ಜನತೆ, ಮಮತೆ, ಸಮತೆ ಗೌರವಿಸುವ ವ್ಯಕ್ತಿತ್ವ ವೃದ್ಧಿಗೆ ಬರಗೂರು ಸಲಹೆ

Date: 04-04-2021

Location: ಬೆಂಗಳೂರು


ಜನತೆ, ಮಮತೆ ಹಾಗೂ ಸಮತೆಯನ್ನು ಗೌರವಿಸುವ ವ್ಯಕ್ತಿತ್ವ ಬೆಳೆಸಿಕೊಳ್ಳಬೇಕು ಎಂದು ಹಿರಿಯ ಸಾಹಿತಿ ಪ್ರೊ. ಬರಗೂರು ರಾಮಚಂದ್ರಪ್ಪ ಹೇಳಿದರು.

ಅಖಿಲ ಕರ್ನಾಟಕ ಕುವೆಂಪು ಸಾಂಸ್ಕೃತಿಕ ವೇದಿಕೆ ಸಹಯೋಗದಲ್ಲಿ 'ಜೀವನ್ಮುಖಿ' ಪತ್ರಿಕೆಯ ದಶಮಾನೋತ್ಸವ, ಜೀವನ್ಮುಖಿ ವಾರ್ಷಿಕ ಪ್ರಶಸ್ತಿ ಪ್ರದಾನ, ವಿಶೇಷ ಸ್ಮರಣ ಸಂಚಿಕೆ ಲೋಕಾರ್ಪಣೆ ಹಾಗೂ ಪ್ರತಿಭಾವಂತ ಮಕ್ಕಳನ್ನು ಪುರಷ್ಕರಿಸಲು ನಗರದ ರವೀಂದ್ರ ಕಲಾಕ್ಷೇತ್ರದ ಕನ್ನಡ ಭವನದಲ್ಲಿಯ ನಯನ ಸಭಾಂಗಣದಲ್ಲಿ ಭಾನುವಾರ ಆಯೋಜಿಸಿದ್ದ ಸಮಾರಂಭದಲ್ಲಿ ಅವರು ಜೀವನ್ಮುಖಿ ವಾರ್ಷಿಕ ಪ್ರಶಸ್ತಿ ಸ್ವೀಕರಿಸಿ ಮಾತನಾಡಿದರು.

ಬದುಕಿನ ಘನತೆ ಹಾಗೂ ಗೌರವಗಳ ಸೂಚಕವಾಗಿ ಮಾನವೀಯ ಮೌಲ್ಯಗಳು ಮುಖ್ಯವಾಗುತ್ತವೆ. ಎಲ್ಲ ಜಾತಿ-ವರ್ಗದ ಜನರೊಂದಿಗೆ, ಮಮತೆಯಿಂದ ಇದ್ದು, ತಾರತಮ್ಯ ಮಾಡದೇ ಸಮಾನವಾಗಿ ಕಾಣುವ ಬದುಕು ಸಾರ್ಥಕತೆ ಪಡೆಯುತ್ತದೆ. ಮರ್ಯಾದೆಯಿಂದ ಬದುಕುವುದು ಎಂದರೆ ಮಾನವೀಯ ಮೌಲ್ಯಗಳನ್ನು ಅಳವಡಿಸಿಕೊಳ್ಳುವುದು ಆಗಿದೆ ಎಂದರು.

ಪ್ರಶಸ್ತಿ ಪುರಸ್ಕೃತರಾದ ಜಿಎಸ್ ಟಿ ಕಮಿಷನರ್ ಆರ್. ಭಾಗ್ಯದೇವಿ ಮಾತನಾಡಿ, ಹಿರಿಯರನ್ನು ಗೌರವಿಸುವ ಸಂಸ್ಕೃತಿಯಿಂದ ಆರೋಗ್ಯವಂತ ಸಮಾಜದ ನಿರ್ಮಾಣವೂ ಸಾಧ್ಯವಾಗುತ್ತದೆ ಎಂದು ಅಭಿಪ್ರಾಯಪಟ್ಟರೆ, ಮತ್ತೋರ್ವ ಪ್ರಶಸ್ತಿ ಪುರಸ್ಕೃತ ಹಾಗೂ ಚಿಂತಕ ಬಿ. ಕೃಷ್ಣಪ್ಪ ಮಾತನಾಡಿ ‘ಸಮಾಜದ ಮುಖ್ಯ ವಾಹಿನಿಯಿಂದ ದೂರ ಉಳಿದವರಿಗೆ ಎಲ್ಲ ರೀತಿಯ ಸೌಲಭ್ಯಗಳನ್ನು ನೀಡುವ ಮೂಲಕ ಸಮಾಜ ಸೇವೆಗೆ ಮುಂದಾಗಬೇಕಿದೆ. ಅದು ಜೀವನ ಸಂತೃಪ್ತಿಗೂ ಕಾರಣವಾಗುತ್ತದೆ ಎಂದು ಹೇಳಿದರು. ಬೆಂಗಳೂರು ಪಶ್ಚಿಮ ವಿಭಾಗ ಉಪ ಪೊಲೀಸ್ ಆಯುಕ್ತ ಸಂಜೀವ ಎಂ. ಪಾಟೀಲ್ ಪ್ರಶಸ್ತಿ ಸ್ವೀಕರಿಸಿದರು.

