶಯ

07-02-2020 ಕಲಬುರಗಿ

ಕಲಬುರಗಿ (ಶ್ರೀವಿಜಯ ಪ್ರಧಾನ ವೇದಿಕೆ) ಭಾರತವನ್ನು ಎರಡಾಗಿ ಒಡೆಯದೆ ಅಖಂಡವಾಗಿ ಉಳಿಸುವುದು ಎಲ್ಲರ ಕರ್ತವ್ಯ ಎಂದು ಸಮ...

ಶಾಸ್ತ್ರೀಯ ಸ್ಥಾನಮಾನ ಅನುಷ್ಠಾನ ನಿರ್ವಹಣೆಗೆ ಸಂಸ್ಥೆ- ಶೆಟ್ಟರ್ ಆಗ್ರಹ

06-02-2020 ಕಲಬುರಗಿ

ಕಲಬುರಗಿ (ಶ್ರೀವಿಜಯ ಪ್ರಧಾನ ವೇದಿಕೆ): ಕನ್ನಡಕ್ಕೆ ಬಹುಬೇಡಿಕೆಯ ಶಾಸ್ತ್ರೀಯ ಸ್ಥಾನಮಾನ ದೊರೆತರೂ ಅದರ ಅನುಷ್ಠಾನ ಹಾ...