ಕ.ಸಾ.ಪ.ದಿಂದ 2020-21ನೇ ಸಾಲಿನ ಕನ್ನಡ ಪ್ರವೇಶ, ಕಾವ, ಜಾಣ, ರತ್ನ ಪರೀಕ್ಷೆಗಳಿಗೆ ಅರ್ಜಿ ಆಹ್ವಾನ

Date: 30-06-2020

Location: ಬೆಂಗಳೂರು


ಕನ್ನಡ ಸಾಹಿತ್ಯ ಪರಿಷತ್ತು 2020-21ನೇ ಸಾಲಿನ ಕನ್ನಡ ಪ್ರವೇಶ, ಕಾವ, ಜಾಣ, ರತ್ನ ಪರೀಕ್ಷೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿದೆ. 2020ರ ಡಿಸೆಂಬರ್ ಕೊನೆಯ ವಾರದಲ್ಲಿ ನಡೆಯುವ ಪರೀಕ್ಷೆಗಳಿಗೆ ಅರ್ಜಿ ಸಲ್ಲಿಸಲು ಆಗಸ್ಟ್ 31 ಕೊನೆಯ ದಿನಾಂಕ. ಸೆಪ್ಟೆಂಬರ್ 15ರವರೆಗೆ ದಂಡ ಶುಲ್ಕ 50 ರೂ.ಗಳನ್ನು ಹೆಚ್ಚುವರಿಯಾಗಿ ನೀಡಿ ಅರ್ಜಿ ಸಲ್ಲಿಸಬಹುದು. 25 ರೂ. ಶುಲ್ಕ ಪಾವತಿಸಿ ಪರೀಕ್ಷಾ ನಿಯಮಾವಳಿ ಹಾಗೂ ಅರ್ಜಿಯನ್ನು ಕನ್ನಡ ಸಾಹಿತ್ಯ ಪರಿಷತ್ತಿನ ಮಾರಾಟ ಮಳಿಗೆಯಲ್ಲಿ(ಬೆಂಗಳೂರು) 2020 ರ ಜುಲೈ 1 ರಿಂದ ಪಡೆಯಬಹುದು.

ಕನ್ನಡ ಸಾಹಿತ್ಯ ಪರಿಷತ್ತಿನ ಹೆಸರಿಗೆ 30 ರೂ. ಗಳನ್ನು ಮನಿಯಾರ್ಡರ್ ಮಾಡಿದರೆ ಅರ್ಜಿಯನ್ನು ಅಂಚೆ ಮೂಲಕ ಕಳುಹಿಸಲಾಗುವುದು. ಪರೀಕ್ಷಾ ಅರ್ಜಿಗಳನ್ನು ಅಂತರ್ಜಾಲ ತಾಣ www.kasapa.in ಮೂಲಕ ಸಹ ಪಡೆಯಬಹುದು. ಪರೀಕ್ಷಾ ಶುಲ್ಕದೊಂದಿಗೆ ಅರ್ಜಿ ಶುಲ್ಕ 25  ರೂ.ಗಳನ್ನು ಪ್ರತ್ಯೇಕವಾಗಿ ಪಾವತಿಸುವುದು.

MORE NEWS

ಎಸ್.ಜ್ಯೋತಿ ಅವರ ‘ಅತ್ತೆ ನಿಮಗೊಂದು ಪ್ರಶ್ನೆ’ ಪುಸ್ತಕ ಬಿಡುಗಡೆ ಸಮಾರಂಭ

19-03-2024 ಬೆಂಗಳೂರು

ತುಮಕೂರು: ಪುರಾಣ ಕಾವ್ಯ ಬೇರೆ, ಪುರಾಣ ಶಾಸ್ತ್ರ ಬೇರೆ. ಪುರಾಣ ಶಾಸ್ತ್ರಗಳು ವಾಚ್ಯಾರ್ಥವಾದರೆ, ಪುರಾಣ ಕಾವ್ಯಗಳು ಧ್ವನ್...

ಕನ್ನಡ-ಕರ್‍ನಾಟಕಗಳಿಗೆ ಸಂಬಂದಿಸಿದ ಸಂಶೋದನಾ ಪ್ರಬಂದಗಳಿಗೆ ಆಹ್ವಾನ

17-12-2023 ಬೆಂಗಳೂರು

ಮಸ್ಕಿ: ಬಂಡಾರ ಪ್ರಕಾಶನವು `ಕನ್ನಡ ಆರಯ್ಪು-2023' ಸಲುವಾಗಿ ಕನ್ನಡ-ಕರ್‍ನಾಟಕಗಳಿಗೆ ಸಂಬಂದಿಸಿದ ಸಂಶೋದನಾ ಪ್ರ...

ಸಾಂಸ್ಕೃತಿಕ ಸಂವಿಧಾನದ ಅರಿವು ಅಗತ್ಯ : ಪ್ರೊ.ನಟರಾಜ ಬೂದಾಳು

06-12-2023 ಬೆಂಗಳೂರು

ಕಲಬುರಗಿ: ಗುಲಬರ್ಗಾ ವಿಶ್ವವಿದ್ಯಾಲಯ ಕನ್ನಡ ಅಧ್ಯಯನ ಸಂಸ್ಥೆ, ಶ್ರೀ ಸಿದ್ಧಲಿಂಗೇಶ್ವರ ಪ್ರಕಾಶನ ಕಲಬುರಗಿ ಮತ್ತು ಜನ ಪ್...