ಹಿರಿಯ ಸಂಶೋಧಕ -ಸಾಹಿತಿ ಹಂಪ ನಾಗರಾಜಯ್ಯ ಮಾತನಾಡಿ ‘ಓದುವ ಹವ್ಯಾಸ ಬೆಳೆಸಿಕೊಳ್ಳಬೇಕು ಎಂದು ಸಲಹೆ ನೀಡಿದರು. ನಿವೃತ್ತ ನ್ಯಾಯಮೂರ್ತಿ ಎ.ಜೆ. ಸದಾಶಿವ ಸಮಾರಂಭ ಉದ್ಘಾಟಿಸಿದರು. ಜೀವನ್ಮುಖಿ ಪತ್ರಿಕೆಯ ದಶಮಾನೋತ್ಸವ ಪ್ರಯುಕ್ತ ಪ್ರಕಟಿಸಲಾದ ವಿಶೇಷ ಸ್ಮರಣ ಸಂಚಿಕೆಯನ್ನು ಬೆಂಗಳೂರು ಪೂರ್ವ ವಿಭಾಗದ ಉಪ ಪೊಲೀಸ್ ಆಯುಕ್ತ ಎಸ್. ಡಿ. ಶರಣಪ್ಪ ಬಿಡುಗಡೆ ಮಾಡಿದರು.

ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ನಿಕಟಪೂರ್ವ ಅಧ್ಯಕ್ಷ ಎಚ್.ಕೆ. ರಾಮು ಅಧ್ಯಕ್ಷತೆವಹಿಸಿದ್ದರು. ಟಿ.ಸತೀಶ್ ಜವರೇಗೌಡ ಅಭಿನಂದನಾ ನುಡಿಗಳನ್ನಾಡಿದರು. ಜೀವನ್ಮುಕ್ತಿ ಕನ್ನಡ ಪಾಕ್ಷಿಕದ ಸಂಪಾದಕ ಟಿ. ಸುರೇಶ್ ಸೇರಿದಂತೆ ಸಾಹಿತ್ಯಾಸಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು.

MORE NEWS

ಕುವೆಂಪು ಪರಿಸರದಲ್ಲಿ ದೇವರನ್ನ ಕಂಡರೆ, ರಾಜ್‌ಕುಮಾರ್‌ ಅಭಿಮಾನಿಗಳಲ್ಲಿ ದೇವರನ್ನ ಕಂಡರು: ಬರಗೂರು

18-04-2024 ಬೆಂಗಳೂರು

ಬೆಂಗಳೂರು: ರಾಷ್ಟ್ರಕವಿ ಕುವೆಂಪು ಅವರೇ ನನ್ನ ವಿಶ್ವ ಮಾನವ ಸಂದೇಶವನ್ನು ಜನರಿಗೆ ತಲುಪಿಸುವ ಶಕ್ತಿ ಇರುವುದು ರಾಜ್&zwnj...

ಹಾಸನ ಸಂಸ್ಕೃತ ಭವನದಲ್ಲಿ ವಿಶ್ವ ಕಲಾ ದಿನಾಚರಣೆ, ಚಿತ್ರಕಲಾ ಪ್ರದರ್ಶನ ಸ್ಫರ್ಧೆ

18-04-2024 ಬೆಂಗಳೂರು

ಕಲೆಗೆ ಗೌರವವನ್ನು ವ್ಯಕ್ತಪಡಿಸಲು ವಿಶ್ವ ಕಲಾ ದಿನವನ್ನು ಆಚರಿಸಲಾಗುತ್ತಿದೆ. ವಿಶ್ವ ಕಲಾ ದಿನವು ಸಮಾಜದಲ್ಲಿ ಕಲೆಯ ಪ್ರಾ...

ತನುಶ್ರೀ ಸಾಹಿತ್ಯ ವೇದಿಕೆಯಿಂದ ಕವಿಗೋಷ್ಠಿಗೆ ಕವನಗಳ ಆಹ್ವಾನ

16-04-2024 ಬೆಂಗಳೂರು

ಚಿತ್ರದುರ್ಗ: ತನುಶ್ರೀ ಸಾಹಿತ್ಯ, ಸಾಂಸ್ಕೃತಿಕ ಕಲಾ ವೇದಿಕೆಯಿಂದ ರಾಜ್ಯ ಮಟ್ಟದ ಕವಿಗೋಷ್ಠಿಗೆ ಕವನಗಳನ್ನು ಆಹ್ವಾನಿಸಲಾಗ...