ಇಂದಿನಿಂದ ಕೆರೆಮನೆ ಶಂಭು ಹೆಗಡೆ ರಾಷ್ಟ್ರೀಯ ನಾಟ್ಯೋತ್ಸವ

Date: 03-02-2023

Location: Bangalore


ಕೆರೆಮನೆ ಶಂಭು ಹೆಗಡೆ ಯಕ್ಷರಂಗದ ಅಭಿಜಾತ ಕಲಾವಿದರಾಗಿ ಯಕ್ಷಗಾನ ಕಲೆಗೆ ವಿಶ್ವವ್ಯಾಪ್ತಿ ಪಸರಿಸಿದವರು. ಪುರುಷ ಸ್ತ್ರೀ ವೇಷಗಳೂ ಸೇರಿದಂತೆ ಸುಮಾರು 175 ಪಾತ್ರಗಳಲ್ಲಿ, 5000ಕ್ಕೂ ಹೆಚ್ಚು ವಿಶ್ವದಾದ್ಯಂತ ಪ್ರದರ್ಶನಗಳನ್ನು ನೀಡಿದ್ದಾರೆ. ಇದೀಗ ಕೆರೆಮನೆ ಶಂಭು ಹೆಗಡೆ ರಾಷ್ಟ್ರೀಯ ನಾಟ್ಯೋತ್ಸವ-13 ಫೆಬ್ರವರಿ 03 ರಿಂದ 07 ರವರೆಗೆ ಐದು ದಿನಗಳ ಕಾಲ ನಡೆಯಲಿದೆ.

ನಾಟ್ಯೋತ್ಸವದ ಮೊದಲ ದಿನ ಫೆಬ್ರವರಿ 3 ರಂದು ಸಂಜೆ 4.30ಕ್ಕೆ ಚಿತ್ರಾಪುರ ಮಠಾಧೀಶ ಶ್ರೀ ಸದ್ಯೋಜಾತ ಶಂಕರಾಶ್ರಮ ಸ್ವಾಮೀಜಿ, ಕನ್ನಡ ಮತ್ತು ಸಂಸ್ಕೃತಿ ಹಾಗೂ ಇಂಧನ ಇಲಾಖೆ ಸಚಿವ ವಿ. ಸುನೀಲ್‌ ಕುಮಾರ್ ಕಾರ್ಯಕ್ರಮ‌ ಉದ್ಘಾಟಿಸಿಸಲಿದ್ದಾರೆ. ರಂಗಭೂಮಿ ಹಿರಿಯ ಕಲಾವಿದ ಅನಂತ ನಾಗ್ ಅವರಿಗೆ “ಕೆರೆಮನೆ ಶಿವರಾಮ ಹೆಗಡೆ ರಾಷ್ಟ್ರೀಯ ಪ್ರಶಸ್ತಿ-2021″ ಪ್ರದಾನ ಮಾಡಲಾಗುವುದು. ಸಂಸದ ನಳೀನ್ ಕುಮಾರ್ ಕಟೀಲು ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಮಂಡಳಿ ವತಿಯಿಂದ ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ, ಸಚಿವ ಕೋಟ ಶ್ರೀನಿವಾಸ ಪೂಜಾರಿ ಯಕ್ಷಗಾನ ಕಲಾವಿದ ಡಾ.ಎಂ. ಪ್ರಭಾಕರ ಜೋಶಿ ಅವರುಗಳಿಗೆ ವಿಶೇಷ ಸನ್ಮಾನ ಕಾರ್ಯಕ್ರಮ ನಡೆಯಲಿದೆ

