ಹಿರಿಯ ಚಿಂತಕ, ಸಾಹಿತಿ ಕೆ. ಬಿ. ಸಿದ್ಧಯ್ಯ ಇನ್ನಿಲ್ಲ

Date: 18-10-2019

Location: ಬೆಂಗಳೂರು


ಕನ್ನಡದ ಪ್ರಮುಖ ಕವಿ, ಸಾಹಿತಿ, ಪ್ರಗತಿಪರ ಹೋರಾಟಗಾರ ಪ್ರೊ. ಕೆ ಬಿ. ಸಿದ್ಧಯ್ಯ ಶುಕ್ರವಾರ ಬೆಳಗಿನ ಜಾವ ನಿಧನರಾದರು. ಇಂಗ್ಲಿಷ್ ಪ್ರಾಧ್ಯಾಪಕರಾಗಿದ್ದ ಅವರು ಅನುಭಾವಿ ಚಿಂತಕರಾಗಿದ್ದರು. ಹದಿನೈದು ದಿನಗಳ ಹಿಂದೆ ಕಾರು ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿದ್ದರು. ಸಿದ್ಧಯ್ಯ ಅವರು ಇಂದು ಬೆಳಗಿನ ಜಾವ ಚಿರ ನಿದ್ರೆಗೆ ಜಾರಿದರು.

1970-80ರ ದಶಕದಲ್ಲಿ ದಲಿತ ಚಳವಳಿಗಳಲ್ಲಿ ಗುರುತಿಸಿಕೊಂಡಿದ್ದ ಅವರು ಬಕಾಲ, ದಕ್ಷಕಥಾದೇವಿ ಕಾವ್ಯ, ಅನಾತ್ಮ(ಕಾವ್ಯ) ನಾಲ್ಕು ಶ್ರೇಷ್ಠಸತ್ಯಗಳು (ಅನುವಾದ) ದಲಿತಕಾವ್ಯ (ಸಂಪಾದನೆ) ಕೃತಿಗಳನ್ನು ಪ್ರಕಟಿಸಿದ್ದಾರೆ. ಅವರಿಗೆ ಕರ್ನಾಟಕ ಸಾಹಿತ್ಯ ಅಕಾಡೆಮಿಯ ಗೌರವ ಪ್ರಶಸ್ತಿ (2004), ರಾಜ್ಯೋತ್ಸವ ಪ್ರಶಸ್ತಿಗಳು ಸಂದಿವೆ.

MORE NEWS

25 ಮಂದಿಗೆ ಕೆಯುಡಬ್ಲ್ಯುಜೆ ದತ್ತಿ ನಿಧಿ ಪ್ರಶಸ್ತಿ

28-03-2024 ಬೆಂಗಳೂರು

ಬೆಂಗಳೂರು: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದಿಂದ ಕೊಡಮಾಡುವ ಪ್ರಸಕ್ತ ಸಾಲಿನ ಕೆಯುಡಬ್ಲ್ಯುಜೆ ದತ್ತಿ ನಿಧಿ ಪ್ರಶಸ್...

ಖ್ಯಾತ ರಂಗ ನಿರ್ದೇಶಕ ಶ್ರೀ ಪಾದ ಭಟ್ ಗೆ 'ರಂಗ ಭೂಪತಿ' ಪ್ರಶಸ್ತಿ

28-03-2024 ಬೆಂಗಳೂರು

ಬೆಂಗಳೂರು: ಪ್ರಸಿದ್ಧ ನಾಟಕಕಾರರಾದ ದಿ.ಗೋಪಾಲ ವಾಜಪೇಯಿ ಅವರ ಹೆಸರಿನಲ್ಲಿ ಸ್ಥಾಪಿಸಲಾಗಿರುವ 'ರಂಗ ಭೂಪತಿ' ಪ್ರ...

ದಾವಣಗೆರೆಯ ಎಲ್ಲಾ ಭಾಷಾರಸಸ್ವಾದಗಳನ್ನು ಅಚ್ಚುಕಟ್ಟಾಗಿ ಕಟ್ಟಿಕೊಟ್ಟ ಕೃತಿಯಿದು; ಎಂ. ವಿ. ರೇವಣಸಿದ್ದಯ್ಯ

28-03-2024 ಬೆಂಗಳೂರು

ಬೆಂಗಳೂರು: ಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಅನಿವಾಸಿ ಲೇಖಕ ಶಿಕಾಗೋದ ರವಿ ಹಂಜ್ ಅವರ ಇಂಗ್ಲಿಷ್ ಕೃತಿ ...