ಎಚ್. ಟಿ. ಪೋತೆಗೆ ಕಡಣಿ ಸಾಹಿತ್ಯ ಸಮ್ಮೇಳನ ದತ್ತಿ ಪುರಸ್ಕಾರ

Date: 23-10-2020

Location: ವಿಜಯಪುರ


ವಿಜಯಪುರ ಜಿಲ್ಲೆಯ ಆಲಮೇಲ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಕೊಡಮಾಡುವ 2019ನೇ ಸಾಲಿನ 'ಕಡಣಿ ಸಾಹಿತ್ಯ ಸಮ್ಮೇಳನ ದತ್ತಿನಿಧಿ' ಪುರಸ್ಕಾರಕ್ಕೆ ಎಚ್. ಟಿ. ಪೋತೆ ಅವರ `ಮಾದನ ಕರೆಂಟ್ ಕತಂತ್ರ’ ಕೃತಿ ಆಯ್ಕೆಯಾಗಿದೆ.

ಪ್ರಶಸ್ತಿಯು 5000 ರೂ. ನಗದು ಮತ್ತು ಪ್ರಶಸ್ತಿ ಪತ್ರವನ್ನು ಒಳಗೊಂಡಿದ್ದು ನವೆಂಬರ್ ಮೊದಲ ವಾರದಲ್ಲಿ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು. ಚೆನ್ನಪ್ಪಕಟ್ಟಿ ಅವರ ಅಧ್ಯಕ್ಷತೆಯಲ್ಲಿ ನಡೆದ ಆಯ್ಕೆ ಸಮಿತಿಯಲ್ಲಿ ಸಿದ್ದರಾಮ ಉಪ್ಪಿನ ಹಾಗೂ ಕಸಾಪ ಜಿಲ್ಲಾ ಅಧ್ಯಕ್ಷ ಮಲ್ಲಿಕಾರ್ಜುನ ಯಂಡಿಗೇರಿ ಉಪಸ್ಥಿತರಿದ್ದರು ಎಂದು ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ರಮೇಶ್ ಕಟ್ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಎಚ್. ಟಿ. ಪೋತೆ ಅವರ ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ

MORE NEWS

ಕುವೆಂಪು ಪರಿಸರದಲ್ಲಿ ದೇವರನ್ನ ಕಂಡರೆ, ರಾಜ್‌ಕುಮಾರ್‌ ಅಭಿಮಾನಿಗಳಲ್ಲಿ ದೇವರನ್ನ ಕಂಡರು: ಬರಗೂರು

18-04-2024 ಬೆಂಗಳೂರು

ಬೆಂಗಳೂರು: ರಾಷ್ಟ್ರಕವಿ ಕುವೆಂಪು ಅವರೇ ನನ್ನ ವಿಶ್ವ ಮಾನವ ಸಂದೇಶವನ್ನು ಜನರಿಗೆ ತಲುಪಿಸುವ ಶಕ್ತಿ ಇರುವುದು ರಾಜ್&zwnj...

ಹಾಸನ ಸಂಸ್ಕೃತ ಭವನದಲ್ಲಿ ವಿಶ್ವ ಕಲಾ ದಿನಾಚರಣೆ, ಚಿತ್ರಕಲಾ ಪ್ರದರ್ಶನ ಸ್ಫರ್ಧೆ

18-04-2024 ಬೆಂಗಳೂರು

ಕಲೆಗೆ ಗೌರವವನ್ನು ವ್ಯಕ್ತಪಡಿಸಲು ವಿಶ್ವ ಕಲಾ ದಿನವನ್ನು ಆಚರಿಸಲಾಗುತ್ತಿದೆ. ವಿಶ್ವ ಕಲಾ ದಿನವು ಸಮಾಜದಲ್ಲಿ ಕಲೆಯ ಪ್ರಾ...

ತನುಶ್ರೀ ಸಾಹಿತ್ಯ ವೇದಿಕೆಯಿಂದ ಕವಿಗೋಷ್ಠಿಗೆ ಕವನಗಳ ಆಹ್ವಾನ

16-04-2024 ಬೆಂಗಳೂರು

ಚಿತ್ರದುರ್ಗ: ತನುಶ್ರೀ ಸಾಹಿತ್ಯ, ಸಾಂಸ್ಕೃತಿಕ ಕಲಾ ವೇದಿಕೆಯಿಂದ ರಾಜ್ಯ ಮಟ್ಟದ ಕವಿಗೋಷ್ಠಿಗೆ ಕವನಗಳನ್ನು ಆಹ್ವಾನಿಸಲಾಗ...