ಈ ನಾಟ್ಯೋತ್ಸವದಲ್ಲಿ ನಟ ಅನಂತ ಭಟ್ಟ ಹುಳಗೋಳ, ಬರಹಗಾರ ಎಂ.ಕೆ. ಭಾಸ್ಕರ ರಾವ್, ಶಾಸಕ ಸುನೀಲ ನಾಯ್ಕ, ಪತ್ರಕರ್ತ ಬಿ. ಗಣಪತಿ, ಉಡುಪಿಯ ಶಾಸಕ ರಘುಪತಿ ಭಟ್, ಕ್ಯಾಂಪ್ಕೋ ಅಧ್ಯಕ್ಷ ಕಿಶೋರ್‌ಕುಮಾರ ಕೊಡಗಿ, ಪತ್ರಕರ್ತ ಹರಿಪ್ರಕಾಶ ಕೋಣೆಮನೆ, ಡಿಸಿ ಪ್ರಭುಲಿಂಗ ಕವಳಿಕಟ್ಟಿ, ಪಶ್ಚಿಮ ಘಟ್ಟಗಳ ಸಂರಕ್ಷಣಾ ಕಾರ್ಯಪಡೆ ಅಧ್ಯಕ್ಷ ಗೋವಿಂದ ನಾಯ್ಕ, ಬರಹಗಾರ ರೋಹಿತ್ ಚಕ್ರತೀರ್ಥ, ಸಾಂಸ್ಕೃತಿಕ ಚಿಂತಕ ನಾರಾಯಣ ಯಾಜಿ, ಮಾಜಿ ಶಾಸಕ ಮಂಕಾಳ ವೈದ್ಯ, ಸಾಹಿತಿ ರೋಹಿದಾಸ ಮತ್ತಿತರರು ಈ ಐದು ದಿನಗಳ ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿದ್ದಾರೆ.

ಕು.ಶ್ವೇತಾ ರಾಮ ಗೌಡ, ಎಂ.ಎ ಕನ್ನಡ ವಿಭಾಗದ ಸಂಶೋಧನಾ ಪತ್ರಿಕೆಯಲ್ಲಿ ಅಧ್ಯಯನ ಮಾಡಿ "ಯಕ್ಷಗಾನ ರಂಗಕರ್ಮಿ ಕೆರೆಮನೆ ಶಂಭು ಹೆಗಡೆ" ಎಂಬ ವಿಷಯದ ಕಿರುಪ್ರಬಂಧವನ್ನು ಕರ್ನಾಟಕ ವಿಶ್ವವಿದ್ಯಾಲಯ ಧಾರವಾಡದಲ್ಲಿ ಮಂಡಿಸಿ ಚಿನ್ನದ ಪದಕ ಪಡೆದಿರುವುದು ವಿಶೇಷ.

MORE NEWS

25 ಮಂದಿಗೆ ಕೆಯುಡಬ್ಲ್ಯುಜೆ ದತ್ತಿ ನಿಧಿ ಪ್ರಶಸ್ತಿ

28-03-2024 ಬೆಂಗಳೂರು

ಬೆಂಗಳೂರು: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದಿಂದ ಕೊಡಮಾಡುವ ಪ್ರಸಕ್ತ ಸಾಲಿನ ಕೆಯುಡಬ್ಲ್ಯುಜೆ ದತ್ತಿ ನಿಧಿ ಪ್ರಶಸ್...

ಖ್ಯಾತ ರಂಗ ನಿರ್ದೇಶಕ ಶ್ರೀ ಪಾದ ಭಟ್ ಗೆ 'ರಂಗ ಭೂಪತಿ' ಪ್ರಶಸ್ತಿ

28-03-2024 ಬೆಂಗಳೂರು

ಬೆಂಗಳೂರು: ಪ್ರಸಿದ್ಧ ನಾಟಕಕಾರರಾದ ದಿ.ಗೋಪಾಲ ವಾಜಪೇಯಿ ಅವರ ಹೆಸರಿನಲ್ಲಿ ಸ್ಥಾಪಿಸಲಾಗಿರುವ 'ರಂಗ ಭೂಪತಿ' ಪ್ರ...

ದಾವಣಗೆರೆಯ ಎಲ್ಲಾ ಭಾಷಾರಸಸ್ವಾದಗಳನ್ನು ಅಚ್ಚುಕಟ್ಟಾಗಿ ಕಟ್ಟಿಕೊಟ್ಟ ಕೃತಿಯಿದು; ಎಂ. ವಿ. ರೇವಣಸಿದ್ದಯ್ಯ

28-03-2024 ಬೆಂಗಳೂರು

ಬೆಂಗಳೂರು: ಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಅನಿವಾಸಿ ಲೇಖಕ ಶಿಕಾಗೋದ ರವಿ ಹಂಜ್ ಅವರ ಇಂಗ್ಲಿಷ್ ಕೃತಿ ...