ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಚಂದ್ರಶೇಖರ ಕಂಬಾರರ ಪತ್ನಿ ಸತ್ಯಭಾಮ ಕಂಬಾರ ಇನ್ನಿಲ್ಲ

Date: 18-01-2022

Location: ಬೆಂಗಳೂರು


ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಚಂದ್ರಶೇಖರ ಕಂಬಾರರ ಪತ್ನಿ ಸತ್ಯಭಾಮ ಕಂಬಾರ ಅವರು ಜನವರಿ 18 ಮಂಗಳವಾರದಂದು ಹೃದಯ ಸಂಬಂಧಿ ಖಾಯಿಲೆಯಿಂದ ಬೆಂಗಳೂರಿನ ಜಯದೇವ ಆಸ್ಪತ್ರೆಯಲ್ಲಿ ವಿಧಿವಶರಾಗಿದ್ದಾರೆ.

ಸತ್ಯಭಾಮ ಕಂಬಾರ ಅವರು ಹೃದಯ ಸಂಬಂಧಿ ಖಾಯಿಲೆಯಿಂದಾಗಿ 2022 ಜನವರಿ 3 ಸೋಮವಾರದಂದು ಬೆಂಗಳೂರಿನ ಜಯದೇವ ಹೃದ್ರೋಗ ಆಸ್ಪತ್ರೆಗೆ ದಾಖಲಾಗಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಇಂದು ಬೆಳಗ್ಗೆ ನಿಧನರಾಗಿದ್ದಾರೆ. ಅವರ ಪ್ರಾರ್ಥಿವ ಶರೀರವನ್ನು ಕತ್ರಿಗುಪ್ಪೆಯ ಸಿರಿ ಸಂಪಿಗೆ ಮನೆಯಲ್ಲಿ ಬೆಳಗ್ಗೆ 9.30ರಿಂದ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.

ಸತ್ಯಭಾಮ ಕಂಬಾರ ಅವರ ಹಿನ್ನೆಲೆ : ಸತ್ಯಭಾಮ ಕಂಬಾರ ಅವರು1945 ಮೇ 22 ರಂದು ಬೆಳಗಾಂ ಜಿಲ್ಲೆಯ ಅಕ್ಕತಂಗೇರಹಾಳ್ ಎಂಬ ಹಳ್ಳಿಯಲ್ಲಿ ಜನಿಸಿದರು. ತಂದೆ ಕಾಶಪ್ಪ ಬಡಿಗೇರ್, ತಾಯಿ ಯಮುನಪ್ಪ.

 

 

MORE NEWS

ಹಿರಿಯ ಪತ್ರಕರ್ತ ಅರ್ಜುನ್ ದೇವ್ ನಿಧನ

24-04-2024 ಬೆಂಗಳೂರು

ಹಿರಿಯ ಪತ್ರಕರ್ತರು, ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ ಮಾಜಿ ಅಧ್ಯಕ್ಷ ಎನ್. ಅರ್ಜುನ್ ದೇವ್ (92) ಅವರು ಕೆಂಗೇರಿ...

ಪುಸ್ತಕ ಸಂಸ್ಕೃತಿ ಬೆಳೆಸುವುದು ಸಾಮಾಜಿಕ ನ್ಯಾಯದ ಭಾಗ ಅಂತ ಸರ್ಕಾರಗಳು ಭಾವಿಸಬೇಕು: ಬರಗೂರು

23-04-2024 ಬೆಂಗಳೂರು

ಬೆಂಗಳೂರು: ನಿಜವಾದ ಪುಸ್ತಕ ಪ್ರೀತಿ ಬೆಳೆಯ ಬೇಕಿರುವುದು, ಉಳಿಯ ಬೇಕಿರುವುದು ಮುಂದಿನ ಪೀಳಿಗೆಯಿಂದ, ಆ ಮುಂದಿನ ಪೀ...

ಪ್ರಕಾಶನ ಸಂಸ್ಥೆಯನ್ನು ತೆರೆದಿರುವ ಪ್ರಕಾಶಕರೆಲ್ಲರೂ ಹುಚ್ಚರೇ; ಕೆ.ಎನ್. ಗಣೇಶಯ್ಯ

23-04-2024 ಬೆಂಗಳೂರು

ಪುಸ್ತಕಗಳನ್ನು ಕೊಂಡುಕೊಂಡು ಓದುವವರ ಪ್ರಮಾಣ ಕಡಿಮೆಯೂ ಆಗಿಲ್ಲ ಹೆಚ್ಚು ಕೂಡ ಆಗಿಲ್ಲ. ಬಹುಶಃ ಪುಸ್ತಕವನ್ನು ಓದಬೇಕು ಅನ್...